ಚಿತ್ರದುರ್ಗ | ಭಾರತೀಯ ಪರಂಪರೆಗೆ ವಾಲ್ಮೀಕಿ ಜನಾಂಗದ ಕೊಡುಗೆ ಸ್ಮರಣೀಯ: ಸಚಿವ ಡಿ ಸುಧಾಕರ್

Date:

Advertisements

“ಭಾರತೀಯ ಸಾಂಸ್ಕೃತಿಕ ಪರಂಪರೆಗೆ ಬೇಡ ಜನಾಂಗದ ಕೊಡುಗೆ ಸ್ಮರಣೀಯ. ರಾಮಾಯಣ ಸರ್ವಕಾಲಕ್ಕೂ ಪೂಜನೀಯ ಮಹಾಕಾವ್ಯ. ಇಡೀ ವಿಶ್ವವೇ ಬಯಸುವ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ತತ್ವವನ್ನು ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವಕ್ಕೆ ಸಾರಿದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ತತ್ವಜ್ಞಾನಿಯಾಗಿ ಮಾನವೀಯ ಮೌಲ್ಯಗಳ ಹರಿಕಾರನಾಗಿ ಕಾಣುತ್ತಾರೆ. ಇವರ ಜೀವನವೇ ಅರಿವಿನ ಮಾರ್ಗ ತೋರುತ್ತದೆ” ಎಂದು ಶ್ರೀ ವಾಲ್ಮೀಕಿ ಜಯಂತಿಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಭಿಮತ ವ್ಯಕ್ತಪಡಿಸಿದರು..

1002850040

ಚಿತ್ರದುರ್ಗ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ರಾಮಾಯಣ ಸರ್ವಕಾಲಕ್ಕೂ ಪೂಜ್ಯನೀಯ ಮಹಾಕಾವ್ಯ. ರತ್ನಾಕರನ ಬದುಕಿನಲ್ಲಿ ಮಹತ್ತರವಾದ ತಿರುವೆಂದರೆ ಬೇಟೆಯಿಂದಾಗುವ ಹಿಂಸೆ-ನೋವು-ವಿಷಾದಳಿಂದಾದ ಪರಿಣಾಮಗಳು ಅವರ ಮನಃಪರಿವರ್ತನೆಗೆ ಕಾರಣವಾಗಿ ವಾಲ್ಮೀಕಿಯಾಗಿ ಬದಲಾದರು. ಶ್ರೀ ವಾಲ್ಮೀಕಿ ರಾಮಾಯಣದ ಪ್ರೇರಣೆಯಿಂದಾಗಿ ಇಂದು ಜಗತ್ತಿನಲ್ಲಿ 6,000 ರಾಮಾಯಣಗಳನ್ನು ರಚಿಸಲಾಗಿದೆ. ಅನೇಕ ಭಾರತೀಯ ಭಾಷೆಗಳಲ್ಲಿ ಹಾಗೂ ಜರ್ಮನಿ, ಇಟಲಿ, ಫ್ರೆಂಚ್, ಇಂಗ್ಲಿಷ್ ಇನ್ನೂ ಮೊದಲಾದ ಭಾಷೆಗಳಲ್ಲಿ ರಾಮಾಯಣಗಳು ರಚನೆಯಾಗಿವೆ” ಎಂದು ಸ್ಮರಿಸಿದರು.

“ಪುರಾಣ ಪುರುಷ ಬೇಡರ ಕಣ್ಣಪ್ಪನು ಶಿವನಿಗೆ ಕಣ್ಣುಗಳನ್ನು ನೀಡಿದ ಮಹಾನ್ ವ್ಯಕ್ತಿ. ತನ್ನ ಹೆಬ್ಬೆರಳನ್ನೇ ಗುರು ಕಾಣಿಕೆಯಾಗಿ ದ್ರೋಣಾಚಾರ್ಯನಿಗೆ ನೀಡಿದ ಅಮಾಯಕ ಬೇಡ ಯುವಕ ಏಕಲವ್ಯ, ಶ್ರೀರಾಮನಿಗಾಗಿ ಕಾದು ಕುಳಿತು ಹಣ್ಣುಗಳನ್ನು ನೀಡಿದ ಮುಗ್ದೆ ಶಬರಿಯ ಕುಲ.‌ ಮೌರ್ಯರ ಕಾಲದಿಂದ ಹಿಡಿದು ವಿಜಯನಗರ ಕಾಲದವರೆಗೆ ಬೇಡರು ರಕ್ಷಣಾಕಾರ್ಯ, ಅಧೀನಾಧಿಕಾರಿಗಳಾಗಿ ನಿಷ್ಠೆಯಿಂದ ಕಾರ್ಯನಿರ್ವಹಿಸಿದರು. ನಿಷ್ಠೆ, ಪರಿಶ್ರಮ ಮತ್ತು ಸ್ವಂತ ಬಲದಿಂದ ಪ್ರಾಂತ್ಯದ ಪಾಳೆಯಗಾರರಾಗುತ್ತಿದ್ದರು. 
ರಾಷ್ಟ್ರಕ್ಕಾಗಿ ಪ್ರಾಣಾರ್ಪಣೆಯನ್ನು ಮಾಡಿಕೊಂಡ ವಿಷಯವನ್ನು ಇತಿಹಾಸ ಹೇಳುತ್ತದೆ. ಇದು ಬೇಡರ ಚರಿತ್ರೆಯೇ ಆಗಿದೆ. ಚಿತ್ರದುರ್ಗ, ತರೀಕೆರೆ, ಸುರಪುರ ಉಮ್ಮತ್ತೂರು ಮುಂತಾದ ಪಾಳೆಯಗಾರರು ಅವರ ಅಧಿಕಾರಾವಧಿಯಲ್ಲಿ ಜನಪರವಾಗಿ ಮಾಡಿದ ಕೆಲಸ-ಕಾರ್ಯಗಳು, ಗುರುಮಠಗಳೊಂದಿಗಿದ್ದ ಅವಿನಾಭಾವ ಸಂಬಂಧದ ಬಗ್ಗೆ ದಾಖಲೆಗಳು ತಿಳಿಸುತ್ತವೆ” ಎಂದು ಇತಿಹಾಸ ನೆನಪಿಸಿದರು.

Advertisements
1002850037
ನಗರದಲ್ಲಿ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಮೆರವಣಿಗೆ ನಡೆಯಿತು

“ಚಿತ್ರದುರ್ಗವನ್ನಾಳಿದ ಮತ್ತಿ ತಿಮ್ಮಣ್ಣನಾಯಕ, ಪ್ರಗತಿಪರ ದೊರೆ ಹಾಗೂ ಚಿತ್ರದುರ್ಗದಲ್ಲಿ ಮುರುಘಾಮಹಾಸ್ವಾಮಿಗಳನ್ನು ತನ್ನ ಭಕ್ತಿಯಿಂದ ನೆಲೆನಿಲ್ಲುವಂತೆ ಮಾಡಿದ ರಾಜಾಬಿಚ್ಚುಗತ್ತಿ ಭರಮಣ್ಣನಾಯಕ, ಹಿರೇಮದಕರಿನಾಯಕ, ದುರ್ಗ ಮರೆಯಲಾಗದ ರಾಜವೀರ ಮದಕರಿನಾಯಕ, ಕಂಪಿಲೆಯ ಕಂಪಿಲರಾಯ, ವಿಜಯನಗರದ ಎಚ್.ಎಂ.ನಾಯಕ, ಬ್ರಿಟೀಷರ ವಿರುದ್ಧ ಹೋರಾಡಿದ ಸುರಪುರದ ರಾಜ ವೆಂಕಟಪ್ಪನಾಯಕ, ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಸಿಂಧೂರ ಲಕ್ಷ್ಮಣ, ಹಲಗಲಿಯ ಬೇಡರು ಇವರೆಲ್ಲರೂ ಶಕ್ತಿ-ಭಕ್ತಿಗಳ ಸಂಗಮವಾಗಿದ್ದರು” ಎಂದು ಹೆಮ್ಮೆ ವ್ಯಕ್ತಪಡಿಸಿದರು.‌

“ಬ್ರಿಟೀಷರು ತಂದ ಅರಣ್ಯ ಕಾಯ್ದೆಗಳು ಬೇಡರ ಜೀವನಾಧಾರವಾಗಿದ್ದ ಅರಣ್ಯದಿಂದಲೂ ಹೊರದೂಡಿತು. ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ ಹಲಗಲಿಯ ಬೇಡರು ದಕ್ಷಿಣ ಭಾರತದ ಮೊಟ್ಟ ಮೊದಲು ಸ್ವಾತಂತ್ರ್ಯ ಹೋರಾಟ ಆರಂಭಿಸಿದರು. ಸಿಂಧೂರ ಲಕ್ಷ್ಮಣನಂತವರ ಹೋರಾಟ ಇಂದಿಗೂ ಅಮರ” ಎಂದು ಸಚಿವರು ಸ್ಮರಿಸಿದರು.

1002850038

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, “ಮಧ್ಯ ಕರ್ನಾಟಕ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ವಾಲ್ಮೀಕಿ ನಾಯಕ ಜನಸಂಖ್ಯೆ ಇರುವುದರಿಂದ ರಾಜ್ಯಮಟ್ಟದ ವಾಲ್ಮೀಕಿ ಜಯಂತಿ ಚಿತ್ರದುರ್ಗದಲ್ಲಿ ಆಚರಿಸುವಂತಾಗಬೇಕು” ಎಂದು ಒತ್ತಾಯಿಸಿದರು.

“ರಾಮಾಯಣ ಮಹಾಕಾವ್ಯವು ತಂದೆ-ಮಗ, ಅಣ್ಣ ತಮ್ಮಂದಿರು, ಕುಟುಂಬ, ರಾಜ್ಯ, ಮಾದರಿ ಸಮಾಜ ನಿರ್ಮಾಣ ಹೇಗೆ ಆಗಬೇಕು ಎಂಬ ಕಲ್ಪನೆಯನ್ನು ಇಡೀ ಜಗತ್ತಿಗೆ ಕೊಟ್ಟವರು ವಾಲ್ಮೀಕಿ. ವಾಲ್ಮೀಕಿಯವರ ವಿಚಾರ, ಸಂದೇಶಗಳನ್ನು ಪ್ರಸ್ತುತ ಪ್ರತಿಯೊಬ್ಬರಿಗೂ ತಿಳಿಸುವ ಕೆಲಸ ಮಾಡೋಣ” ಎಂದು ತಿಳಿಸಿದರು.

“ಚಿತ್ರದುರ್ಗದಲ್ಲಿ ಮದಕರಿ ನಾಯಕರ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಕಳೆದ ಬಾರಿ ಕೇಂದ್ರ ಗೃಹ ಸಚಿವರು ಘೋಷಣೆ ಮಾಡಿದ್ದರು. ಜಿಲ್ಲಾಡಳಿತ 30 ಎಕರೆ ಜಾಗವನ್ನು ನೀಡಿದರೆ ಮದಕರಿ ನಾಯಕರ ಥೀಮ್ ಪಾರ್ಕ್ ಜೊತೆಗೆ ಬೃಹತ್ ವಾಲ್ಮೀಕಿ ಪ್ರತಿಮೆ ನಿರ್ಮಾಣ ಮಾಡಿ, ಪ್ರತಿಯೊಬ್ಬರಿಗೂ ಮದಕರಿ ನಾಯಕರ ಹಾಗೂ ವಾಲ್ಮೀಕಿಯ ಶ್ರೇಯವನ್ನು ಜಗತ್ತಿಗೆ ತಿಳಿಸುವ ಕಾರ್ಯಕ್ಕಾಗಿ ನಾವೆಲ್ಲರೂ ಶ್ರಮಿಸುತ್ತೇವೆ” ಎಂದು ಭರವಸೆ ನೀಡಿದರು.

1002850041
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಿ ಗೌರವಿಸಲಾಯಿತು

ಚಳ್ಳಕೆರೆಯ ಕೋಟೆ ಬೋರಮ್ಮ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಓಬಣ್ಣ ಉಪನ್ಯಾಸ ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮುದ್ದಾಪುರ ಹೊಸಹಟ್ಟಿಯ ಪಿ.ತಿಪ್ಪೇಸ್ವಾಮಿ, ಲಿಂಗವ್ವನಾಗ್ತಿಹಳ್ಳಿ ಎಂ.ತಿಪ್ಪೇಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನೌಕರ ಹಿರಿಯೂರು ತಾಲ್ಲೂಕಿನ ಗುಯಿಲಾಳು ಗ್ರಾಮದ ಹೆಚ್.ತಿಪ್ಪಯ್ಯ, ಚಿತ್ರದುರ್ಗ ನಗರಸಭೆಯ ಪ್ರಥಮ ಮಹಿಳಾ ಉಪಾಧ್ಯಕ್ಷೆಯಾಗಿದ್ದ ಎನ್.ಸುಮಾ, ಜೋಡಿಚಿಕ್ಕೇನಹಳ್ಳಿಯ ಗೊಲ್ಲರಹಟ್ಟಿಯ ಎ.ತಿಪ್ಪೇಸ್ವಾಮಿ ಅವರಿಗೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಶ್ರೇಣಿ ಪಡೆದ ಅಸೆಚನ ಪಿ ದಾಸರಿ ಹಾಗೂ ಹಿರಿಯೂರು ತಾಲ್ಲೂಕು ದೇವರಕೊಟ್ಟ ಏಕಲವ್ಯ ವಸತಿ ಶಾಲೆಗೆ ಪ್ರಥಮ ಶ್ರೇಣಿ ಪಡೆದ ಸಂಜೀವ್ ಮುತ್ತಯ್ಯ ಅವರಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗದು ಬಹುಮಾನ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು,ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾ ನಗರಸಭೆ ಅಧ್ಯಕ್ಷೆ ಎಂ.ಪಿ.ಅನಿತಾ ರಮೇಶ್, ಉಪಾಧ್ಯಕ್ಷೆ ಶಕೀಲಾಭಾನು, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಂದೀಪ್, ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಹೆಚ್.ದಿವಾಕರ್, ಮುಖಂಡರಾದ ಡಾ.ಗುಡ್ಡದೇಶ್ವರಪ್ಪ, ಸಿ.ಜಿ.ಶ್ರೀನಿವಾಸ್, ಓ.ಬಿ.ಬಸವರಾಜ್, ಮಂಜುನಾಥ್, ಸಂಪತ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ವಿಳಂಬ; ರಾಜಿನಾಮೆಗೆ ಆಗ್ರಹಿಸಿ ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ

ಪರಿಶಿಷ್ಟ ಜಾತಿಯೊಳಗೆ (ಎಸ್‌ಸಿ) ಒಳಮೀಸಲಾತಿ ಜಾರಿ ಮಾಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ ಎಂದು...

ಒಳಮೀಸಲಾತಿ ಜಾರಿಗೆ ಅಡ್ಡಿಪಡಿಸುತ್ತಿರುವ ಸಚಿವ ಮಹದೇವಪ್ಪ ಮನೆಗೆ ಅ.10 ರಂದು ಮುತ್ತಿಗೆ

ಪರಿಶಿಷ್ಠ ಜಾತಿಗಳ ಒಳಮೀಸಲಾತಿ ಜಾರಿಗೆ ವಿರೋಧಿಸುತ್ತಿರುವ ಸಮಾಜ ಕಲ್ಯಾಣ ಸಚಿವರು ತಕ್ಷಣ...

ಅ. 18ರವರೆಗೆ ಶಾಲಾ ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ; ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಹೆಚ್ಚುವರಿ ಬಳಕೆ

ರಾಜ್ಯದಲ್ಲಿ ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ. ಸಿಎಂ ಸಿದ್ದರಾಮಯ್ಯ...

ಕುರುಬರನ್ನು ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿಎಂ

ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ...

Download Eedina App Android / iOS

X