ಉಡುಪಿ | ಕುಂದಾಪುರದಲ್ಲಿ ಅಚ್ಚುತಾನಂದನ್ ಶ್ರದ್ಧಾಂಜಲಿ ಸಭೆ

Date:

Advertisements

ಕೇರಳದ ಮಾಜಿ ಮುಖ್ಯಮಂತ್ರಿಗಳು ಹಿರಿಯ ಕಮ್ಯುನಿಸ್ಟ್ ನಾಯಕ ವಿ ಎಸ್ ಅಚ್ಚುತಾನಂದನ್ ಅವರಿಗೆ ಶುಕ್ರವಾರ ಕುಂದಾಪುರ ಹಂಚು ಕಾರ್ಮಿಕರ ಭವನದಲ್ಲಿ ಸಿಪಿಎಂ ಉಡುಪಿ ಜಿಲ್ಲಾ ಸಮಿತಿಯು ಶ್ರದ್ಧಾಂಜಲಿ ಸಭೆ ನಡೆಸಿತು.

ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ ಮಹಾಂತೇಶ್ ಅವರು ಮಾತನಾಡಿ, ಅಚ್ಚುತಾನಂದನ್ ಅವರು 102 ವರ್ಷ ಸಾರ್ಥಕ ಜೀವನ ನಡೆಸಿದವರು ಅದರಲ್ಲಿ ಅವರು 17 ವಯಸ್ಸಿನಿಂದ 85 ವರ್ಷಗಳ ವರೆಗೆ ಸಾರ್ವಜನಿಕರಿಗಾಗಿ ತಮ್ಮ ಬದುಕು ಮೀಸಲಿಟ್ಟು ಮಾದರಿಯಾಗಿದ್ದಾರೆ ಎಂದು ಹೇಳಿದರು.

ಬದುಕಿನುದ್ದಕ್ಕೂ ಶೋಷಿತರ ಪರವಾಗಿ ಹೋರಾಟ ನಡೆಸಿದ ಅವರು ಕಠಿಣ ಹಾದಿ ತುಳಿದು ಪುನ್ನಪ್ರ ವಲಯಾರ್ ಹೋರಾಟ ಅನಂತರ ತುರ್ತು ಪರಿಸ್ಥಿತಿ ಸಮಯದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಕ್ರೂರವಾಗಿ ಚಿತ್ರ ಹಿಂಸೆಗೆ ಒಳಗಾಗಿದ್ದರು.

Advertisements

1980 ರಿಂದ 1991 ವರೆಗೆ ಸಿಪಿಎಂ ಪಕ್ಷದ ಕೇರಳ ರಾಜ್ಯ ಕಾರ್ಯದರ್ಶಿಯಾಗಿ 1985 ರಲ್ಲಿ ಪಾಲಿಟ್ ಬ್ಯುರೋ ಸದಸ್ಯರಾದರು 2006 ರಿಂದ 2011 ವರೆಗೆ ಕೇರಳದ ಮುಖ್ಯಮಂತ್ರಿ ಆಗಿ ಶೋಷಣೆಗೆ ಒಳಗಾದ ಜನರಿಗೆ ಹಲವು ಜನಪರ ಯೋಜನೆಗಳನ್ನು ತಂದು ಮಗುವಿನಿಂದ ವಯೋವ್ರದ್ದರೂ ಪ್ರೀತಿಸುವವರೆಗೆ ಜನಪ್ರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಒಬ್ಬ ಕಮ್ಯುನಿಸ್ಟ್ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜದಲ್ಲಿ ಹೇಗೆ ಬದುಕಬೇಕೆಂದು ತೋರಿಸಿದ್ದಾರೆ ಅವರ ದಾರಿಯಲ್ಲಿ ಪಕ್ಷದ ಸದಸ್ಯರು ಮುನ್ನಡೆಯಬೇಕು ಅವರ ಸಮತೆಯ ಸಮಾಜದ ಕನಸುಗಳಿಗಾಗಿ ಹೋರಾಟಗಳನ್ನು ಸಂಘಟಿಸುವುದೇ ಅಚ್ಚುತಾನಂದನ್ ಅವರಿಗೆ ಸಲ್ಲಿಸುವ ಶ್ರದ್ಧಾಂಜಲಿ ಎಂದು ಅವರು ಹೇಳಿದರು.

ಸಿಪಿಎಂ ಪಕ್ಷದ ಹಿರಿಯ ಮುಖಂಡರಾದ ಬಾಲಕೃಷ್ಣ ಶೆಟ್ಟಿ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಶಶಿಧರ ಗೊಲ್ಲ, ಚಂದ್ರಶೇಖರ ವಿ ಇದ್ದರು ಎಚ್ ನರಸಿಂಹ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X