ಉಡುಪಿ | ಕಾರ್ಮಿಕ ಸೇವೆಗಳ ಸಹಕಾರ ಸಂಘ ಸ್ಥಾಪನೆಗೆ ಸಿಐಟಿಯು ವಿರೋಧ

Date:

ಸರಕಾರದ ವಿವಿಧ ಇಲಾಖೆಗಳಲ್ಲಿ ದುಡಿಯುತ್ತಿರುವ ನೌಕರರನ್ನು ಖಾಯಂಗೊಳಿಸದೆ ಹೊರಗುತ್ತಿಗೆಯಾಗಿ ಯಾವುದೇ ಉದ್ಯೋಗ ಭದ್ರತೆ ಇಲ್ಲದೆ ದುಡಿಸಿಕೊಳ್ಳುತ್ತಿರುವ ಕ್ರಮಕ್ಕೆ ಸಿಐಟಿಯು ತೀವ್ರ ವಿರೋಧ ವ್ಯಕ್ತಪಡಿಸಿದೆ.

- Advertisement -

ಹೊರಗುತ್ತಿಗೆ ನೌಕರರ ಇಎಸ್ಐ, ಪಿಎಫ್ ಹಾಗೂ ಕನಿಷ್ಠ ವೇತನಗಳ ಜವಾಬ್ದಾರಿಯನ್ನು ಖಾಸಗಿ ಏಜೆನ್ಸಿಗಳಿಗೆ ಒಪ್ಪಿಸಿರುವ ಪರಿಣಾಮ, ಖಾಸಗಿ ಏಜೆನ್ಸಿಗಳು ಕಾರ್ಮಿಕರನ್ನು ವಿಪರೀತವಾಗಿ ಶೋಷಣೆ ಮಾಡುತ್ತಿವೆ. ಇದರಿಂದ ನೌಕರರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಿಐಟಿಯು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಬಗ್ಗೆ ಹಲವು ಕಾರ್ಮಿಕ ಸಂಘಟನೆಗಳು ಹಾಗೂ ಕಾರ್ಮಿಕರು ಸರ್ಕಾರಕ್ಕೆ ಮರುಮರು ಮನವಿ ಸಲ್ಲಿಸಿ, ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಶೋಷಣೆಯಿಂದ ಮುಕ್ತಗೊಳಿಸಿ ಸರಕಾರಿ ನೌಕರರಾಗಿ ಖಾಯಂಗೊಳಿಸಬೇಕೆಂದು ಆಗ್ರಹಿಸುತ್ತಲೇ ಬಂದಿದ್ದಾರೆ. ಆದರೆ ಸರ್ಕಾರ ಇದುವರೆಗೆ ಸ್ಪಂದಿಸಿಲ್ಲ. ಬದಲಾಗಿ ಗುತ್ತಿಗೆ ಪದ್ಧತಿಯನ್ನು ಮುಂದುವರಿಸಲು ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ (ನಿಯಮಿತ) ಸ್ಥಾಪಿಸುವ ಮೂಲಕ ‘ಗುಲಾಮಗಿರಿ ಪದ್ಧತಿ’ಯನ್ನೇ ಖಾಯಂಗೊಳಿಸಲು ಮುಂದಾಗಿದೆ. ಇದು ಕಾರ್ಮಿಕರನ್ನು ಭದ್ರತೆಯಿಲ್ಲದ ಉದ್ಯೋಗಗಳಲ್ಲಿಯೇ ಉಳಿಸುವ ತೀರ್ಮಾನವಾಗಿದೆ ಎಂದು ಸಿಐಟಿಯು ಖಂಡಿಸಿದೆ.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರನ್ನು ನೇರ ಪಾವತಿ ಪದ್ಧತಿಯಲ್ಲಿ ನೇಮಿಸಿಕೊಂಡಿರುವ ಮಾದರಿಯಂತೆ, ಇತರೆ ಸರಕಾರಿ ಇಲಾಖೆಗಳಲ್ಲಿಯೂ ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರನ್ನು ನೇರ ಪಾವತಿ ಅಡಿಯಲ್ಲಿ ನೇಮಿಸಿಕೊಂಡು, ಹಂತ ಹಂತವಾಗಿ ಖಾಯಂಗೊಳಿಸುವತ್ತ ಸರ್ಕಾರ ಮುಂದಾಗಬೇಕು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಒತ್ತಾಯಿಸಿದ್ದಾರೆ.

WhatsApp Image 2025 12 20 at 7.53.24 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಉದ್ಯೋಗ ಖಾತ್ರಿ ಯೋಜನೆಯಡಿ 20 ಲಕ್ಷ ಮಾನವ ದಿನ ಸೃಜನೆ: ಈಶ್ವರ ಖಂಡ್ರೆ

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಬೀದರ್ ಜಿಲ್ಲೆಯಲ್ಲಿ 20...

ಗದಗ | ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ

ಗದಗ ಜಿಲ್ಲೆಯ ಮುಳಗುಂದದ ಶ್ರೀ ಆರ್. ಎನ್. ದೇಶಪಾಂಡೆ ಸರ್ಕಾರಿ ಪ್ರಥಮ...

ಶಿವಮೊಗ್ಗ | ಸಿಇಒ ಹೇಮಂತ್‌ಗೆ ಬೀಳ್ಕೊಡುಗೆ; ನೂತನ ಸಿಇಒ ರಿಷಿ ಆನಂದ್‌ ಸ್ವಾಗತಿಸಿದ ಜಿ.ಪಂ

ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ನಿಕಟಪೂರ್ವ...

ಅಭಿಮಾನಿಗಳ ಆಸೆಯಂತೆ ದಸರೆಗೆ ಮರಳಿದ ಅಭಿಮನ್ಯು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಕೊಡಗಿನ ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು...