ಚಿತ್ರದುರ್ಗ | ಬೆಸ್ಕಾಂ ನೌಕರರಿಗೆ ಎಚ್ಚರಿಕೆ ಗಂಟೆ, ನಿರ್ಲಕ್ಷ್ಯದ ಅವಘಡಕ್ಕೆ ಜೈಲು ಶಿಕ್ಷೆ.

Date:

ಬೆಸ್ಕಾಂ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಜೆಎಂಎಫ್‌ಸಿ
ನ್ಯಾಯಾಲಯದ ತೀರ್ಪು ಬೆಸ್ಕಾಂ ನೌಕರರಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ನಿರ್ಲಕ್ಷ್ಯ ತೋರಿದ ಎಇಇ, ಮೆಕ್ಯಾನಿಕ್‌ ಹಾಗೂ ಮತ್ತೊಬ್ಬ ಸಿಬ್ಬಂದಿ ಸೇರಿ ಮೂರು ಜನರಿಗೆ ಎರಡು ವರ್ಷ ಜೈಲು ಶಿಕ್ಷೆ , ದಂಡ ವಿಧಿಸಿ ಆದೇಶಿಸಿದೆ.

- Advertisement -

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ನಗರದ ಭೋವಿ ಕಾಲನಿಯ 14 ವರ್ಷದ ಪುತ್ರ ಕಿರಣ್‌ ಪಂಪ್‌ಹೌಸ್‌ ಬಳಿ 2015 ಜೂನ್‌  ಒಂದರಂದು ಆಟವಾಡುತ್ತಿದ್ದಾಗ ಸಮೀಪದ ವಿದ್ಯುತ್‌ ಕಂಬದಲ್ಲಿದ್ದ ಹಳೆಯ ಸ್ವಿಚ್‌ ಬೋರ್ಡ್‌ನ ವೈಯರ್‌ ತಾಗಿ ವಿದ್ಯುತ್ ಆಘಾತದಿಂದ ಬಾಲಕ ಮೃತಪಟ್ಟಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಮೊಳಕಾಲ್ಮೂರು ನಗರ ಪೊಲೀಸ್‌ ಠಾಣೆಯಲ್ಲಿ ಬೆಸ್ಕಾಂ ನೌಕರರ ನಿರ್ಲಕ್ಷ್ಯ ವಿರುದ್ಧ ದೂರು ದಾಖಲಿಸಿದ್ದರು. ಎಇಇ ಸೇರಿದಂತೆ ಮೂರು ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು. ಪೊಲೀಸ್ ಉಪ ನಿರೀಕ್ಷಕ ಲೋಕೇಶ್‌ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ವಿಚಾರಣೆಯಲ್ಲಿ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ಕಂಡು ಬಂದಿದ್ದು, ನಿರ್ಲಕ್ಷ್ಯ ತೋರಿದ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಮೊಳಕಾಲ್ಮೂರು ಪ್ರಧಾನ ಸಿ.ಜೆ. ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಿಯಾಂಕ ಕೆ.ಟಿ. ಅವರು ಆರೋಪಿಗಳಾದ ಬೆಸ್ಕಾಂ ಎಇಇ, ಮೆಕ್ಯಾನಿಕ್‌ ಮತ್ತೊಬ್ಬರಿಗೆ 2 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 1 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಮೊಹಮ್ಮದ್‌ ಶಂಶಿರ್‌ ಅಲಿ ವಕಾಲತ್ತು ವಹಿಸಿ, ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...