ವ್ಯವಹಾರ ಸುಲಭಿಕರಣ ಹೆಸರಲ್ಲಿ ಕಾರ್ಮಿಕರ ಕಾನೂನಿಗೆ ಧಕ್ಕೆ ಸಿಐಟಿಯು ವತಿಯಿಂದ ಪ್ರತಿಭಟನೆ

Date:

ಕೋಲಾರ: ವ್ಯವಹಾರವನ್ನು ಸುಲಭಿಕರಿಸಲು ಎಂಬ ಹೆಸರಿನಲ್ಲಿ ಕಾರ್ಮಿಕ ವಿರೋಧಿ ಮತ್ತು ಮಾಲೀಕರ ಪರವಾದ ಈ ಕಾರ್ಮಿಕ ಸಂಹಿತೆಗಳನ್ನು ಏಪ್ರಿಲ್ 1 ರಿಂದ ರಾಜ್ಯದಲ್ಲಿ ಜಾರಿ ಮಾಡುತ್ತಿರುವುದನ್ನು ವಿರೋಧಿಸಿ ಬುಧವಾರ ಸಿಐಟಿಯು ನೇತೃತ್ವದಲ್ಲಿ ನಗರದ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

- Advertisement -

ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ.ಕೃಷ್ಣಪ್ಪ ಮಾತನಾಡಿ ದೇಶದಲ್ಲಿ 2026ರ ಫೆಬ್ರವರಿ 12ರಂದು ನಡೆದ ಐತಿಹಾಸಿಕ ಸಾರ್ವತ್ರಿಕ ಮುಷ್ಕರದ ನಂತರವೂ ಕೇಂದ್ರ ಸರ್ಕಾರ ಈ ವಿಷಯದಲ್ಲಿ ಯಾವುದೇ ಗಂಭೀರ ಚರ್ಚೆಗೆ ಮುಂದೆ ಬಂದಿಲ್ಲ. ಕಾರ್ಮಿಕ ಸಂಹಿತೆಗಳ ರಚನೆಯ ಹಂತದಿಂದಲೂ ಕಾರ್ಮಿಕ ಸಂಘಟನೆಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ. ಭಾರತದ ಕಾರ್ಮಿಕರ ಜೀವನಕ್ಕೆ ಸಂಬಂಧಿಸಿದಂತಹ ಮಹತ್ವದ ವಿಷಯದ ಬಗ್ಗೆ ಚರ್ಚಿಸಲು ಭಾರತೀಯ ಕಾರ್ಮಿಕ ಸಮ್ಮೇಳನವನ್ನೂ ಕರೆದಿಲ್ಲ. ಇದು ಭಾರತವು ಬದ್ಧವಾಗಿರುವ ಅಂತರರಾಷ್ಟ್ರೀಯ ಕಾರ್ಮಿಕ ಮಾನದಂಡಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕಾರ್ಮಿಕ ಸಂಹಿತೆಗಳು ಕಾರ್ಮಿಕರನ್ನು ಮತ್ತೆ ಬ್ರಿಟಿಷ್ ವಸಾಹತು ಕಾಲದ ಶೋಷಣಾತ್ಮಕ ಪರಿಸ್ಥಿತಿಗಳಿಗೆ ತಳ್ಳಲಿವೆ. ಸ್ವಾತಂತ್ರ‍್ಯಪೂರ್ವ ಮತ್ತು ಸ್ವಾತಂತ್ರ‍್ಯೋತ್ತರ ಕಾಲಗಳಲ್ಲಿ ಕಾರ್ಮಿಕ ವರ್ಗವು ಕೆಲಸದ ಸುರಕ್ಷತೆ, ಸಂಘಟನೆಯ ಹಕ್ಕು, ತ್ರಿಪಕ್ಷೀಯ ಮಾತುಕತೆ, ಮುಷ್ಕರ ಹಕ್ಕು, ಸಮರ್ಪಕ ವೇತನ, ಸಾಮಾಜಿಕ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ, ಬೋನಸ್, ಗ್ರ‍್ಯಾಚ್ಯುಟಿ ಮತ್ತು ಪಿಂಚಣಿ ಹಕ್ಕುಗಳಿಗಾಗಿ ಹೋರಾಟ ನಡೆಸಿ ಈ ಹಕ್ಕುಗಳನ್ನು ಗಳಿಸಿದೆ ಎಂದರು

1926ರ ಟ್ರೇಡ್ ಯೂನಿಯನ್ ಕಾಯ್ದೆಯ ಮೂಲಕ ಸಂಘಟನೆಯ ಹಕ್ಕು ಕಾನೂನೀಕರಿಸಲಾಯಿತು. ಬ್ರಿಟಿಷ್ ಕಾಲದಲ್ಲಿ ಐದು ಕಾನೂನುಗಳು ಮತ್ತು ಸ್ವಾತಂತ್ರ‍್ಯಾನಂತರ ಸಂಸತ್ತಿನ ಮೂಲಕ ಒಟ್ಟು 44 ಕೇಂದ್ರ ಕಾನೂನುಗಳು ಹಾಗೂ ರಾಜ್ಯ ಮಟ್ಟದಲ್ಲಿ ಸುಮಾರು 150 ಕಾನೂನುಗಳು ರೂಪಗೊಂಡಿವೆ. ಇವೆಲ್ಲವೂ ಸುಮಾರು 150 ವರ್ಷಗಳ ಹೋರಾಟದ ಫಲ. ಆದರೆ, ಈ ಎಲ್ಲಾ ಸಾಧನೆಗಳನ್ನು ಈಗಿನ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರಚಿಸುವ ಮೂಲಕ ಅವೆಲ್ಲವನ್ನೂ ಹಿಂಪಡೆಯಲು ಪ್ರಯತ್ನಿಸುತ್ತಿದೆ ಕೂಡಲೇ ಈ ಕಾರ್ಮಿಕ ಸಂಹಿತೆಗಳನ್ನು ವಾಪಸು ಪಡೆಯಬೇಕೆಂದು ಆಗ್ರಹಿಸುತ್ತಿದೆ.

ಇದನ್ನು ಓದಿದ್ದೀರಾ…? 21 ಅಡಿ ಎತ್ತರದ ಕಂಚಿನ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಭೂಮಿಪೂಜೆ

ಪ್ರತಿಭಟನೆಯಲ್ಲಿ ಸಿಐಟಿಯು ತಾಲ್ಲೂಕು ಸಂಚಾಲಕ ಎಂ.ಭೀಮರಾಜ್, ಮುಖಂಡರಾದ ಕಲ್ಪನಾ, ಲೋಕೇಶ್ವರಿ, ಲಕ್ಷ್ಮೀದೇವಿ, ಎಸ್ ಆಶಾ, ರಾಮಚಂದ್ರಪ್ಪ, ಆರೋಗ್ಯನಾಥನ್ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...