ಚಿಕ್ಕಬಳ್ಳಾಪುರ | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

Date:

Advertisements

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿದ್ಯಾರ್ಥಿ ನಿಲಯ ಮತ್ತು ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ನೌಕರರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಸರಕಾರದ ವಿವಿಧ ಇಲಾಖೆಗಳ ವಿದ್ಯಾರ್ಥಿ ನಿಲಯಗಳಲ್ಲಿ, ವಸತಿ ಶಾಲೆಗಳಲ್ಲಿ ಸುಮಾರು 15-20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿ, ಡೇಟಾ ಎಂಟ್ರಿ ಆಪರೇಟರ್‌ಗಳು, ಸಹಾಯಕರು, ಸ್ವಚ್ಛತಾ ಸಿಬ್ಬಂದಿ, ಕಾವಲುಗಾರರು ಸೇರಿದಂತೆ ವಿವಿಧ ಹೊರಗುತ್ತಿಗೆ ನೌಕರರಿಗೆ ಸೂಕ್ತ ಭದ್ರತೆ ಇಲ್ಲವಾಗಿದೆ ಎಂದು ದೂರಿದರು.

ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ನಿಲಯ ಪಾಲಕರು ಸೇರಿದಂತೆ ಅಧಿಕಾರಿ ವರ್ಗದವರು ಅಗೌರವಯುತವಾಗಿ ನಡೆಸಿಕೊಳ್ಳುತ್ತಿದ್ದಾರೆ. ಸಿಬ್ಬಂದಿ ಮೇಲೆ ಶೋಷಣೆ ಮಾಡಲಾಗುತ್ತಿದೆ ಎಂದು ಧಿಕ್ಕಾರ ಕೂಗಿದರು.

Advertisements

ಈ ವೇಳೆ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನಿಯಪ್ಪ ಕೆ, ಸುಮಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರಕಾರ ಕಡೆಗಣಿಸಿದೆ. ಅತೀ ಕಡಿಮೆ ವೇತನಕ್ಕೆ ದುಡಿಯುತ್ತಿರುವ ನಮಗೆ ಕನಿಷ್ಠ 31 ಸಾವಿರ ವೇತನ ನಿಗದಿಗೊಳಿಸಬೇಕು. ಅಲ್ಲದೇ ಖಾಸಗಿಯವರಿಗೆ ಗುತ್ತಿಗೆ ನೀಡದಂತೆ, ಇಲಾಖೆಯಿಂದಲೇ ನೇರವಾಗಿ ವೇತನ ಕೊಡಬೇಕು. ಕಾರ್ಮಿಕ ಕಾನೂನಿಯ ಅನ್ವಯ ವಾರಕ್ಕೊಂದು ರಜೆ, ಕೆಲಸ ಸಮಯ ನಿಗದಿಗೊಳಿಸಬೇಕು ಎಂದು ಮನವಿ ಮಾಡಿದರು.

ಗುತ್ತಿಗೆದಾರರು ಹೊರಗುತ್ತಿಗೆ ನೌಕರರಿಗೆ ನೇಮಕಾತಿ ಅಧೇಶ, ಸಂಬಳದ ಚೀಟಿ, ಗುರುತಿನ ಚೀಟಿ, ಅನುಭವ ಪ್ರಮಾಣ ಪತ್ರ, ಇಎಸ್‌ಐ, ಪಿಎಫ್‌ ಸಹ ಕೊಡಬೇಕು. ಬೀದರ್‌ ಜಿಲ್ಲೆಯ ಮಾದರಿಯಲ್ಲಿ ಕಾರ್ಮಿಕ ಸೇವೆಗಳ ವಿವಿದೋದ್ದೇಶ ಸಹಕಾರ ಸಂಘವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಜಮೀನು ಸರ್ವೆ ಮಾಡಲು ಬಂದ ಭೂಮಾಪಕರ ಮೇಲೆ ಹಲ್ಲೆ; ಕ್ರಮ ಕೈಗೊಳ್ಳಲು ಪೊಲೀಸರ ನಿರ್ಲಕ್ಷ್ಯ

ಸಿಐಟಿಯು ಮುಖಂಡ ಮುನಿಕೃಷ್ಣಪ್ಪ ಮಾತನಾಡಿ, ವಿವಿಧ ಇಲಾಖೆಗಳಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಂಖ್ಯೆ ಕಡಿತಗೊಳಿಸುವ ಆದೇಶವನ್ನು ರದ್ದುಗೊಳಿಸಬೇಕು. 50 ಜನ ವಿದ್ಯಾರ್ಥಿಗಳಿಗೆ ಮೂವರು ಸಿಬ್ಬಂದಿಗಳ ಹಿಂದಿನ ಪದ್ಧತಿಯನ್ನು ಮುಂದುವರಿಸಬೇಕು. ಪ್ರತೀ ತಿಂಗಳು 5ನೇ ತಾರೀಖು ವೇತನ ನೀಡಬೇಕು ಹಾಗೂ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.

10 ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ನೌಕರರನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದಡಿ ತರಬೇಕು. ಬಿಸಿಎಂ ಇಲಾಖೆಯಲ್ಲಿ ಕೆಲಸ ಕಳೆದುಕೊಂಡಿರುವ ನೌಕರರನ್ನು ಮರು ನೇಮಕ ಮಾಡಬೇಕು. ಅಡುಗೆ ಸಿಬ್ಬಂದಿಯಿಂದ ಶೌಚಾಲಯ ಸ್ವಚ್ಛಗೊಳಿಸುವ ಕೆಲಸವನ್ನು ಮಾಡಿಸಬಾರದು. ನಿಲಯ ಪಾಲಕರು ವಸತಿ ನಿಲಯಗಳಿಗೆ ಅಗತ್ಯವಿರುವ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಸೂಕ್ತ ಪ್ರಮಾಣದಲ್ಲಿ ಒದಗಿಸಬೇಕು. ನಿವೃತ್ತಿ ನಂತರ ನೌಕರರ ಜೀವನ ನಿರ್ವಹಣೆಗೆ 10 ಲಕ್ಷ ಪರಿಹಾರ ಕೊಡಬೇಕು ಎಂದು ಮನವಿ ಮಾಡಿದರು.

ಈ ಎಲ್ಲಾ ಬೇಡಿಕೆಗಳನ್ನು ಚರ್ಚಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಲಾಖೆಯ ಅಧಿಕಾರಿಗಳು ಒಳಗೊಂಡಂತೆ ಸಂಘದ ಮುಖಂಡರ ನೇತೃತ್ವದಲ್ಲಿ ಸಭೆಯನ್ನು ಕರೆಯಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

ಪ್ರತಿಭಟನೆಯಲ್ಲಿ ತಿಮ್ಮಣ್ಣ, ಮಂಜುನಾಥ್‌, ಭಾಗ್ಯಮ್ಮ, ಶಿವಪ್ಪ, ಮುದ್ದಪ್ಪ, ಬಿ ಎನ್‌ ವೆಂಕಟರಮಣ, ಶ್ರೀನಿವಾಸ್‌, ಸುನಿತಮ್ಮ, ತಬಸಮ್‌, ನಾರಯನಸ್ವಾಮಿ, ಪ್ರಸನ್ನಕುಮಾರ್‌, ಶಶಿಕಲಾ, ಪ್ರಮೀಳಮ್ಮ, ಪ್ರಮೀಳಾ, ಆಂಜಿನಪ್ಪ, ಕದುರಪ್ಪ, ಗೌರಮ್ಮ, ರಘುನಾಥ್‌, ನವೀನ್‌ ಕುಮಾರ್‌, ಶಿಲ್ಪಾ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X