ಚಿತ್ರದುರ್ಗ | ಪ್ರೀತಿಸಿ ಜಾತಿ ಕಾರಣಕ್ಕೆ ಮದುವೆಗೆ ನಿರಾಕರಣೆ ಆರೋಪ, ಯುವತಿ ಆತ್ಮಹತ್ಯೆ.

Date:

ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳ ಮಧ್ಯೆ ಜಾತಿ ಅಡ್ಡ ಬಂದಿದ್ದು, ಪರಿಶಿಷ್ಟ ಜಾತಿಯವಳು ಎನ್ನುವ ಕಾರಣಕ್ಕೆ ಯುವಕ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಯುವತಿ ನೇಣಿಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನೆಡೆದಿರುವ ಘಟನೆ ಕೇಳಿಬಂದಿದೆ.

- Advertisement -

ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದ ಯುವತಿ ನೇಣಿಗೆ ಕೊರಳೊಡ್ಡಿದ ಯುವತಿಯಾಗಿದ್ದು, , ‘ಪರಿಶಿಷ್ಟ ಜಾತಿ ಎಂದು ಮದುವೆ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು ನೇಣಿಗೆ ಶರಣಾಗಿದ್ದಾಳೆ’ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೆಂಗಳೂರಿನಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ನಾಗಸಮುದ್ರ ಗ್ರಾಮದ ಯುವತಿ, ರಾಂಪುರ ಗ್ರಾಮದ ಎಂಜಿನಿಯರ್ ಭಾರ್ಗವ ರೆಡ್ಡಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಹುಡುಗಿ ಪರಿಶಿಷ್ಠ ಜಾತಿಯವಳು ಎನ್ನುವ ಕಾರಣಕ್ಕೆ ಮದುವೆ ಪ್ರಸ್ತಾಪಕ್ಕೆ ಯುವಕ ನಿರಾಕರಿಸಿದ್ದಾನೆ. ನಿರಾಕರಿಸಿದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಇದಕ್ಕೆ ಯುವಕ ಭಾರ್ಗವ ರೆಡ್ಡಿ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗೌತಮ ಬುದ್ಧನ ತತ್ವ, ಚಿಂತನೆಗಳ ಸ್ಮರಣೆಯೊಂದಿಗೆ ಬುದ್ಧ ಪೂರ್ಣಿಮೆ ಆಚರಣೆ.

ಈದಿನ ಡಾಟ್ ಕಾಮ್ ನೊಂದಿಗೆ ಮಾತನಾಡಿದ ಯುವತಿಯ‌ ಸಂಬಂಧಿ ನಾಗರಾಜ್, “ಆರೋಪಿತ ಯುವಕ ಮತ್ತು ಯುವತಿ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಬೆಂಗಳೂರಿನಲ್ಲಿ ಸುತ್ತಾಡಿಸಿ ಈಗ ಪರಿಶಿಷ್ಟ ಜಾತಿ ಎನ್ನುವ ಕಾರಣಕ್ಕೆ ಎರಡು ತಿಂಗಳ ಹಿಂದೆ ಮದುವೆಯಾಗುವುದಿಲ್ಲ ಎಂದಿದ್ದಾನೆ.‌ ಈ ವಿಷಯವಾಗಿ ಇಬ್ಬರ ಮಧ್ಯೆ ಎರಡು ಮೂರು ವಾರಗಳಿಂದ ಹಗ್ಗಜಗ್ಗಾಟ, ಚರ್ಚೆ ನಡೆದಿದೆ. ಮೊದಲು ಪ್ರೀತಿಸುವಾಗ ಇಲ್ಲದ ಜಾತಿ ಈಗ ಬಂದಿದ್ದೇಕೆ. ಯುವತಿ ಸಾವಿಗೆ ಯುವಕನೇ ಕಾರಣನಾಗಿದ್ದಾನೆ. ಜಾತಿ ದೌರ್ಜನ್ಯ, ವಂಚನೆಯ ದೂರು ದಾಖಲಿಸಲಾಗಿದೆ” ಎಂದು ಅಳಲು ತೋಡಿಕೊಂಡರು.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಕೂಡಲೇ ಬಂಧಿಸಿ ನ್ಯಾಯ ಕೊಡಿಸಲು ಪೋಷಕರು ಆಗ್ರಹಿಸಿದ್ದಾರೆ. ಮೊಳಕಾಲ್ಮೂರು ತಾಲೂಕಿನ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...

ಕೂಡಲೇ ಸೌಜನ್ಯ ಎಸ್‌ಐಟಿ ಪುನರಚಿಸಿ: ರಾಜ್ಯ ಸರ್ಕಾರಕ್ಕೆ ‘ಕೊಂದವರು ಯಾರು?’ ಆಂದೋಲನ ಬಹಿರಂಗ ಪತ್ರ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಈಗ ರಚನೆಯಾಗಿರುವ...

ಗರ್ಬಾ ವೇಳೆ 4.5 ಲಕ್ಷ ಹಿಂದೂ ಯುವತಿಯರು ಪರಾರಿ ಎಂದ ಬಿಜೆಪಿ ಶಾಸಕಿ; ಉಷಾ ಠಾಕೂರ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನವರಾತ್ರಿ ಆಚರಣೆಯ ಭಾಗವಾದ ಗರ್ಬಾ ನೃತ್ಯೋತ್ಸವದ ಸಂದರ್ಭದಲ್ಲಿ ಪ್ರತಿವರ್ಷ ದೇಶದಲ್ಲಿ ಸುಮಾರು...