ಚಿತ್ರದುರ್ಗ ನೂತನ ಡಿಸಿ ಆಫೀಸ್ ಕಟ್ಟಡಕ್ಕೆ ಭೂಮಿ ನೀಡಲು ತೋಟಗಾರಿಕೆ ಇಲಾಖೆ ಸಚಿವರ ಸಮ್ಮತಿ

Date:


  ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆಯ 6.30 ಎಕರೆ ಭೂಮಿಯನ್ನು ನೀಡಲು ತೋಟಗಾರಿಕೆ ಇಲಾಖೆ ಸಚಿವರು ಸಮ್ಮತಿ ಸೂಚಿಸಿದ್ದು, ಚಿತ್ರದುರ್ಗ ನಗರ ಸಮೀಪದ ಕುಂಚಿಗನಾಳು ಹತ್ತಿರ ನಿರ್ಮಾಣ ಮಾಡಲಾಗಿರುವ ಜಿಲ್ಲಾಧಿಕಾರಿಗಳ ನೂತನ ಕಚೇರಿ ಕಟ್ಟಡವನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಲು ಗುರುವಾರದಂದು ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಜಂಟಿಯಾಗಿ ನಡೆಸಿದ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

- Advertisement -


ಚಿತ್ರದುರ್ಗ ಜಿಲ್ಲೆಯ ಕುಂಚಿಗನಾಳು ಹತ್ತಿರ ನಿರ್ಮಾಣ ಮಾಡಲಾಗಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿಯು ಚಿತ್ರದುರ್ಗ ನಗರದಿಂದ ದೂರವಿದ್ದು, ಕಚೇರಿ ಕಾರ್ಯಗಳಿಗೆ ಬರುವ ಜಿಲ್ಲೆಯ ಸಾರ್ವಜನಿಕರಿಗೆ ಓಡಾಡಲು ತುಂಬಾ ತೊಂದರೆಯಾಗುವ ಕಾರಣದಿಂದ, ಈ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡವನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಿ, ಸಾರ್ವಜನಿಕ ಹಿತದೃಷ್ಟಿಯಿಂದ ಚಿತ್ರದುರ್ಗ ನಗರದಲ್ಲಿಯೇ ನೂತನವಾಗಿ ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣ ಮಾಡುವ ಸಂಬಂಧ ಕಳೆದ ಒಂದು ವರ್ಷದಿಂದ ಕಂದಾಯ ಇಲಾಖೆ ಸಚಿವರು, ವೈದ್ಯಕೀಯ ಇಲಾಖೆ ಸಚಿವರು ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಜೊತೆ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಶಾಸಕರು ಬೆಂಗಳೂರಿನ ವಿಧಾನಸೌಧ ಹಾಗೂ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿಯೂ ಸಹ ನಿರಂತರವಾಗಿ ಸಭೆ ನಡೆಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...


ಈ ಸಂಬಂಧ ಗುರುವಾರದಂದು ವಿಕಾಸಸೌಧದ ಕೊಠಡಿ ಸಂಖ್ಯೆ 342 ರಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹಾಗೂ ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಇವರುಗಳ  ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.  


      ಸಭೆಯಲ್ಲಿ ಪ್ರಸ್ತುತ ಇರುವ ತೋಟಗಾರಿಕೆ ಇಲಾಖೆಯ 6.10 ಎಕರೆ ಮತ್ತು ಹಾಪ್‍ಕಾಮ್ಸ್ ವ್ಯಾಪ್ತಿಯ 0.20 ಎಕರೆ ಸೇರಿ ಒಟ್ಟು 6.30 ಎಕರೆ ಜಮೀನನ್ನು ನೂತನ ಜಿಲ್ಲಾಧಿಕಾರಿಗಳ ನಿರ್ಮಾಣಕ್ಕೆ ನೀಡಲು ತೀರ್ಮಾನಿಸಲಾಗಿರುತ್ತದೆ. ತೋಟಗಾರಿಕೆ ಇಲಾಖೆಗೆ ಈ ಜಮೀನಿನ ಬದಲಾಗಿ ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ಚಿಕ್ಕಪುರ ಗ್ರಾಮದ ರಿ.ಸ.ನಂ.96 ಮತ್ತು ರಿ.ಸ.ನಂ.101 ರಲ್ಲಿ 20.00 ಎಕರೆ ಜಮೀನನ್ನು ಸರ್ಕಾರದಿಂದ ನೀಡಲು ತೀರ್ಮಾನ ಕೈಗೊಳ್ಳಲಾಗಿರುತ್ತದೆ.  ಈಗ ಇರುವ ತೋಟಗಾರಿಕೆ ಇಲಾಖೆ ಕಚೇರಿಗೆ, ಇದೇ ಜಾಗದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗುವ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿಯೇ ಸ್ಥಳಾವಕಾಶ ಕಲ್ಪಿಸಿಕೊಡಲು ತೀರ್ಮಾನಿಸಲಾಯಿತು.


ಸಭೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ರವರು, ತೋಟಗಾರಿಕೆ ಇಲಾಖೆ ಕಾರ್ಯದರ್ಶಿಗಳು, ತೋಟಗಾರಿಕೆ ಇಲಾಖೆ ನಿರ್ದೇಶಕರು, ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಚಿತ್ರದುರ್ಗ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತ ಮತ್ತಿತರ ಉನ್ನತ ಅಧಿಕಾರಿಗಳು ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಭದ್ರ ನೀರು ಹರಿಸಲು ಅನುಮತಿ ಸ್ವಾಗತಾರ್ಹ: ಜಿಲ್ಲೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ಐದು ದಶಕಗಳ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡಿದ್ದು, ಕಾಮಗಾರಿ...

ಚಿತ್ರದುರ್ಗ | ನೀರು ಮತ್ತು ನೈರ್ಮಲ್ಯ ವಿಭಾಗದ 80 ಕಾಮಗಾರಿಗಳಲ್ಲಿ 28 ಕಡತ ಮಾತ್ರ ಲಭ್ಯ!

ಚಿತ್ರದುರ್ಗ ಜಿಲ್ಲೆಗೆ 2023-24 ಮತ್ತು 2024-25ನೇ ಸಾಲಿನಲ್ಲಿ ಕುಡಿಯುವ ನೀರು ಹಾಗೂ...

ಚಿತ್ರದುರ್ಗ |ಮಾರಾಟಕ್ಕಿರುವ ಎತ್ತುಗಳನ್ನು ಕೊಳ್ಳುವವರು ದಿಕ್ಕಿಲ್ಲ; ರೈತರ ಪರದಾಟ

ಮಧ್ಯ ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಚಿತ್ರದುರ್ಗ ಜಿಲ್ಲೆಯ...

ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು...