ಅತ್ಯಾಚಾರ ಆರೋಪಿ ಮುರುಘಾ ಬಂಧನಕ್ಕೆ ತಡೆ; ಬಿಡುಗಡೆಗೆ ಹೈಕೋರ್ಟ್‌ ಸೂಚನೆ

Date:

ಶಿವಮೂರ್ತಿ ಮುರುಘಾ ವಿರುದ್ಧದ 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಅವರನ್ನು ಸೋಮವಾರ ಬಂಧಿಸಲಾಗಿದೆ. ಆದರೆ, ಅವರ ಬಂಧನಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಶಿವಮೂರ್ತಿ ಮುರುಘಾ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಶಿವಮೂರ್ತಿ ಮುರುಘಾ ಅವರ ಬಂಧನವನ್ನು ಪ್ರಶ್ನಿಸಿ ಅವರ ವಕೀಲ ಉಮೇಶ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್‌ರವರಿದ್ದ ಪೀಠ, “ಮುರುಘಾ ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್​ ನೀಡಿರುವುದು ಹೈಕೋರ್ಟ್‌ ಆದೇಶದ ಉಲ್ಲಂಘನೆಯಾಗಿದೆ. ಅವರನ್ನು ಬಿಡುಗಡೆಗೊಳಿಸಬೇಕು” ಎಂದು ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

“ಮುಂದಿನ ಆದೇಶದವರೆಗೂ 2ನೇ ಪೋಕ್ಸೋ ಪ್ರಕರಣದ ವಿಚಾರಣೆ ಮುಂದೂಡಬೇಕು” ಎಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.

ಚಿತ್ರದುರ್ಗಕ್ಕೆ ಪ್ರವೇಶಿಸದಂತೆ ಹೈಕೋರ್ಟ್‌ ಆದೇಶವಿದೆ. ಆದರೂ, ಅರವನ್ನು ಬಂಧಿಸಿ ಚಿತ್ರದುರ್ಗಕ್ಕೆ ಕರೆತಂದಿರುವುದು ಆದೇಶ ಉಲ್ಲಂಘನೆಯಾಗಿದೆ. ಹೈಕೋರ್ಟ್ ಆದೇಶದಂತೆ 2ನೇ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಮುಂದೂಡಬೇಕಿತ್ತು. ಆದರೆ, ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಕೇಸ್ ಬೇರೆಯದಾದರೂ ನಿರ್ಬಂಧ ಬದಲಾಗುವುದಿಲ್ಲ” ಎಂದು ಹೈಕೋರ್ಟ್‌ ಹೇಳಿದೆ.

“ಶಿವಮೂರ್ತಿ ಮುರುಘಾ ಅವರನ್ನು ಬಿಡುಗಡೆ ಮಾಡುವಂತೆ ಚಿತ್ರದುರ್ಗ ಕಾರಾಗೃಹಕ್ಕೆ ಹೈಕೋರ್ಟ್‌ ಆದೇಶಿಸಿದೆ. ಅದೇಶವನ್ನು ಪರಿಶೀಲಿಸಿ ಬಿಡುಗಡೆ ಮಾಡುವ ಸಾಧ್ಯತೆ ಇದೆ” ಎಂದು ಶಿವಮೂರ್ತಿ ಮುರುಘಾ ಅವರ ವಕೀಲರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬ್ಯಾರೇಜಿಗೆ ನೀರು ತುಂಬಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಧರಣಿ

ಬ್ಯಾರೇಜಿಗೆ ನೀರು ತುಂಬಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು...

ಹಾವೇರಿ | ಎಸ್ಎಫ್ಐ ಜಿಲ್ಲಾ ಸಮಿತಿಯಿಂದ ʼವಿದ್ಯಾರ್ಥಿನಿಯರ ಸಮಾವೇಶʼ

ಪ್ರತಿ ವಿದ್ಯಾರ್ಥಿಯೂ ಸಮಾಜದ ಪ್ರಗತಿಗಾಗಿ ಚಿಂತಿಸಬೇಕು. ಸಮಾಜದಲ್ಲಿನ ಅನೇಕ ಸವಾಲುಗಳನ್ನು ಎದುರಿಸಲು...

ಬೆ. ಗ್ರಾಮಾಂತರ | ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟನೆ

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಕನಸಿದ ಪಶು ಆಸ್ಪತ್ರೆ ನೆಲಮಂಗಲದ...

ರಾಯಚೂರು | ನಿರ್ಮಾಣವಾಗಿ 6 ತಿಂಗಳಿಗೇ ಬಿರುಕುಬಿಟ್ಟ ರಸ್ತೆ

ನಿರ್ಮಾಣ ಮಾಡಿ ಇನ್ನೂ ಆರು ತಿಂಗಳೂ ಕಳೆದಿಲ್ಲ. ಆಗಲೇ ಬಿರುಕು ಬಿಟ್ಟಿದ್ದು,...