ಚಿತ್ತಾಪುರ | ಪಥಸಂಚಲನಕ್ಕೆ ಅನುಮತಿ ಕೋರಿ 12 ಸಂಘಟನೆಗಳ ಮನವಿ: ಶಾಂತಿಸಭೆಗೆ ಹೈಕೋರ್ಟ್‌ ನಿರ್ದೇಶನ

Date:

ಚಿತ್ತಾಪುರದಲ್ಲಿ ಆರೆಸ್ಸೆಸ್‌ ಪಥಸಂಚಲನವನ್ನು ವಿರೋಧಿಸಿ ಸುಮಾರು 12 ಸಂಘಟನೆಗಳು ತಾವೂ ಬೀದಿಗಿಳಿಯುವುದಾಗಿ ಅನುಮತಿ ಕೋರಿದ ಬೆನ್ನಲ್ಲೇ ಸಂಘಟನೆಗಳ ನಡುವೆ ಶಾಂತಿಸಭೆ ನಡೆಸುವಂತೆ ಕಲಬುರಗಿ ಹೈಕೋರ್ಟ್‌ ಜಿಲ್ಲಾಡಳಿತಕ್ಕೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಶಾಂತಿಸಭೆ ಆರಂಭವಾಗಿದೆ.

- Advertisement -

ಆರೆಸ್ಸೆಸ್‌ ತನ್ನ ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ 19ರಂದು ಆಯೋಜಿಸಿದ್ದ ಪಥಸಂಚಲನ ನಡೆಸಲು ಚಿತ್ತಾಪುರ ತಹಶೀಲ್ದಾರ್ ಅನುಮತಿ ನಿರಾಕರಿಸಿದ ನಂತರ ಆರೆಸ್ಸೆಸ್‌ನ ಕಲಬುರಗಿ ವಿಭಾಗದ ಮುಖ್ಯಸ್ಥ ಅಶೋಕ್ ಪಾಟೀಲ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಂತರ ಹೈಕೋರ್ಟ್ ನವೆಂಬರ್ 2ರಂದು ಪಥಸಂಚಲನ ನಡೆಸುವಂತೆ ಅನುಮತಿ ಪಡೆಯಲು ಸಂಘಟನೆಗೆ ಅವಕಾಶ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಹಿನ್ನೆಲೆಯಲ್ಲಿ ಭೀಮ್ ಆರ್ಮಿ ಮತ್ತು ದಲಿತ್ ಪ್ಯಾಂಥರ್ಸ್ ಕೂಡ ಅದೇ ದಿನ ಅಂದರೆ ನವೆಂಬರ್ 2ರಂದು ರ‍್ಯಾಲಿಗಳನ್ನು ಆಯೋಜಿಸಲು ಅನುಮತಿ ಕೋರಿ ಅಕ್ಟೋಬರ್‌ 21ರ ಮಂಗಳವಾರ ಕಲಬುರಗಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದವು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಕಿತ್ತೂರು ರಾಣಿ ಚನ್ನಮ್ಮನ ಪುತ್ಥಳಿ ಲೋಕಾರ್ಪಣೆ

”ಆರೆಸ್ಸೆಸ್‌ನ ಕಾರ್ಯಗಳು ಮತ್ತು ಆಲೋಚನೆಗಳು ಯುವಜನರು ಹಾಗೂ ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪ್ರಭಾವ ಬೀರಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ ದಲಿತ ಪ್ಯಾಂಥರ್ಸ್, ಒಂದು ಕೈಯಲ್ಲಿ ಸಂವಿಧಾನದ ಪೀಠಿಕೆ, ಇನ್ನೊಂದು ಕೈಯಲ್ಲಿ ನೀಲಿ ಧ್ವಜ ಹಿಡಿದುಕೊಂಡು ರ‍್ಯಾಲಿ ನಡೆಸಲು ಅನುಮತಿ ಕೋರಿತ್ತು. ಇದರ ನಡುವೆ ಭೀಮ್ ಆರ್ಮಿ ಕೂಡ ತ್ರಿವರ್ಣ ಧ್ವಜ, ಬೌದ್ಧ ಧರ್ಮದ ಪಂಚಶೀಲ ಧ್ವಜ ಮತ್ತು ಬಿದಿರಿನ ಕೋಲು ಹಿಡಿದು ರ‍್ಯಾಲಿ ನಡೆಸಲು ಅನುಮತಿ ಕೇಳಿತ್ತು. ಇದಾದ ನಂತರ ಈವರೆಗೆ ಸುಮಾರು 12 ಸಂಘಟನೆಗಳು ನವೆಂಬರ್‌ 2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...