ಚಿತ್ರದುರ್ಗ | ಶಾಲಾಭಿವೃದ್ಧಿಗೆ ಕಾರ್ಪೊರೇಟ್ ಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಬಳಕೆ: ಎಐಡಿಎಸ್ಓ ಆಕ್ಷೇಪ

Date:

ಸರ್ಕಾರದ ಶಾಲೆಗಳ ಸ್ಥಾಪನೆ ಹಾಗೂ ಶಾಲಾಭಿವೃದ್ಧಿಗೆ ಕಾರ್ಪೊರೇಟ್‌ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಬಳಸಲಾಗುವುದು ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳು ಕಾರ್ಯಕ್ರಮವೊಂದರಲ್ಲಿ ಹೇಳಿರುವುದು ಪತ್ರಿಕೆಗಳಲ್ಲಿ ವರದಿಯಾಗಿದ್ದು, ಇದು ಶಾಲೆಗಳನ್ನು ಕಾರ್ಪೋರೇಟ್ ಕಂಪನಿಗಳ ತೆಕ್ಕೆಗೆ ಹಾಕಲು ದಾರಿ ಮಾಡಿಕೊಡುತ್ತದೆ ಎಂದು ಎಐಡಿಎಸ್ಓ ಚಿತ್ರದುರ್ಗ ಜಿಲ್ಲಾ ಘಟಕ ಆಕ್ಷೇಪ ವ್ಯಕ್ತಪಡಿಸಿದೆ.‌

- Advertisement -

“ರಾಜ್ಯದ ಸರ್ಕಾರಿ ಶಾಲೆಗಳ ಪರಿಸ್ಥಿತಿ ಅತ್ಯಂತ ದಯನೀಯವಾಗಿದೆ. ಈ ಬಾರಿ ಮಳೆಗೆ ಅನೇಕ ಶಾಲಾ ಕೊಠಡಿಗಳು ಸೋರುತ್ತಿವೆ. ಶಾಲೆಗಳ ಮೇಲ್ಛಾವಣಿಗಳು ಕುಸಿಯುವ ಹಂತದಲ್ಲಿದೆ. ಪೀಠೋಪಕರಣಗಳು, ಶೌಚಾಲಯಗಳು ಇಲ್ಲದೇ ಕಲಿಕೆ ಕುಂಠಿತಗೊಳ್ಳುತ್ತಿದೆ. ಸರ್ಕಾರಿ ಶಾಲೆಗಳನ್ನು ಬಲಪಡಿಸಿಬೇಕಾದ ಅವಶ್ಯಕತೆ ತೀವ್ರವಾಗಿದೆ. ಸರ್ಕಾರವು ತನ್ನ ಜನರಿಗೆ ಶಿಕ್ಷಣ ನೀಡುವ ಪ್ರಾಥಮಿಕ ಜವಾಬ್ದಾರಿಯನ್ನು ನೆರವೇರಿಸಬೇಕೆಂಬುದು ರಾಜ್ಯದ ಜನರ ಆಗ್ರಹವಾಗಿದೆ” ಎಂದು ಎಐಡಿಎಸ್ಓ ಮುಖಂಡರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...
1002640606

“ಜನರು ನೀಡುವ ತೆರಿಗೆ ಹಣದಲ್ಲಿ ಅಭಿವೃದ್ಧಿಪಡಿಸಬೇಕಾದ, ಸಾರ್ವಜನಿಕರ ಆಸ್ತಿಯಾದ ಶಾಲೆಗಳನ್ನು ಸರ್ಕಾರ ಕಾರ್ಪೋರೇಟ್ ಕಂಪನಿಗಳ ಮಡಿಲಿಗಿಡಲು ಹೊರಟಿದೆ‌. ಮಹಾನ್ ವ್ಯಕ್ತಿಗಳ ಹೆಸರುಗಳನ್ನು ಇಡುವ ಬದಲು ಈ ಕಾರ್ಪೋರೇಟ್ ಕಂಪನಿಗಳ ಹೆಸರು ಶಾಲೆಗಳಿಗೆ ಇಡುವ ಪ್ರಸ್ತಾಪವನ್ನು ಮಾಡಿರುವುದು, ಸರ್ಕಾರ ದಲ್ಲಾಳಿ ಕೆಲಸಕ್ಕೆ ಇಳಿದಿದೆಯೇ ಎಂಬ ಪ್ರಶ್ನೆ ಮೂಡಿಸುತ್ತಿದೆ‌” ಎಂದು ಕಿಡಿಕಾರಿದರು.

“ಕಾರ್ಪೋರೇಟ್ ಕಂಪನಿಗಳ ಭಿಕ್ಷೆಯ ಹಣದಲ್ಲಿ ನಮ್ಮ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಬದಲು ನಮ್ಮ ಹಕ್ಕಿನ ತೆರಿಗೆ ಹಣದಲ್ಲಿ ಶಾಲೆಗಳನ್ನು ನಿರ್ಮಿಸಿ ಅಭಿವೃದ್ಧಿ ಪಡಿಸಲಿ. ಇನ್ನು ಕಂಪನಿಗಳ ಮೇಲೆ ತೆರಿಗೆ ಹೆಚ್ಚಿಸಿ ಅವರಿಂದ ನ್ಯಾಯಯುತವಾಗಿ ಹಣ ವಸೂಲಿ ಮಾಡಲಿ. ರಾಜ್ಯದ ಅಭಿವೃದ್ಧಿಗೆ ಉಪಯೋಗಿಸಲಿ. ಉಪ ಮುಖ್ಯಮಂತ್ರಿಗಳು ಈ ಪ್ರಸ್ತಾಪನೆಯನ್ನು ಕೈಬಿಡಬೇಕೆಂದು ರಾಜ್ಯದ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಲಂಚ, ಕರ್ತವ್ಯಲೋಪ, ದುರ್ನಡತೆ ಆರೋಪ; ವೈದ್ಯಾಧಿಕಾರಿ ಅಮಾನತು

ಎಐಡಿಎಸ್ಓ ಜಿಲ್ಲಾ ಸಂಚಾಲಕ ಕೆ.ಈರಣ್ಣ, ವಿದ್ಯಾರ್ಥಿಗಳಾದ ಗಜೇಶ್, ಮೌನೇಶ್, ಸ್ವಪ್ನಾ, ಸಾನಿಯಾ, ಭಾರ್ಗವಿ, ದ್ಯಾನೇಶ್ ಸೇರಿದಂತೆ ಸಂಘಟನೆಯ ಇತರ ಮುಖಂಡರು ಒತ್ತಾಯಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...