ಮೊಳಕಾಲ್ಮೂರು | ವಿಂಡ್ ಫ್ಯಾನ್ ಕಾಮಗಾರಿ ಸ್ಥಗಿತಕ್ಕೆ ರೈತ ಸಂಘ ಪ್ರತಿಭಟನೆ

Date:

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಕ್ರಮವಾಗಿ ವಿಂಡ್ ಫ್ಯಾನ್(ಗಾಳಿ ಯಂತ್ರ) ಅಳವಡಿಸಲಾಗಿದ್ದು, ಅವುಗಳಿಂದ ಉಂಟಾಗುತ್ತಿರುವ ಕರ್ಕಶ ಶಬ್ದದಿಂದ ಸಾರ್ವಜನಿಕರು, ಜಾನುವಾರುಗಳು ಹಾಗೂ ಪರಿಸರಕ್ಕೆ ತೀವ್ರ ತೊಂದರೆಯಾಗುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘವು ಜುಲೈ 1ರಂದು ತಾಲೂಕು ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

- Advertisement -

ಈ ಕುರಿತು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ರೈತ ಮುಖಂಡರು, “ಮೊಳಕಾಲ್ಮೂರು ತಾಲೂಕಿನಾದ್ಯಂತ ಬುಡಕಟ್ಟು ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಅವರು ಕುರಿ, ಮೇಕೆ, ದನಗಳು ಸೇರಿದಂತೆ ಜಾನುವಾರುಗಳ ಸಾಕಣೆ ಮಾಡುತ್ತ ಕೃಷಿಯನ್ನೇ ಜೀವನೋಪಾಯವನ್ನಾಗಿ ಮಾಡಿಕೊಂಡಿದ್ದಾರೆ. ವಿಂಡ್ ಫ್ಯಾನ್‌ಗಳಿಂದ ಉಂಟಾಗುವ ನಿರಂತರ ಕರ್ಕಶ ಶಬ್ದದಿಂದ ಜನರ ನೆಮ್ಮದಿ, ಜಾನುವಾರುಗಳ ಆರೋಗ್ಯ ಹಾಗೂ ಗ್ರಾಮೀಣ ಜೀವನದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

“ಕೋನಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಸಗಿ ಕಂಪೆನಿಯವರು ಸೋಲಾರ್ ಹಾಗೂ ವಿಂಡ್ ಫ್ಯಾನ್ ಯೋಜನೆಗಳ ಕಾಮಗಾರಿಯನ್ನು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ನಡೆಸುತ್ತಿದ್ದಾರೆ. ಅಲ್ಲದೆ, ಹೊರರಾಜ್ಯದ ಸಿಬ್ಬಂದಿ ಹಾಗೂ ಪೊಲೀಸರು, ಭದ್ರತಾ ಸಿಬ್ಬಂದಿಯ ಮೂಲಕ ರೈತರನ್ನು ಬೆದರಿಸಲಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಗ್ರಾಮ, ವಾಸದ ಮನೆಗಳ ಸಮೀಪ ಅಳವಡಿಸಿರುವ ವಿಂಡ್ ಫ್ಯಾನ್‌ಗಳನ್ನು ಜನವಸತಿ ಪ್ರದೇಶದಿಂದ ಕನಿಷ್ಠ 1 ರಿಂದ 2 ಕಿಲೋಮೀಟರ್ ದೂರಕ್ಕೆ ಸ್ಥಳಾಂತರಿಸಬೇಕು. ಇಲ್ಲಿಯ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಹಾಗೂ ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಸಕರು ಮಧ್ಯಪ್ರವೇಶಿಸಿ ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು” ಎಂದು ರೈತ ಸಂಘ ಒತ್ತಾಯಿಸಿದೆ.

ಈ ಸುದ್ದಿ ಓದಿದ್ದೀರಾ? ಹೂವಿನಹಡಗಲಿ ತಾಲೂಕು ಬರಪೀಡಿತವೆಂದು ಘೋಷಿಸುವಂತೆ ರೈತರ ಆಗ್ರಹ

“ಜುಲೈ 1ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಪ್ರತಿಭಟನೆಯಲ್ಲಿ ಜಿಲ್ಲಾ ಹಾಗೂ ರಾಜ್ಯ ಮಟ್ಟದ ರೈತ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಲು ಮನವಿ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...