ಕಾಂಗ್ರೆಸ್‌ ಸರ್ಕಾರಕ್ಕೆ ಗುಲಾಮಿ ಮನಸ್ಥಿತಿಯಿಂದ ಹೊರಬರಲು ಆಗುತ್ತಿಲ್ಲ: ಸಿ ಟಿ ರವಿ ಟೀಕೆ

Date:

  • ‘ರಾಜ್ಯ ಸರ್ಕಾರಕ್ಕೆ ಕಸ್ತೂರಿ ರಂಗನ್ ಬಗ್ಗೆ ವಿರೋಧ ಇರಬಹುದು’
  • ‘ಸರ್ಕಾರದ ನಡೆ ರಾಷ್ಟ್ರದ ಹಿತಕ್ಕೆ ಘಾತಕವಾಗುವ ಸಾಧ್ಯತೆಯಿದೆ’

ಯಾವ ಕಾರಣಕ್ಕಾಗಿ ಎನ್​ಇಪಿ ತಿರಸ್ಕರಿಸುತ್ತಿದ್ದೀರಿ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಸಮಗ್ರ ಶಿಕ್ಷಣ ನೀತಿಯನ್ನು ಅವರು ವಿರೋಧಿಸುತ್ತಾರೆ ಎಂದರೆ ಸರ್ಕಾರಕ್ಕೆ ಕಸ್ತೂರಿ ರಂಗನ್ ಅವರ ಬಗ್ಗೆ ವಿರೋಧ ಇರಬಹುದು ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಸರ್ಕಾರದ ಪ್ರಸ್ತುತ ನಡೆ ಗಮನಿಸುತ್ತಿದ್ದರೆ ಗುಲಾಮಿ ಮನಸ್ಥಿತಿಯಿಂದ ಹೊರಬರಲು ಸಿದ್ಧವಿಲ್ಲದಂತೆ ಕಾಣುತ್ತದೆ. ಮೆಕಾಲೆ ಹಾಗೂ ಕಾರ್ಲ್ ಮಾರ್ಕ್ಸ್​ ಪ್ರಭಾವವನ್ನೇ ಮುನ್ನಡೆಸಿಕೊಂಡು ಹೋಗುವಂತೆ ತೋರುತ್ತಿದೆ. ಸರ್ಕಾರದ ನಡೆ ರಾಷ್ಟ್ರದ ಹಿತಕ್ಕೆ ಘಾತಕವಾಗುವ ಸಾಧ್ಯತೆಯಿದೆ” ಎಂದು ಟೀಕಿಸಿದರು.

ಬಿಜೆಪಿ ನಾಯಕ ಎಸ್​​​ ಟಿ ಸೋಮಶೇಖರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ನನಗೆ ಗೊತ್ತಿದ್ದಂತೆ ಕಾಂಗ್ರೆಸ್​ಗೆ ಯಾರೂ ವಾಪಸ್ ಹೋಗುತ್ತಿಲ್ಲ. ಆದರೆ ಒಮ್ಮೆ ಅನುಮಾನ ಬಂದರೆ ಎಲ್ಲರನ್ನೂ ಅಪನಂಬಿಕೆಯಿಂದ ನೋಡಬೇಕಾಗುತ್ತದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

“ಡಿ ಕೆ ಶಿವಕುಮಾರ್ ಅವರು ಸೋಮಶೇಖರ್‌ ಅವರ ಗುರುವಾಗಿರಬಹುದು, ಅದರಲ್ಲೇನೂ ತಪ್ಪಿಲ್ಲ. ಯಾವುದೇ ಸಂಪರ್ಕವಿಲ್ಲದೆ ಅವರು ಹೀಗೆ ಹೇಳಲು ಸಾಧ್ಯವಿಲ್ಲ. ಒಂದೋ ಇವರಿಗೆ ಮಾಹಿತಿ ಇರಬೇಕು ಅಥವಾ ಯಾರೋ ಸಂಪರ್ಕದಲ್ಲಿರಬಹುದು” ಎಂದು ಹೇಳಿದರು.

“ಈಗಿನ ರಾಜಕೀಯ ಪರಿಸ್ಥಿತಿಯಲ್ಲಿ ಎಲ್ಲವೂ ಸರಿಯಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಸರಿಯಾಗಿದ್ದರೆ ಇವರ ವರ್ತನೆಯ ಕುರಿತು ಯಾರೂ ಪತ್ರ ಬರೆದು, ಶಾಸಕಾಂಗ ಸಭೆ ಕರೆಯುತ್ತಿರಲಿಲ್ಲ. ಆದ್ದರಿಂದ ಯಾರ ಮಾತನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಚಲೋ | ಪ್ರಜ್ವಲ್‌ನನ್ನು 54ನೇ ಭಯೋತ್ಪಾದಕನೆಂದು ಹೆಸರಿಸಬೇಕು: ವಕೀಲ ಎಸ್‌ ಬಾಲನ್

ಭಾರತದಲ್ಲಿ 53 ಮಂದಿಯನ್ನು ಭಯೋತ್ಪಾದಕರು ಎಂದು ಸರ್ಕಾರ ಪಟ್ಟಿಮಾಡಿದೆ. ಪ್ರಜ್ವಲ್ ರೇವಣ್ಣ...

ಹಾಸನ ಚಲೋ | ಬಳ್ಳಾರಿ ರೀತಿಯಲ್ಲಿ ಹಾಸನದಲ್ಲಿರುವ ಪಾಳೆಗಾರಿಕೆಯನ್ನು ಬಗ್ಗುಬಡಿಯಬೇಕು: ಎಸ್‌.ಆರ್ ಹಿರೇಮಠ್‌

ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್...

ದೇಶ ಉಳಿಸಲು 100 ಬಾರಿ ಜೈಲಿಗೆ ಹೋಗಲು ಸಿದ್ಧ: ಅರವಿಂದ್ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಪ್ರಕರಣದಲ್ಲಿ ನೀಡಲಾದ...

ಹಾಸನ ಚಲೋ | ಪ್ರಜ್ವಲ್-ರೇವಣ್ಣಗೆ ‘ಓನ್ಲೀ ಜೈಲ್ – ನೋ ಬೇಲ್’ ಎಂದು ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

ಹಾಸನದಲ್ಲಿ ನಡೆದಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ....