ದಾವಣಗೆರೆ | ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಳ್ಳರ ತಂಡ ಸಕ್ರಿಯ; ಗಡಿಭಾಗದ ಮನೆ, ಹಳ್ಳಿಗಳು ಎಚ್ಚರಿಕೆ ವಹಿಸಲು ಪೊಲೀಸ್ ಇಲಾಖೆ ಸೂಚನೆ

Date:

Advertisements

ದಾವಣಗೆರೆ ಮತ್ತು ಹತ್ತಿರದ ಜಿಲ್ಲೆಗಳಲ್ಲಿ ಎರಡು ಕಳ್ಳರ ತಂಡಗಳು ಸಕ್ರಿಯವಾಗಿ ಸಂಚರಿಸುತ್ತಿದ್ದು, ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ.

1002293691
ರಾತ್ರಿ ವೇಳೆ ಕಾರ್ಯಾಚರಿಸುತ್ತಿರುವ ಕಳ್ಳರ ತಂಡ ಕ್ಯಾಮೆರದಲ್ಲಿ ಸೆರೆ

ಸಕ್ರಿಯವಾಗಿರುವ ಕಳ್ಳರ ತಂಡಗಳು ಮುಖ್ಯವಾಗಿ ಪಟ್ಟಣಗಳು, ಗಡಿ ಗ್ರಾಮಗಳು ಹಾಗೂ ಹಳ್ಳಿಗಳಿಂದ ದೂರದಲ್ಲಿರುವ, ಹೊರಭಾಗದಲ್ಲಿರುವ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನಕ್ಕೆ ಹೊಂಚು ಹಾಕುತ್ತಾರೆ.‌ ಈ ಹಿನ್ನೆಲೆಯಲ್ಲಿ ಜನರು ಸುರಕ್ಷಿತ ಕ್ರಮಗಳನ್ನು ಅನುಸರಿಸಬೇಕು ಎಂದು ಸೂಚನೆ ನೀಡಿದ್ದಾರೆ.

1002293690

ಈ ವಿಷಯವನ್ನು ಎಲ್ಲಾ ವಾಟ್ಸಾಪ್ ಗ್ರೂಪ್ ಗಳಿಗೆ, ಸಾಮಾಜಿಕ ಜಾಲತಾಣದಲ್ಲಿ ಕಳುಹಿಸಿ, ಎಲ್ಲರೂ ಜಾಗರೂಕರಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಮನವಿ ಮಾಡಲಾಗಿದೆ. ಕಳ್ಳರ ಸಿಸಿ ಟಿವಿ ಚಿತ್ರಗಳು ಇದ್ದು, ಅವುಗಳಲ್ಲಿರುವ ವ್ಯಕ್ತಿಗಳನ್ನು ಗಮನಿಸುವಂತೆ ತಿಳಿಸಲಾಗಿದೆ.‌

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೃದಯಾಘಾತಕ್ಕೆ ಯುವಕ ಬಲಿ, ಹೃದಯಕ್ಕೇನಾಗಿದೆ?

ತಮ್ಮ ಪ್ರದೇಶದ ಸ್ಥಳೀಯ ಪೊಲೀಸ್ ಬೀಟ್ ಸಿಬ್ಬಂದಿಗಳೊಂದಿಗೆ ಸಂಪರ್ಕದಲ್ಲಿದ್ದು ಮತ್ತು ಸಾಧ್ಯವಾದರೆ ನಿಮ್ಮ ನಿಮ್ಮ ಪೊಲೀಸ್ ಬೀಟ್ ಸಿಬ್ಬಂದಿಗಳೊಂದಿಗೆ ಸ್ವಯಂಸೇವಕರಾಗಿ ಬೆಳಗಿನ ಜಾವ 1 ರಿಂದ 3 ಗಂಟೆಯ ನಡುವೆ ಗಸ್ತು ಕರ್ತವ್ಯದಲ್ಲಿ ಸಹಕರಿಸಬಹುದು. ನಿಮ್ಮ ಗ್ರಾಮ, ಬೀದಿಗಳಲ್ಲಿ, ನಿಮ್ಮ ಸುತ್ತ ಮುತ್ತ ಪ್ರದೇಶಗಳಲ್ಲಿ ಅನಾಮಧೇಯ, ಅನುಮಾನಸ್ಪದ ವ್ಯಕ್ತಿಗಳು ಸಂಚರಿಸುವುದು ಕಂಡು ಬಂದರೆ ತಕ್ಷಣವೇ ಸ್ಥಳೀಯ ಪೊಲೀಸ್ ತುರ್ತು ಸಹಾಯವಾಣಿ 112 ಹಾಗೂ ಪೊಲೀಸ್ ಕಂಟ್ರೋಲ್ ರೂಂ ಮೊಬೈಲ್ ನಂ- 9480803200 ಗೆ ಕರೆ ಮಾಡಿ ತಿಳಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಜೆಡಿಎಸ್‌ನಿಂದ ತುಂಗೆಗೆ ಬಾಗಿನ ಅರ್ಪಣೆ

ಶಿವಮೊಗ್ಗ, ನಗರ ಮಧ್ಯದಲ್ಲಿ ಹರಿಯುತ್ತಿರುವ ತುಂಗಾನದಿ ಪ್ರತಿವರ್ಷದಂತೆ ಈ ಬಾರಿಯೂ ತುಂಬಿ...

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ಪ್ರಕರಣ; ಮರ್ಯಾದೆ ಹತ್ಯೆ, ಸಾಮೂಹಿಕ ಕೃತ್ಯದ ಶಂಕೆ ವ್ಯಕ್ತಪಡಿಸಿದ ದಲಿತ ಸಂಘಟನೆಗಳು

ಕಾಲೇಜು ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿತ್ರದುರ್ಗ ನಗರದ ಹೊರವಲಯದ...

Download Eedina App Android / iOS

X