ಚಿತ್ರದುರ್ಗ | ಯುವಕರು ದುಶ್ಚಟಗಳಿಂದ ದೂರವಿದ್ದು,  ಗುರಿಯ ಕಡೆಗೆ ಆತ್ಮವಿಶ್ವಾಸವಿರಲಿ; ನಿಮಾನ್ಸ್ ಸಮಾಲೋಚಕ ಹರ್ಷವರ್ಧನ.

Date:

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಮತ್ತು  ಸರ್ಕಾರಿ ಕಲಾ ಕಾಲೇಜ್ ಸಂಯುಕ್ತಾಶ್ರಯದಲ್ಲಿ ಪದವಿ ಹಂತದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ “ಅರಿವು” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯುವ ಸಮಾಲೋಚಕ ಹಾಗೂ ಸಂಪನ್ಮೂಲ ವ್ಯಕ್ತಿ ಹರ್ಷವರ್ಧನ,” ಯುವಕರು ನಾನಾ ಬಗೆಯ ದುಶ್ಚಟಗಳಿಗೆ ಬಲಿಯಾಗದೆ,  ದುಶ್ಚಟಗಳಿಂದ ದೂರವಿದ್ದು,  ಗುರಿಯ ಕಡೆಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಯುವಕರು ತಮ್ಮ ತಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಮಾನಸಿಕವಾಗಿ ದೈಹಿಕವಾಗಿ ಹಾಗೂ ಸದೃಢವಾಗಿರಬೇಕು’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

- Advertisement -
1001790096

ಸಂಪನ್ಮೂಲ ವ್ಯಕ್ತಿ ಹಾಗೂ ನಿಮ್ಹಾನ್ಸ್ ತಾಂತ್ರಿಕ ವರ್ಗದ ನಾಗರಾಜ್,ವಿದ್ಯಾರ್ಥಿಗಳಿಗೆ ಸರ್ಕಾರಿ ಸೌಲಭ್ಯಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿ “ಯುವಕರಿಗೆ ಇರುವ ಸೌಲಭ್ಯ ಬಳಸಿಕೊಳ್ಳಿ ಹಾಗೂ ಮಾನಸಿಕವಾಗಿ ಹೆಚ್ಚು ಕ್ರಿಯಾಶೀಲರಾಗಿ ದೃಢವಾಗಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಬಿ.ಟಿ. ತಿಪ್ಪೇರುದ್ರಸ್ವಾಮಿ ಮಾತನಾಡಿ “ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯುವಜನರಿಗೆ ತುಂಬಾ ಉತ್ತಮವಾದ ಕಾರ್ಯಕ್ರಮಗಳನ್ನು ರೂಪಿಸಿವೆ, ಮಹತ್ತರವಾದ ಯೋಜನೆಗಳಿವೆ. ಅವುಗಳನ್ನು ನಾವೆಲ್ಲಾ ಸಮರ್ಥವಾಗಿ ಬಳಸಿಕೊಳ್ಳಬೇಕು ಹಾಗೂ ಇಂತಹ ಕಾರ್ಯಕ್ರಮಗಳು ಯುವಕರ ಮೇಲೆ ಹೆಚ್ಚು ಪ್ರಭಾವ ಬೀರಿ ಬದಲಾವಣೆಗಳೊಂದಿಗೆ ಯುವ ಜನರು ಗುರಿಯತ್ತ ಸಾಗಲು ಸಹಕಾರಿಯಾಗಿದೆ. ಹಾಗೂ ನಮ್ಮ ಕಾಲೇಜಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು  ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬೆಸ್ಕಾಂ ನೌಕರರಿಗೆ ಎಚ್ಚರಿಕೆ ಗಂಟೆ, ನಿರ್ಲಕ್ಷ್ಯದ ಅವಘಡಕ್ಕೆ ಜೈಲು ಶಿಕ್ಷೆ.

ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಎನ್ ಎಸ್ ಎಸ್ ಅಧಿಕಾರಿಗಳಾದ ಬಸವರಾಜ್ ಹಾಗೂ  ನಿಮ್ಹಾನ್ಸ್ ತಾಂತ್ರಿಕ ವರ್ಗದ ಕುಮಾರಿ‌ ಅನು ಹಾಗೂ ಯುವ ಪರಿವರ್ತಕರಾದ ಅಂಜಲಿ‌, ಮೇಘ, ಸುಷ್ಮಾ ಸೇರಿದಂತೆ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಓವರ್‌ಟೇಕ್ ವೇಳೆ ಶಾಲಾ ಬಸ್ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ

ಓವರ್‌ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ಪಕ್ಕದ...

ಚಿತ್ರದುರ್ಗ | ವೇದಾವತಿ ನದಿಯ ಸೇತುವೆ ಬಿರುಕು: ಗ್ರಾಮಸ್ಥರಲ್ಲಿ ಆತಂಕ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರನಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ...

ಚಿತ್ರದುರ್ಗ | ಭದ್ರ ನೀರು ಹರಿಸಲು ಅನುಮತಿ ಸ್ವಾಗತಾರ್ಹ: ಜಿಲ್ಲೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ಐದು ದಶಕಗಳ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡಿದ್ದು, ಕಾಮಗಾರಿ...