ಚಳ್ಳಕೆರೆ | ಖಾಸಗಿ ಬಸ್ ನಿಲ್ದಾಣದ ಅನೈರ್ಮಲ್ಯ, ಅವ್ಯವಸ್ಥೆ; ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ

Date:

ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ, ಅನೈರ್ಮಲ್ಯ ತಾಂಡವವಾಡುತ್ತಿದ್ದು, ಈ ಸಮಸ್ಯೆಯನ್ನು ಯಾರು ಪರಿಹರಿಸುತ್ತಾರೆ ಎನ್ನುವುದೇ ಪ್ರಶ್ನೆಯಾಗಿ ಉಳಿದಿದೆ.‌ ಗಮನಹರಿಸಬೇಕಾಗಿದ್ದ ಸಂಬಧಿತ ಅಧಿಕಾರಿಗಳೂ ಕೂಡ ಕಣ್ಮುಚ್ಚಿ ಕುಳಿತಿರುವುದು ಚಿತ್ರದುರ್ಗ ಜಿಲ್ಲೆಯ ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣದ ಗೋಳು ಒಂದೆರಡಲ್ಲ. ಇದನ್ನು ಪರಿಹರಿಸುವವರೇ ಇಲ್ಲದಂತಾಗಿದೆ. ಹಳೇ ಶೌಚಾಲಯ ಇದ್ದರೂ ಕೂಡ ಅದರ ಎದುರಿಗೆ ಹೊಸದಾಗಿ ಶೌಚಾಲಯ ನಿರ್ಮಾಣ ಮಾಡುವ ಕಾರ್ಯಕ್ಕೆ ಇತ್ತೀಚೆಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರು. ಇರುವ ಹಳೆಯ ಶೌಚಾಲಯ ನೈರ್ಮಲ್ಯ ಕಾಪಾಡಿದರೆ ಸಾಕು ಎಂದು ಸಲಹೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
1001757851
ಶೌಚಾಲಯದ ಪಕ್ಕದ ಚರಂಡಿಗೆ ತ್ಯಾಜ್ಯ ನೀರು

ಸದ್ಯ ಕಾರ್ಯ ನಿರ್ವಹಿಸುತ್ತಿರುವ ಹಳೆಯ ಶೌಚಾಲಯವು ಆಗಾಗ ಸುದ್ದಿಗೆ ಮತ್ತು ಟೀಕೆಗೆ ಒಳಗಾಗುತ್ತಿದ್ದು, ಅಲ್ಲಿನ ಅನೈರ್ಮಲ್ಯ ಸಾರ್ವಜನಿಕರಿಗೆ ಪ್ರಶ್ನೆಯಾಗಿ ಉಳಿದಿದೆ. ಬಹಳ ದಿನಗಳಿಂದಲೂ ಅಲ್ಲಿನ ನಿರ್ವಹಣೆ ಮಾಡುವವರಿಗೆ ಸಾರ್ವಜನಿಕರು ಎಚ್ಚರಿಸುತ್ತ ಬಂದಿದ್ದರೂ, ಅವರು ಶೌಚಾಲಯದ ಅನೈರ್ಮಲ್ಯತೆ ಬಗ್ಗೆ ನಿರ್ಲಕ್ಷ್ಯ ತಾಳಿದ್ದಾರೆ. ಇದರಿಂದ ಶಾಂತಿನಗರ ಸೇರಿದಂತೆ ಅಕ್ಕಪಕ್ಕದ ಬಡಾವಣೆಯ ಮನೆಯ ನಿವಾಸಿಗಳು ತೊಂದರೆಗೊಳಗಾಗಿದ್ದು, ಬಸ್ ನಿಲ್ದಾಣದಲ್ಲಿ ಸಂಚರಿಸುವ ಪ್ರಯಾಣಿಕರೂ ಕೂಡ ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ಎದುರಾಗಿದೆ.

ಖಾಸಗಿ ಬಸ್ ನಿಲ್ದಾಣದ ಶೌಚಾಲಯವನ್ನು ನಿರ್ವಹಣೆ ಮಾಡುವ ಗುತ್ತಿಗೆದಾರರು ಶೌಚಾಲಯದ ತ್ಯಾಜ್ಯ ನೀರನ್ನು ಹೊರಚರಂಡಿ ಮತ್ತು ರಸ್ತೆಯ ಮೇಲೆ ಹರಿಬಿಡುತ್ತಿದ್ದು ಇದರ ದುರ್ವಾಸನೆಗೆ ಸ್ಥಳೀಯರು, ಪ್ರಯಾಣಿಕರು ಮತ್ತು ಅಕ್ಕಪಕ್ಕದ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದುರ್ವಾಸನೆಯಿಂದ ಕೂಡಿದ ತ್ಯಾಜ್ಯ ಚರಂಡಿ ಸೇರುತ್ತಿದ್ದು, ಇದು ಶಾಂತಿನಗರ ಸೇರಿದಂತೆ ಮುಂದಿನ ಬಡಾವಣೆಯ ಚರಂಡಿಗಳಲ್ಲಿ ಸೇರುತ್ತದೆ. ಅಲ್ಲಿಂದ ಮುಂದಿನ ಬಡಾವಣೆಗಳಿಗೆ ತ್ಯಾಜ್ಯ ನೀರು ಹರಿಯುತ್ತಿದ್ದು, ದುರ್ವಾಸನೆಯಿಂದ ಸಾಂಕ್ರಾಮಿಕ ರೋಗಗಳು ಉಂಟಾಗುವ ಭೀತಿ ಎದುರಿಸುತ್ತಿದ್ದಾರೆ. ಈ ಬಗ್ಗೆ ಅಲ್ಲಿ ನಿರ್ವಹಣೆ ಮಾಡುವವರಿಗೆ ಎಚ್ಚರಿಸಿ, ತಿಳುವಳಿಕೆ ನೀಡಿದರೂ, ಅವರು ಪದೇ ಪದೆ ಇದನ್ನೇ ಮುಂದುವರಿಸಿದ್ದಾರೆ. ಇದರಿಂದಾಗಿ ಸುತ್ತಮುತ್ತಲಿನ ಪ್ರದೇಶಗಳ ನೈರ್ಮಲ್ಯ ಹಾಳಾಗುತ್ತಿದೆ” ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

1001757853
ಶೌಚಾಲಯದ ಹೊರಭಾಗದಲ್ಲಿ ಮಲಮೂತ್ರ ವಿಸರ್ಜನೆ

ಚಳ್ಳಕೆರೆ ಕರವೇ ಪ್ರವೀಣ್ ಶೆಟ್ಟಿ ಬಣ ಗೌರವಾಧ್ಯಕ್ಷ ಸಿ ಬೋಜರಾಜ ಈದಿನ ಡಾಟ್ ಕಾಮ್‌ನೊಂದಿಗೆ ಮಾತನಾಡಿ, “ಚಳ್ಳಕೆರೆಯ ಖಾಸಗಿ ಬಸ್‌ ನಿಲ್ದಾಣದಲ್ಲಿರುವ ಶೌಚಾಲಯದ ನೀರನ್ನು ಎರಡು ದಿನಕ್ಕೊಮ್ಮೆ ಚರಂಡಿಗೆ ಬಿಡುತ್ತಿದ್ದಾರೆ. ಇದರ ಬಗ್ಗೆ ನಗರಸಭೆಯವರ ಗಮನಕ್ಕೆ ತಂದರೂ, ಯಾವುದೇ ಕ್ರಮ ಜರುಗಿಸಿರುವುದಿಲ್ಲ. ಅಲ್ಲಿ ಹೋಗಿ ವಿಚಾರಿಸಿದಾಗ ಅವನು ಶೌಚಾಲಯಕ್ಕೆ ಬೀಗವನ್ನು ಹಾಕಿಕೊಂಡು ಅಲ್ಲಿಂದ ಪರಾರಿಯಾಗುತ್ತಾನೆ. ಮರುದಿನ ಮತ್ತೆ ಅದೇ ಪುನಾರಾವರ್ತನೆಯಾಗುತ್ತಿದೆ. ಇಲ್ಲಿನ ಜನ ದುರ್ವಾಸನೆಗೆ ಬೇಸತ್ತಿದ್ದಾರೆ. ಮೇಲಿನ ಅಧಿಕಾರಿಗಳು ಸಮಸ್ಯೆ ಬಗ್ಗೆ ಗಮನಹರಿಸಬೇಕು” ಎಂದು ಒತ್ತಾಯಿಸಿದ್ದಾರೆ.
  
ಸ್ಥಳೀಯ ಮುಖಂಡ ತಿಮ್ಮರಾಜು ಮಾತನಾಡಿ, “ಶೌಚಾಲಯದ ಗಲೀಜನ್ನು ಚರಂಡಿಗೆ ಬಿಡುತ್ತಾರೆ. ಸಾಕಷ್ಟು ಬಾರಿ ನಗರಸಭೆ ಅಧಿಕಾರಿಗಳ ಗಮನಕ್ಕೂ ತಂದಿದ್ದೇವೆ. ಗಮನಕ್ಕೆ ತಂದರೂ ಕೂಡಾ ಇದು ಮುಂದುವರೆದಿದೆ. ಅಂದರೆ ನಗರಸಭೆ ಸಾರ್ವಜನಿಕರ ಮೇಲೆ ಎಷ್ಟು ಕಾಳಜಿ ವಹಿಸುತ್ತದೆಂದು ತಿಳಿಯುತ್ತದೆ. ಇದರ ಬಗ್ಗೆ ಯಾಕಿಷ್ಟು ಬೇಜವಾಬ್ದಾರಿತನ ತೋರುತ್ತಿದ್ದಾರೆಂದು ತಿಳಿಯುತ್ತಿಲ್ಲ. ಶೌಚಾಲಯದ ಹೊಲಸನ್ನು ಈ ರೀತಿ ನಮ್ಮ ಶಾಸಕರ, ಸಂಸದರ, ನಮ್ಮ ಜನಪ್ರತಿನಿಧಿಗಳ ಮನೆಯ ಹತ್ತಿರ ಸುರಿದರೆ ಅವರಿಗೂ ಅರ್ಥವಾಗುತ್ತದೆ. ಈ ರೀತಿಯಾಗಿ ತ್ಯಾಜ್ಯ ನೀರು ಬಿಡುವುದರಿಂದ ಸಾರ್ವಜನಿಕರಿಗೆ ಇಲ್ಲಿ ವಾಸಿಸುವುದು ಎಷ್ಟು ಕಷ್ಟವಾಗುತ್ತದೆಂದು ಅವರಿಗೂ ತಿಳಿಯಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

1001757854
ಶೌಚಾಲಯದ ಬಾಗಿಲ ಬಳಿ ಅವ್ಯವಸ್ಥೆ, ಅನೈರ್ಮಲ್ಯ.

ಸ್ಥಳೀಯ ರಾಜಕೀಯ ಮುಖಂಡ ಪ್ರಸನ್ನ ಮಾತನಾಡಿ, “ಚಳ್ಳಕೆರೆ ನಗರಸಭೆಯ ಪೌರಾಯುಕ್ತರು,
ಇದಕ್ಕೆ ಸಂಬಂಧಪಟ್ಟಂತಹ ಅಧಿಕಾರಿಗಳು ಗಮನಿಸಿ ಸಾರ್ವಜನಿಕರಿಗೆ  ಒಳ್ಳೆಯ ಭಾಂದವ್ಯದೊಂದಿಗೆ ಕೆಲಸವನ್ನು ನಿರ್ವಹಿಸಬೇಕಾಗಿದೆ. ಸುಮಾರು ವರ್ಷಗಳಿಂದ ಇದು ದೊಡ್ಡ ಸಮಸ್ಯೆಯಾಗಿ ಉಳಿದಿದೆ. ಇಂಥಹ ಸಮಸ್ಯೆಗಳನ್ನು ಬಗೆಹರಿಸಲಾಗಲಿಲ್ಲ ಅಂದರೆ ಅಧಿಕಾರಿಗಳು ಇರುವುದಾದರು ಏಕೆ? ಪಾಲಿಕೆಯ ಸಭೆಯಲ್ಲಿ ಇದನ್ನು ಗಮನಕ್ಕೆ ತರುತ್ತೇವೆ” ಎಂದು ಕಿಡಿಕಾರಿದರು.

1001757852
ಶೌಚಾಲಯದ ಮುಂಬಾಗದ ದುಸ್ಥಿತಿ.

“ಈ ಶೌಚಾಲಯ ಬಸ್ ನಿಲ್ದಾಣದ ಒಂದು ಭಾಗದಲ್ಲಿದ್ದು, ಈ  ಪರಿಸ್ಥಿತಿಯಿದೆ. ಇನ್ನೊಂದು ಬದಿಯಲ್ಲಿ ಹೊಸ ಶೌಚಾಲಯವನ್ನು ನಡುರಸ್ತೆಯಲ್ಲಿ ನಿರ್ಮಾಣ ಮಾಡುತ್ತಿರುವುದು ವಿವಾದ ಸೃಷ್ಟಿಸಿದೆ. ಸರಿಯಾದ ನಿರ್ವಹಣೆ ಇಲ್ಲದೆ, ಇಲ್ಲಿಯೂ ಅದೇ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈಗಾಗಲೇ ಬಸ್‌ನಿಲ್ದಾಣದ ಹಿಂಭಾಗ ಮೂತ್ರ ವಿಸರ್ಜನೆ ಮಾಡಿ ಹೋಗುತ್ತಿದ್ದಾರೆ, ಇನ್ನು ಇಲ್ಲಿ ಹೊಸ ಶೌಚಾಲಯ ನಿರ್ಮಾಣ ಮಾಡಿದರೆ ಅದೇ ಪರಿಸ್ಥಿತಿ ಉಂಟಾಗುತ್ತದೆ. ಅಲ್ಲಿರುವ ವ್ಯಾಪಾರಸ್ಥರು ಮಳಿಗೆಗಳನ್ನು ಖಾಲಿ ಮಾಡಿಕೊಂಡು  ಬೀದಿಗೆ ಬರುವ ಪರಿಸ್ಥಿತಿ ಉಂಟಾಗುತ್ತದೆ” ಎಂದು ಅಲ್ಲಿನ ವ್ಯಾಪಾರಿಗಳು, ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆಗ್ರಹ.

“ಬಸ್ ನಿಲ್ದಾಣದಲ್ಲಿ ಹಗಲು, ಸಂಜೆ ವೇಳೆ ಮದ್ಯ ಕುಡಿದುಬಂದು ನಿಲ್ದಾಣದ ಆಸನಗಳ ಮೇಲೆ ಮಲಗಿಕೊಳ್ಳುವುದರಿಂದ ಮಹಿಳೆಯರು, ಪುರುಷರು ಹಾಗೂ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಇರಿಸುಮುರಿಸು ಉಂಟಾಗುತ್ತಿದೆ” ಎಂದು ಚಿತ್ರದುರ್ಗದಿಂದ ನಿತ್ಯ ಸಂಚರಿಸುವ ಮಹಿಳೆಯೊಬ್ಬರು ಅಳಲು ತೋಡಿಕೊಂಡರು.

ಅಧಿಕಾರಿಗಳು ಗಮನ ವಹಿಸಿ ಶೌಚಾಲಯದ ತ್ಯಾಜ್ಯ ವಿಲೇವಾರಿಗೆ ಸಮರ್ಪಕ ಸಂಪರ್ಕ ವ್ಯವಸ್ಥೆ ಕಲ್ಪಿಸಬೇಕಿದೆ. ಇದು ಸುತ್ತ ಮುತ್ತಲಿನ ಪ್ರದೇಶಗಳ ನೈರ್ಮಲ್ಯ ಮತ್ತು ಪ್ರಯಾಣಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಉತ್ತಮ ಕೆಲಸವಾಗಿದೆ.‌ ಅಧಿಕಾರಿಗಳು ತಕ್ಷಣವೇ ತ್ಯಾಜ್ಯ ವಿಲೇವಾರಿಗೆ ಪರಿಹಾರ ನೀಡಲಿ ಎನ್ನುವುದೇ ಚಳ್ಳಕೆರೆ ನಾಗರೀಕರ ಒತ್ತಾಯವಾಗಿದೆ.

WhatsApp Image 2025 11 17 at 5.21.38 PM
ವಿನಾಯಕ್ ಚಿಕ್ಕಂದವಾಡಿ
+ posts

ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ನೀರು ಮತ್ತು ನೈರ್ಮಲ್ಯ ವಿಭಾಗದ 80 ಕಾಮಗಾರಿಗಳಲ್ಲಿ 28 ಕಡತ ಮಾತ್ರ ಲಭ್ಯ!

ಚಿತ್ರದುರ್ಗ ಜಿಲ್ಲೆಗೆ 2023-24 ಮತ್ತು 2024-25ನೇ ಸಾಲಿನಲ್ಲಿ ಕುಡಿಯುವ ನೀರು ಹಾಗೂ...

ಚಿತ್ರದುರ್ಗ |ಮಾರಾಟಕ್ಕಿರುವ ಎತ್ತುಗಳನ್ನು ಕೊಳ್ಳುವವರು ದಿಕ್ಕಿಲ್ಲ; ರೈತರ ಪರದಾಟ

ಮಧ್ಯ ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಚಿತ್ರದುರ್ಗ ಜಿಲ್ಲೆಯ...

ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು...

ಹಿರಿಯೂರು | ಬೈ-ಎಲೆಕ್ಷನ್ ಪೈಪೋಟಿ: ಮೈತ್ರಿಕೂಟದಲ್ಲಿ ಟಿಕೆಟ್ ಕಸರತ್ತು!

ಸಚಿವ ಹಾಗೂ ಹಿರಿಯೂರು ಶಾಸಕ ಡಿ ಸುಧಾಕರ್ ಅವರ ನಿಧನದಿಂದ ಎದುರಾಗಿರುವ...