ಮಂಗಳೂರು | ಮೀನುಗಾರಿಕಾ ದಕ್ಕೆಯ ಕಾರ್ಮಿಕ ಮುರುಗನ್ ಸಾವು, ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ

Date:

ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು, ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಈ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು,ಮೃತರಾದ ಮುರುಗನ್ ಕುಟುಂಬಕ್ಕೆ ರೂ.25 ಲಕ್ಷದಷ್ಟು ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆ CITU ಹಾಗೂ ಯುವಜನ ಸಂಘಟನೆ DYFI ಜಂಟಿ ನೇತ್ರತ್ವದಲ್ಲಿ ಇಂದು ದಕ್ಕೆ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.

- Advertisement -

300ಕ್ಕೂ ಮಿಕ್ಕಿದ ಮೀನುಗಾರಿಕಾ ಕಾರ್ಮಿಕರು ಮೀನುಗಾರಿಕಾ ಇಲಾಖೆ ಹಾಗೂ ಜಿಲ್ಲಾಡಳಿತದ ಬೇಜವಾಬ್ದಾರಿಯನ್ನು ಖಂಡಿಸಿ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....
1009804209

ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು, *ದಿನವೊಂದಕ್ಕೆ ಕೋಟ್ಯಾಂತರ ರೂಪಾಯಿ ವ್ಯಾಪಾರ ವಹಿವಾಟು ನಡೆಯುವ ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಲ್ಲದಿರುವುದು ಮೀನುಗಾರಿಕಾ ಇಲಾಖೆ ಹಾಗೂ ಜಿಲ್ಲಾಡಳಿತದ ಬೇಜವಾಬ್ದಾರಿಯನ್ನು ಎತ್ತಿ ತೋರಿಸುತ್ತದೆ.ಸಾವಿರಾರು ಕಾರ್ಮಿಕರು ತಮ್ಮ ಹೊಟ್ಟೆಪಾಡಿಗಾಗಿ ಕಳೆದ ಹಲವಾರು ವರ್ಷಗಳಿಂದ ದುಡಿದು ಜಿಲ್ಲೆಯ ಅರ್ಥಿಕ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿದ್ದರೂ ಅವರ ಬದುಕಿನ ರಕ್ಷಣೆಗಾಗಿ, ಸಾಮಾಜಿಕ ಭದ್ರತೆಗಾಗಿ ಯಾವುದೇ ಸವಲತ್ತುಗಳ ಇಲ್ಲದೆ ಅತಂತ್ರರಾಗಿದ್ದಾರೆ.ಮಹಿಳಾ ಕಾರ್ಮಿಕರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆ, ಶುದ್ದ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಲ್ಲ.ಘಟನೆ ನಡೆದು ವಾರ ಕಳೆದರೂ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ, ಆ ಮೂಲಕ ಕಾರ್ಮಿಕರ ಜೀವಕ್ಕೆ ಬೆಲೆಯೇ ಇಲ್ಲ ಎಂಬಂತೆ ಮೀನುಗಾರಿಕಾ ಇಲಾಖೆ ಅಮಾನುಷವಾಗಿ ವರ್ತಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

1009804205

DYFI ಜಿಲ್ಲಾಧ್ಯಕ್ಷರಾದ ಬಿ ಕೆ ಇಮ್ತಿಯಾಜ್ ರವರು ಮಾತನಾಡುತ್ತಾ, ತಮಿಳುನಾಡು ಮೂಲದ ಕಾರ್ಮಿಕರು ಮಂಗಳೂರಿಗಾಗಿ ದುಡಿಯುತ್ತಿದ್ದಾರೆ.ಮೃತಪಟ್ಟಿರುವ ಕಾರ್ಮಿಕ ತಮಿಳನೆಂದು ಜಿಲ್ಲಾಡಳಿತ ತೀರಾ ನಿರ್ಲಕ್ಷ್ಯ ವಹಿಸಿರುವುದು ಖೇದಕರ. ಧಕ್ಕೆಯಲ್ಲಿ ಕಾರ್ಮಿಕರಿಗೆ ಯಾವುದೇ ರೀತಿಯ ಸುರಕ್ಷತಾ ಕ್ರಮಗಳಿಲ್ಲ.ಕಳೆದ ಹಲವು ವರ್ಷಗಳಿಂದ ಧಕ್ಕೆಯನ್ನು ಪ್ರವೇಶಿಸುವ ಎಲ್ಲಾ ವಾಹನಗಳಿಂದ ಲಕ್ಷಾಂತರ ರೂಪಾಯಿ ಸುಂಕ ಸಂಗ್ರಹಿಸಲಾಗುತ್ತಿದೆ. ಆದರೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಉಂಟಾಗಿ ಜನರ ಸಮಯ ಟ್ರಾಫಿಕ್ ಜಾಮ್ ನಲ್ಲಿ ವ್ಯರ್ಥವಾಗುತ್ತಿದೆ. ಡ್ರೈನೇಜ್ ಅವ್ಯವಸ್ಥೆಯಿಂದಾಗಿ ಪ್ರದೇಶವಿಡೀ ದುರ್ನಾತ ಬೀರುತ್ತಿದೆ.ಮುರುಗನ್ ಸಾವಿಗೆ ಕಾರಣರಾದ ಅಧಿಕಾರಿಗಳು ಹಾಗೂ ಧಕ್ಕೆ ನಿರ್ವಹಣೆಯನ್ನು ವಹಿಸುತ್ತಿರುವ ಗುತ್ತಿಗೆದಾರರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಿದರು.

1009804204

CITU ಜಿಲ್ಲಾ ನಾಯಕರಾದ ಯೋಗೀಶ್ ಜಪ್ಪಿನಮೊಗರು ಹಾಗೂ ಡಿವೈಎಫ್ಐ ಜಿಲ್ಲಾ ಮುಖಂಡರಾದ ಸಂತೋಷ್ ಬಜಾಲ್ ರವರು ಮಾತನಾಡಿ,ಘಟನೆಯ ಗಂಭೀರತೆಯನ್ನು ಎಳೆಎಳೆಯಾಗಿ ವಿವರಿಸುತ್ತಾ,ಸ್ಥಳೀಯ ಸಂಸದರು, ಶಾಸಕರು ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳ ನಿರ್ಲಕ್ಷ್ಯತೆಯನ್ನು ಅತ್ಯುಗ್ರವಾಗಿ ಖಂಡಿಸಿದರು.

ಪ್ರತಿಭಟನೆಯಲ್ಲಿ CITU ಜಿಲ್ಲಾ ನಾಯಕರಾದ ರವಿಚಂದ್ರ ಕೊಂಚಾಡಿ,ನಾಗೇಶ್ ಕೊಟ್ಯಾನ್, DYFI ಜಿಲ್ಲಾ ನಾಯಕರಾದ ಮನೋಜ್ ವಾಮಂಜೂರು, ನವೀನ್ ಕೊಂಚಾಡಿ,ತಯ್ಯುಬ್ ಬೆಂಗರೆ, ರಿಜ್ವಾನ್ ಹರೇಕಳ, ಜಗದೀಶ್ ಕುಲಾಲ್,ಸಾಧಿಕ್ ಮುಲ್ಕಿ, ಹನೀಫ್ ಬೆಂಗ್ರೆ, ಪಿ.ಜಿ ರಫೀಕ್, ಅಬ್ದುಲ್ ರಫೀಕ್ ಬೆಂಗ್ರೆ, ಬಿಲಾಲ್ ಬೆಂಗ್ರೆ, ಮುವಾಜ್ ಬೆಂಗ್ರೆ, ಅಶ್ರಫ್ ಹರೇಕಳ,ಜನವಾದಿ ಮಹಿಳಾ ಸಂಘಟನೆಯ ಪ್ರಮುಖರಾದ ಅಸುಂತ ಡಿಸೋಜಾ, ಯೋಗೀತಾ ಸುವರ್ಣ, ಹಸಿ ಮೀನು ಕಾರ್ಮಿಕರ ಸಂಘದ ಮುಖಂಡರಾದ ಆಸಿಫ್,ಇಕ್ಬಾಲ್,ಆಶ್ರಫ್,ರಫೀಕ್,ಅಜೀಜ್,ಶಫಿಕ್ ರೆಹಮಾನ್,ಸ್ಥಳೀಯ ಕಾರ್ಮಿಕ ಮುಖಂಡರಾದ ಮುಝಮ್ಮಿಲ್ ಕುಪ್ಪೆಟ್ಟು, ಮೂರ್ತಿ, ವೇಕಟೇಶ್ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ, ಹೋರಾಟವೇ ಪ್ರೇರಣೆ: ಪ್ರೊ. ಸಿ.ಎಂ ತ್ಯಾಗರಾಜ

ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರು ಪ್ರತಿಪಾದಿಸಿದ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ...

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ...