ಶಿವಮೂರ್ತಿ ಸ್ವಾಮಿ ಪೋಕ್ಸೋ ಪ್ರಕರಣ: ನ.26ಕ್ಕೆ ಕೋರ್ಟ್ ತೀರ್ಪು

Date:

ಇಲ್ಲಿನ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೊ ಪ್ರಕರಣದ ವಿಚಾರಣೆ ಮಂಗಳವಾರ ಪೂರ್ಣಗೊಂಡಿದ್ದು, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರಪ್ಪ ಹಡಪದ ನ.26ಕ್ಕೆ ಆದೇಶ ಕಾಯ್ದಿರಿಸಿದ್ದಾರೆ.

- Advertisement -

ಶರಣರ ವಿರುದ್ಧದ 2 ಪೋಕ್ಸೊ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಸಂಬಂಧ ಸುದೀರ್ಘ ವಿಚಾರಣೆ ನಡೆದಿದೆ. ಮಂಗಳವಾರ ನಡೆದ ವಿಚಾರಣೆ ವೇಳೆ ಸರ್ಕಾರಿ ವಕೀಲರಾದ ಜಗದೀಶ್‌ ಸಂತ್ರಸ್ತೆಯ ಪರ ಅಂತಿಮ ವಾದ ಮಂಡಿಸಿದರು. ಈ ಪ್ರಕರಣಗಳಲ್ಲಿ ಶಿವಮೂರ್ತಿ ಸ್ವಾಮಿ ಪ್ರಸ್ತುತ ಷರತ್ತುಬದ್ಧ ಜಾಮೀನು ಪಡೆದಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಚಿತ್ರದುರ್ಗದ ಶಿವಮೂರ್ತಿ ಸ್ವಾಮಿ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಶಿವಮೂರ್ತಿ ಸ್ವಾಮಿ, ಎ2 ಮಹಿಳಾ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.

ಅದೇ ವರ್ಷ ಆ.27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, 2022ರ ಸೆ.01 ರಂದು ಎ1 ಶಿವಮೂರ್ತಿ ಸ್ವಾಮಿ, ಎ2 ವಾರ್ಡನ್ ರಶ್ಮಿ ಬಂಧನಕ್ಕೊಳಗಾಗಿದ್ದರು. ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಶಿವಮೂರ್ತಿ ಸ್ವಾಮಿ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಆ ಪ್ರಕರಣದಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಎಂದು ಕೂಡ ಉಲ್ಲೇಖಿಸಿದ್ದರು.

ಇದನ್ನು ಓದಿದ್ದೀರಾ? ಚಿತ್ರದುರ್ಗ | ಭೂಮಿ,ವಸತಿ ರಹಿತರ ಬಗರ್ ಹುಕುಂ ಮಂಜೂರಾತಿಗಾಗಿ ನವೆಂಬರ್ 26ಕ್ಕೆ ಬೆಂಗಳೂರು ಚಲೋ

ಈ ವೇಳೆ ಎ1 ಶಿವಮೂರ್ತಿ ಸ್ವಾಮಿ, ಎ2 ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ, ಎ6 ಶಿವಮೂರ್ತಿ ಸ್ವಾಮಿ ಸಹಾಯಕ ಮಹಾಲಿಂಗ, ಎ7 ಅಡುಗೆಭಟ್ಟ ಕರಿಬಸಪ್ಪ ವಿರುದ್ದ ಪ್ರಕರಣ ದಾಖಲಾಗಿದ್ದು, ಸಂಪೂರ್ಣ ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಹಾಗೂ ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡವು 2022ರ ಅ.27 ರಂದು 694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದರಲ್ಲಿ 347 ಪುಟಗಳ ಎ ಮತ್ತು ಬಿ ಎಂದು ಆರೋಪಪಟ್ಟಿ ಸಲ್ಲಿಸಿದ್ದರು.

2ನೇ ಪೋಕ್ಸೋ ಕೇಸಿನಲ್ಲಿ ಜಾಮೀನು ಪಡೆಯದ ಹಿನ್ನೆಲೆಯಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹಿನ್ನೆಲೆ ಪುನಃ ನ.20ರಂದು ಮಧ್ಯಾಹ್ನ ಶಿವಮೂರ್ತಿ ಸ್ವಾಮಿ ಮತ್ತೆ ಬಂಧನಕ್ಕೊಳಗಾದರು. ಬಳಿಕ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಆಗ ನ.20 ಸಂಜೆ ವೇಳೆಗೆ ಹೈಕೋರ್ಟ್ ಸೂಚನೆ ಮೇರೆಗೆ ಬಿಡುಗಡೆಗೊಂಡಿದ್ದರು.

ಸಂತ್ರಸ್ತೆಯರು ಶಿವಮೂರ್ತಿ ಸ್ವಾಮಿ ಜಾಮೀನು ರದ್ದತಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಮುಖ್ಯ ಸಾಕ್ಷ ವಿಚಾರಣೆ ಪೂರ್ಣ ಆಗುವವರೆಗೆ ಶಿವಮೂರ್ತಿ ಸ್ವಾಮಿ ಬಂಧನದಲ್ಲಿಡುವಂತೆ ಸುಪ್ರಿಂ ಕೋರ್ಟ್ ಆದೇಶಿಸಿತ್ತು. ಹೀಗಾಗಿ 2024ರ ಮೇ.27 ರಂದು ಕೋರ್ಟ್ ಎದುರು ಶರಣಾದ ಶಿವಮೂರ್ತಿ ಸ್ವಾಮಿಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿತ್ತು. ಬಳಿಕ ಸಂತ್ರಸ್ತೆಯರಿಬ್ಬರು ಸೇರಿದಂತೆ 13 ಜನರ ಸಾಕ್ಷಿ ವಿಚಾರಣೆ ಅಂತ್ಯವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಶಿವಮೂರ್ತಿ ಸ್ವಾಮಿ ಬಿಡುಗಡೆಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...