ಚಿತ್ರದುರ್ಗ | ಭಾರತ ಪಾಕಿಸ್ತಾನ ಮಧ್ಯೆ ಪ್ರಕ್ಷುಬ್ಧ ವಾತಾವರಣ, ವಾಣಿ ವಿಲಾಸ ಜಲಾಶಯಕ್ಕೆ ಪ್ರವೇಶ ನಿರ್ಬಂಧ.

Date:

ಭಾರತ-ಪಾಕಿಸ್ಥಾನ ಮಧ್ಯೆ ಪ್ರತೀಕಾರ, ಪ್ರತಿದಾಳಿಗಳು ನೆಡೆದಿರುವ ಪ್ರಕ್ಷುಬ್ಧ ವಾತಾವರಣ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಸರ್ಕಾರದಿಂದ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರತೆ ಒದಗಿಸಲು ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ವಿಶ್ವೇಶ್ವರಯ್ಯ ಜಲ ನಿಗಮದಿಂದ ಪೊಲೀಸ್‌ ಇಲಾಖೆಗೆ ಮನವಿ ಮಾಡಲಾಗಿದೆ.

- Advertisement -
1001971486

ಪ್ರಸ್ತುತ ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುರಕ್ಷತೆ ದೃಷ್ಟಿಯಿಂದ ಅಣೆಕಟ್ಟು, ಜಲಾಶಯಗಳಿಗೆ ಬಿಗಿಭದ್ರತೆ ಒದಗಿಸಲು ಸೂಚನೆ ನೀಡಿವೆ. ಇದರ ಭಾಗವಾಗಿ ಹಿರಿಯೂರು ಬಳಿಯ ವಾಣಿ ವಿಲಾಸ ಸಾಗರಕ್ಕೆ ಭದ್ರತೆ ಒದಗಿಸಿದ್ದು, ಸಾರ್ವಜನಿಕರ ಪ್ರವೇಶ ಸೇರಿದಂತೆ ಎಲ್ಲರ ಪ್ರವೇಶ ನಿರ್ಬಂಧಿಸಲಾಗಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಿವಿ ಸಾಗರದ ಮುಂಬಾಗದ ಗೇಟ್ನಲ್ಲಿ “ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಜಲಾಶಯದ ಭದ್ರತೆಗಾಗಿ ಪ್ರವೇಶ ನಿಷೇಧಿಸಲಾಗಿದೆ” ಎಂದು ಫಲಕ ಹಾಕಲಾಗಿರುವ ಕಾರಣ ಸಾರ್ವಜನಿಕರು ಪ್ರವೇಶಿಸುವ ಗೇಟ್‌ ಬಂದ್‌ ಮಾಡಲಾಗಿದೆ.‌ ವಿಐಪಿ ಗೇಟ್‌ ಕೂಡ ಸೇರಿದಂತೆ ಎಲ್ಲವನ್ನೂ ಬಂದ್‌ ಮಾಡಿ, ಇಡೀ ಜಲಾಶಯಕ್ಕೆ ಭದ್ರತೆ ಒದಗಿಸಲಾಗಿದೆ.

1001971488

ಈ ಸಂಬಂಧ ಈದಿನ ಡಾಟ್ ಕಾಮ್ ಗೆ ಪ್ರತಿಕ್ರಿಯಿಸಿದ ಸಹಾಯಕ ಕಾರ್ಯಪಾಲಕ ಅಭಿಯಂತರ ಜಯಕುಮಾರ್, “ದೇಶದಲ್ಲಿ ನೆಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದ ಮೇರೆಗೆ ಜಲಾಶಯಕ್ಕೆ ಭದ್ರತೆ ದೃಷ್ಟಿಯಿಂದ ಎಲ್ಲರಿಗೂ ಪ್ರವೇಶ ನಿರ್ಬಂಧಿಸಿದೆ. ಸೂಕ್ತ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಪರಿಸ್ಥಿತಿ ತಿಳಿಯಾಗುವವರೆಗೂ, ಸರ್ಕಾರ, ಇಲಾಖೆಯ ಮುಂದಿನ ಆದೇಶದವರೆಗೂ ಪ್ರವೇಶಕ್ಕೆ ನಿರ್ಬಂಧ ಮುಂದುವರೆಯುತ್ತದೆ” ಎಂದು ತಿಳಿಸಿದ್ದಾರೆ..

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾಣೇಹಳ್ಳಿ ತರಳಬಾಳು ಮಠದಲ್ಲಿ ಬಸವಾದಿ ಶರಣರ ವಚನಗಳ ರಾಜ್ಯ ಮಟ್ಟದ ಸ್ಪರ್ಧೆ.

ವಾಣಿ ವಿಲಾಸ ಸಾಗರ ಜಲಾಶಯವು ಚಿತ್ರದುರ್ಗ ಜಿಲ್ಲೆಯ ಕುಡಿಯುವ ನೀರಿನ ಸೌಲಭ್ಯದ ಜೀವನಾಡಿಯಾಗಿದೆ. ಚಿತ್ರದುರ್ಗ, ಹಿರಿಯೂರು ಸೇರಿದಂತೆ ಹಲವು ನಗರ ಪ್ರದೇಶಗಳಿಗೆ ಕುಡಿಯುವ ನೀರಿನ ಯೋಜನೆಗೆ ವಿವಿ ಸಾಗರ ಜಲಾಶಯವು ಆಶ್ರಯವಾಗಿದೆ. ಹಿರಿಯೂರು ಹೊಸದುರ್ಗ, ಚಳ್ಳಕೆರೆ ತಾಲೂಕಿನ ಹಲವು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ, ಕೃಷಿಗೆ ನೀರುಣಿಸುವ ಮೂಲಾಧಾರವಾಗಿದೆ. ಬರದ ನಾಡು, ಬಯಲು ನಾಡು ಎಂದೇ ಹೆಸರಾಗಿರುವ ಚಿತ್ರದುರ್ಗದ ಏಕಮಾತ್ರ ನೀರಿನ ಆಧಾರವಾಗಿರುವ 118 ವರ್ಷದ ಹಳೆಯ ವಿವಿ ಜಲಾಶಯ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಹಲವು ಗ್ರಾಮಗಳಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. 130ಅಡಿ ಎತ್ತರದ, 30.44 ಟಿಎಂಸಿ ನೀರು ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 127 ಅಡಿಗಳಷ್ಟು ನೀರು ಸಂಗ್ರಹವಾಗಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು...

ಹಿರಿಯೂರು | ಬೈ-ಎಲೆಕ್ಷನ್ ಪೈಪೋಟಿ: ಮೈತ್ರಿಕೂಟದಲ್ಲಿ ಟಿಕೆಟ್ ಕಸರತ್ತು!

ಸಚಿವ ಹಾಗೂ ಹಿರಿಯೂರು ಶಾಸಕ ಡಿ ಸುಧಾಕರ್ ಅವರ ನಿಧನದಿಂದ ಎದುರಾಗಿರುವ...

ಮೊಳಕಾಲ್ಮೂರು | ವಿಂಡ್ ಫ್ಯಾನ್ ಕಾಮಗಾರಿ ಸ್ಥಗಿತಕ್ಕೆ ರೈತ ಸಂಘ ಪ್ರತಿಭಟನೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಕ್ರಮವಾಗಿ ವಿಂಡ್...

ಹಿರಿಯೂರು | ಕಲ್ಲುವಳ್ಳಿ ಭಾಗದ 17 ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಪ್ರತಿಭಟನೆ

 ಕಲ್ಲುವಳ್ಳಿ ಭಾಗದ ರೈತರು ಗಾಯತ್ರಿ ಅಣೆಕಟ್ಟೆ ಒಳಗೊಂಡು 17 ಕೆರೆಗಳಿಗೆ ವಾಣಿವಿಲಾಸ...