ಗದಗ | ರೈತ – ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಸಿಐಟಿಯು ಒತ್ತಾಯ

Date:

Advertisements
  • ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರ ಧರಣಿ
  • ಕೇಂದ್ರ ಸರ್ಕಾರ ಜನಸಾಮಾನ್ಯರ ಜೀವನದ ಮೇಲೆ ಮರಣಾಂತಿಕ ದಾಳಿ ನಡೆಸಿದೆ.

ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಒತ್ತಾಯಿಸಿ ಆಗಸ್ಟ್ 9ರ ಕ್ವಿಟ್ ಇಂಡಿಯಾ ಚಳುವಳಿ ದಿನದಂದು ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಹಕ್ಕೋತ್ತಾಯ ಪತ್ರವನ್ನು ತಹಸೀಲ್ದಾರ್‌ ಅವರಿಗೆ ಸಲ್ಲಿಸಿದ್ದಾರೆ.

ಸಿಐಟಿಯು ಜಿಲ್ಲಾಧ್ಯಕ್ಷ ಮಹೇಶ ಹಿರೇಮಠ ಮಾತನಾಡಿ, “ಕಳೆದ 9 ವರ್ಷಗಳ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರ ಜೀವನದ ಮೇಲೆ ಮರಣಾಂತಿಕ ದಾಳಿ ನಡೆಸಿರುವುದು ಕಾಣುತ್ತದೆ. ಅಷ್ಟೇ ಅಲ್ಲದೆ ಜನರಿಗೆ ಸಂಕಷ್ಟಗಳ ಸರಮಾಲೆಯನ್ನೇ ಉಡುಗೊರೆಯಾಗಿ ನೀಡಿದೆ. ದಿನದಿಂದ ದಿನಕ್ಕೆ ನಿರುದ್ಯೋಗ ಪೆಡಂಭೂತದಂತೆ ಹೆಚ್ಚುತ್ತಿದೆ. ನೋಟುಗಳ ಅಮಾನೀಕರಣದ ತರುವಾಯ ಜನರು ಅಂಚಿಗೆ ತಳ್ಳಲ್ಪಟ್ಟರು. ಕಪ್ಪು ಹಣ ಬಿಳಿಯಾಯಿತೇ ವಿನಹಃ ಇನ್ನೇನು ಆಗಿಲ್ಲ. ಈ ಕುರಿತು ಸತ್ಯ ಹೊರಬರಲು ಕೇಂದ್ರ ಸರಕಾರ ಶ್ವೇತ ಪತ್ರ ಹೊರಡಿಸಬೇಕಾಗಿದೆ. ಬಡತನ ಹೆಚ್ಚಳವಾಗಿ ಆರ್ಥಿಕ ಕುಸಿತ ತಲೆದೋರಿದ್ದು, ನಿರುದ್ಯೋಗ ಹೆಚ್ಚಳದಿಂದಾಗಿ ಯುವಕರು ಹತಾಶರಾಗಿದ್ದಾರೆ. ಅಸಹನೀಯವಾದ ಬೆಲೆ ಏರಿಕೆ ಒಂದೆಡೆಯಾದರೆ ವೇತನ ಹೆಚ್ಚಳವಿಲ್ಲದೆ ನಿರ್ಗತಿಕತನದಿಂದಾಗಿ ಹಸಿವಿನ ಸೂಚ್ಯಂಕ ಅಪಾಯಕಾರಿ ಮಟ್ಟಕ್ಕೆ ಕುಸಿದಿದೆ” ಎಂದು ಆಕ್ರೋಶ ವ್ಯಕ್ತಪಡಿದ್ದರು.

“ಕೇಂದ್ರ ಸರ್ಕಾರದ ಅಧೀನದಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿಯಿವೆ. ಸಾರ್ವಜನಿಕ ಉದ್ದಿಮೆಗಳನ್ನು ಬಿಡಿಗಾಸಿಗೆ ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದ್ದು, ಅವರು ದೊಡ್ಡ ಸಂಖ್ಯೆಯಲ್ಲಿ ನೌಕರರನ್ನು ವಜಾಗೊಳಿಸುತ್ತಿದ್ದಾರೆ. ಗುತ್ತಿಗೆ ಆಧಾರದಲ್ಲಿ ನೇಮಕಾತಿಯನ್ನು ಮಾಡಿಕೊಂಡು ಶಾಸನಬದ್ಧ ಸೌಲಭ್ಯಗಳಾದ ಪಿಎಫ್, ಇಎಸ್‌ಐ ಮತ್ತು ಕನಿಷ್ಠ ವೇತನ ನೀಡದೆ, ಕಾರ್ಮಿಕರನ್ನು ವಂಚಿಸಲಾಗುತ್ತಿದೆ. ಕೋವಿಡ್ ಸಾಂಕ್ರಾಮಿಕ ಪಿಡುಗಿನ ತರುವಾಯ ಜೀವನೋಪಾಯವೇ ಸಂಕಷ್ಟದಲ್ಲಿರುವಾಗ ಮತ್ತೆ ಸರಿದಾರಿಗೆ ತರಲು ಮಧ್ಯ ಪ್ರವೇಶಿಸಬೇಕಾದ ಸರ್ಕಾರ ಕೈ ಚೆಲ್ಲಿ ಕುಳಿತ್ತಿದೆ. ದೆಹಲಿಯ ಹೊರವಲಯದಲ್ಲಿ ಒಂದು ವರ್ಷಗಳ ಕಾಲ ನಡೆದ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಅವರಿಗೆ ಕೊಟ್ಟ ಮಾತಿನಿಂದ ಹಿಂದೆ ಸರಿದು ನಂಬಿಕೆ ದ್ರೋಹ ಮಾಡಿ ವಚನಭ್ರಷ್ಟವಾಗಿದೆ” ಎಂದು ಕಿಡಿಕಾರಿದ್ದರು.

Advertisements

ಸಿಐಟಿಯು ಮುಖಂಡ ಮಾರುತಿ ಚಟಗಿ ಮಾತನಾಡಿ, “ಸಮಸ್ಯೆಗಳು ಮುಗಿಲೆತ್ತರಕ್ಕೆ ಬೆಳೆದಿರುವಾಗ ಕಾರ್ಮಿಕ ವರ್ಗದ ಬೇಡಿಕೆಗಳಿಗೆ ಸ್ಪಂದಿಸದೆ ಕೇಂದ್ರ ಸರ್ಕಾರ ಬಹಿರಂಗವಾಗಿ ಕಾರ್ಪೊರೇಟ್ ಕಂಪನಿಗಳ ಪರವಾಗಿ ನಿಂತಿದೆ. ಅವರಿಗೆ ಸಹಾಯ ಮಾಡಲು ಇತ್ತೀಚೆಗೆ ಫ್ಯಾಕ್ಟರಿ ಕಾಯ್ದೆಗೆ ತಿದ್ದುಪಡಿ ತಂದು ದಿನದ ದುಡಿತದ ಅವಧಿಯನ್ನು 12 ಗಂಟೆಗಳಿಗೆ ಹೆಚ್ಚಿಸಿದೆ. ಕಾರ್ಮಿಕ ಸಮುದಾಯ ಹಲವಾರು ತ್ಯಾಗ ಬಲಿದಾನ ಹೋರಾಟಗಳಿಂದ ಗಳಿಸಿರುವ ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಿ ಲೇಬರ್ ಕೋಡಗಳನ್ನು ತರಲಾಗುತ್ತಿದೆ. ಇದು ಕಾರ್ಮಿಕ ವರ್ಗಕ್ಕೆ ಮಾರಕವಾಗಿದೆ. ಕಾರ್ಪೊರೇಟ್ ಕಂಪನಿಗಳಿಗೆ ಲಕ್ಷಾಂತರ ಕೋಟಿ ರೂಪಾಯಿಗಳ ರಿಯಾಯಿತಿಗಳನ್ನು ಘೋಷಿಸಲಾಗಿದ್ದು ಅವರ ಸಾಲಗಳನ್ನು ಮನ್ನಾ ಮಾಡಲಾಗಿದೆ” ಎಂದು ದೂರಿದರು.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಬಸವರಾಜ ಮಂತೂರ, ಪೀರು ರಾಠೋಡ್, ಮೈಬ ಹವಾಲ್ದಾರ, ರುದ್ರಪ್ಪ ಕಂದಗಲ್ಲ, ಯಶೋದಾ ಬೆಟಗೇರಿ, ಸಾವಿತ್ರಿ ಸಬ್ಬಿಸ್, ಶಾರದಾ ರೋಣದ, ಮುತ್ತಪ್ಪ ಚಲವಾದಿ, ನಾಗರತ್ನಾ ಬಡಿಗಣ್ಣವರಯಮುನಾ ಗೋಟೂರ ಸೇರಿದಂತೆ ಸಂಘಟನೆ ಕಾರ್ಯಕರ್ತರು ಇದ್ದರು.


ಬೇಡಿಕೆಗಳು :

  1. ದುಡಿತದ ಅವಧಿಯನ್ನು ದಿನಕ್ಕೆ 12 ಗಂಟೆಗೆ ಹೆಚ್ಚಿಸಿರುವ ಆದೇಶ ಹಿಂಪಡೆಯಬೇಕು.
  2. ಜೀವನ ಯೋಗ್ಯ ಕನಿಷ್ಠ ವೇತನ ರೂ 31,500 ಕ್ಕೆ ಹೆಚ್ಚಿಸಬೇಕು.
  3. ಕಾರ್ಮಿಕ ವಿರೋಧಿ ಲೇಬರ್ ಕೋಡ್ ಗಳನ್ನು ರದ್ದುಗೊಳಿಸಬೇಕು.
  4. ಸಾರ್ವತ್ರಿಕ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಿ ಕನಿಷ್ಠ 8 ಸಾವಿರ ಪಿಂಚಣಿ ನೀಡಬೇಕು.
  5. ಸಾರ್ವಜನಿಕ ಉದ್ದಿಮೆಗಳ ಖಾಸಗಿಕರಣ ಮತ್ತು ನಗದೀಕರಣ ನಿಲ್ಲಿಸಬೇಕು.
  6. ಉದ್ಯೋಗ ಖಾತ್ರಿ ಯೋಜನೆಯಡಿ ದುಡಿತದ ದಿನಗಳನ್ನು 200 ಕ್ಕೆ ಹೆಚ್ಚಿಸಿ.
  7. ಅಂಗನವಾಡಿ, ಬಿಸಿಯೂಟ ಆಶಾ ಕಾರ್ಯಕರ್ತರು ಮುಂತಾದ ಸ್ಟೀಮ್ ಕಾರ್ಮಿಕರನ್ನು ಕನಿಷ್ಠ ವೇತನ ವ್ಯಾಪ್ತಿಗೆ ಒಳಪಡಿಸಬೇಕು.
  8. ವಲಸೆ ಕಾರ್ಮಿಕರಿಗೆ ಸೇವಾ ಭದ್ರತೆ ಮತ್ತು ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿ ಮಾಡಬೇಕು.
  9. ಅಸಂಘಟಿತ ವಲಯದ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು.
  10. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಗೊಳಿಸಬೇಕು ಮತ್ತು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಬೇಕು.
  11. ವಿದ್ಯುತ್ ಶಕ್ತಿ ಮಸೂದೆ 2020 ಹಿಂಪಡೆಯಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X