ಚಿತ್ರದುರ್ಗ | ಅಂತರ್ಜಾತಿ ವಿವಾಹ: ರಕ್ಷಣೆ ಕೋರಿ ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Date:

ಅಂತರ್ಜಾತಿ ವಿವಾಹವಾದ ಪ್ರೇಮಿಗಳು ತಮ್ಮ ಪೋಷಕರಿಂದ ಬೆದರಿಕೆ ಇದೆ. ನಮಗೆ ರಕ್ಷಣೆ ನೀಡಬೇಕೆಂದು ಕೋರಿ ಚಿತ್ರದುರ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕಚೇರಿಯ ಮೆಟ್ಟಿಲೇರಿದ್ದಾರೆ.

- Advertisement -

ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜೆ ಕೆರೆಯ ಹರೀಶ್ ಮತ್ತು ಕೊಂಡ್ಲಹಳ್ಳಿ ಮೂಲದ ಹರ್ಷಿತಾ  ಇಬ್ಬರು ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಹರ್ಷಿತಾ ಪಾಲಕರ ವಿರೋಧದ ನಡುವೆಯೂ ಇಬ್ಬರು ಅಂತರ್ಜಾತಿ ವಿವಾಹವಾಗಿದ್ದಾರೆ. ಹರ್ಷಿತಾ ಎಂಎಸ್​ಸಿ ವ್ಯಾಸಂಗ ಮಾಡುತ್ತಿದ್ದರೆ, ಹರೀಶ್​ ಐಟಿಐ ಓಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇಬ್ಬರು ಬೇರೆ ಬೇರೆ ಜಾತಿಗೆ ಸೇರಿದವರಾಗಿದ್ದರಿಂದ, ಇಬ್ಬರ ಮದುವೆಗೆ ಯುವತಿಯ ಪಾಲಕರು ವಿರೋಧ ವ್ಯಕ್ತಡಿಸಿದ್ದರು. ಆದಾಗ್ಯೂ, ಚಿತ್ರದುರ್ಗ ಹೊರವಲಯದ ದೇವಸ್ಥಾನದಲ್ಲಿ ಇಬ್ಬರು ಮದುವೆ ಮಾಡಿಕೊಂಡಿದ್ದಾರೆ. ಮದುವೆಯ ಬಳಿಕವೂ ತಮ್ಮಿಬ್ಬರನ್ನು ದೂರ ಮಾಡಲು ಪಾಲಕರು ಯತ್ನಿಸಿದ್ದಾರೆ ಎಂದು ಜೋಡಿ ಆರೋಪ ಮಾಡಿದೆ.

ಪಾಲಕರ ಬೆದರಿಕೆಯ ಕುರಿತು ಹರ್ಷಿತಾ ಪತ್ರ ಬರೆದು ಓದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್​ ಆಗಿದೆ. ತೀವ್ರ ವಿರೋಧದ ಹಿನ್ನೆಲೆಯಲ್ಲಿ ನವೆಂಬರ್‌ 02ರಂದು ಹರೀಶ್​ ಮತ್ತು ಹರ್ಷಿತಾ ಚಿತ್ರದುರ್ಗದ ಪೊಲೀಸ್​ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ, ತಮ್ಮ ಅಳಲನ್ನು ತೋಡಿಕೊಂಡು ರಕ್ಷಣೆ ಕೋರಿದ್ದಾರೆ.

ಸೂಕ್ತ ರಕ್ಷಣೆಯನ್ನು ನೀಡುವುದಾಗಿ ಭರವಸೆ ನೀಡಿರುವ ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ ಅವರು ನವದಂಪತಿಗಳನ್ನು ಮನೆಗೆ ಕಳುಹಿಸಿಕೊಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...