ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ  ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

Date:

ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು ಕೇಂದ್ರ ಸರ್ಕಾರದ ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ನಡೆಸಿದರು.‌ ಮೋಟಾರ್ ಟ್ರ್ಯಾಲಿ ಮೂಲಕ ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಬಸವಂತಪ್ಪರೊಂದಿಗೆ ತೋಳಹುಣಸೆ–ಆನಗೋಡು – ಹೆಬ್ಬಾಳು ಸಂಪರ್ಕ ಮಾರ್ಗಗಳ ಪರಿಶೀಲನೆ ಕೈಗೊಳ್ಳಲಾಯಿತು.

- Advertisement -

ಈ ವೇಳೆ ರೈಲ್ವೆ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳಾದ ದಾವಣಗೆರೆ ನಗರದ ಜೆ.ಎಚ್. ಪಟೇಲ್ ಬಡಾವಣೆಯ ಬಾಲಭವನದಲ್ಲಿ ಮಕ್ಕಳಿಗಾಗಿ ಟಾಯ್ ಟ್ರೇನ್ ಆರಂಭ, ಬೆಂಗಳೂರು–ಹುಬ್ಬಳ್ಳಿ ಮೂಲಕ ಕತ್ರಾ, ಜಮ್ಮು-ಕಾಶ್ಮೀರಕ್ಕೆ ಹೊಸ ಸೇವೆ ಆರಂಭಿಸಬೇಕು,  ಹುಬ್ಬಳ್ಳಿ-ವಿಜಯವಾಡ ರೈಲನ್ನು ಯಶವಂತಪುರ ಜಂಕ್ಷನ್ ವರೆಗೆ ವಿಸ್ತರಿಸಿ, ಮಾಯಕೊಂಡ ನಿಲ್ದಾಣದಲ್ಲಿ ವಿಶ್ವಮಾನವ ಹಾಗೂ ಇಂಟರ್ ಸಿಟಿ ರೈಲುಗಳಿಗೆ ನಿಲುಗಡೆ ನೀಡಬೇಕು. ಬೆಳಗಾವಿ-ಮೈಸೂರು ರೈಲು ವೇಳಾಪಟ್ಟಿ ಪರಿಷ್ಕರಣೆ ಮಾಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
IMG 20260226 WA0472

ಹನುಮನಹಳ್ಳಿ ರೈಲು ನಿಲ್ದಾಣದಲ್ಲಿ ಕುಡಿಯುವ ನೀರು, ಶೌಚಾಲಯ, ಮೇಲ್ಛಾವಣಿ ಮತ್ತು ಪ್ಲಾಟ್‌ಫಾರ್ಮ್ ವಿಸ್ತರಣೆ, ರೈಲು ನಿಲ್ದಾಣಗಳಲ್ಲಿ ಸುರಕ್ಷತಾ ಕಾಮಗಾರಿ ಕೈಗೊಳ್ಳಬೇಕು ಎಂದು ಬೇಡಿಕೆ ಸಲ್ಲಿಸಿದರು.‌ ಇದೇ ವೇಳೆ ರೈಲ್ವೆಗೆ ಭೂಮಿ ನೀಡಿದ ಸಂತ್ರಸ್ತೆ ಶ್ರೀಮತಿ ರೇಣುಕಾ ಅವರಿಗೆ ಮಾನವೀಯ ನೆಲೆಯ ಆಧಾರದ ಮೇಲೆ ಉದ್ಯೋಗ ನೀಡಬೇಕು ಎಂದು ಮನವಿ ಮಾಡಲಾಯಿತು.‌

ಕಾಲುವೆಗಳಲ್ಲಿ ಜಮಾವಣೆಗೊಂಡಿರುವ ಹೂಳನ್ನು ತೆಗೆಸಿ ನೀರಿನ ಸರಾಗ ಹರಿವಿಗೆ ಅನುವು ಮಾಡಿಕೊಡಬೇಕು. ಅಗತ್ಯ ನಿರ್ವಹಣೆಯಿಲ್ಲದೆ ನೀರು ತಲುಪದ ಭೂಮಿಗೆ (Tail-end ಪ್ರದೇಶ) ನೀರಾವರಿ ಸೌಲಭ್ಯ ಕಲ್ಪಿಸಿ ಕೊನೆಯ ಭಾಗದ ರೈತರಿಗೆ ನೆರವಾಗಲು 60 ವರ್ಷ ಹಳೆಯದಾದ ಮತ್ತು ಜೀರ್ಣಾವಸ್ಥೆಯಲ್ಲಿರುವ ನೀರು ನಿಯಂತ್ರಣ ಕಾಮಗಾರಿಗಳನ್ನು ದುರಸ್ತಿಗೊಳಿಸಿ,ಭದ್ರಾ ನಾಲೆಗಳ ಆಧುನೀಕರಣಗೊಳಿಸಿ ರೈತರ ಎರಡು ಬೆಳೆಗೆ ಅನುಕೂಲ ಮಾಡಿಕೊಡಬೇಕು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಖನಿಜ ನಿಕ್ಷೇಪ ಶೋಧ ಹಾಗೂ ಸೋಲಾರ್ ಪ್ಲಾಂಟ್ ಗೆ ಭೂಮಿ ನೀಡಲು‌ ಉಬ್ರಾಣಿ ರೈತರ ವಿರೋಧ

ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ ವಿಠಲರಾವ್,  ರೈಲ್ವೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸ್ಟಿಂಗ್ ಪ್ರಕರಣದ ಕುರಿತು ತನಿಖೆಯಾಗಲಿ : ಕೆ.ಎನ್. ರಾಜಣ್ಣ

 ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ...

ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಚಿತ್ರದುರ್ಗ | ನಿವೃತ್ತಿಯಲ್ಲೂ ಆಡಳಿತ ತರಬೇತಿ ಸೇವೆ : ವಿ. ಮಲ್ಲೇಶಪ್ಪ ಅವರಿಗೆ ಸನ್ಮಾನ

 ನಿವೃತ್ತಿಯ ನಂತರವೂ ತಮ್ಮ ಜ್ಞಾನ ಮತ್ತು ಅನುಭವವನ್ನು ಸರ್ಕಾರಿ ಅಧಿಕಾರಿ ಹಾಗೂ...