ಕೊಪ್ಪಳ ಜಿಲ್ಲೆಯ ಪ್ಯಾಕೇಜ್ ಟೆಂಡರ್ ರದ್ದತಿಗೆ ಸಿವಿಲ್ ಗುತ್ತಿಗೆದಾರರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

Date:

ಕೊಪ್ಪಳ ಜಿಲ್ಲೆಯ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕೋಪಯೊಗಿ ಇಲಾಖೆ ಕರೆದಿರುವ ಪ್ಯಾಕೇಜ್ ಟೆಂಡರ್ ರದ್ದುಪಡಿಸುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಕೊಪ್ಪಳ ಜಿಲ್ಲಾ ಸಿವಿಲ್ ಪ.ಜಾತಿ/ಪ.ಪಂಗಡದ ಗುತ್ತಿಗೆದಾರರ ಸಂಘದಿಂದ ಲೋಕೋಪಯೋಗಿ ಇಲಾಖೆ ಎದುರು ಅನಿರ್ದಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ

- Advertisement -

“ಕರ್ನಾಟಕ ಸರ್ಕಾರವು ಪ.ಜಾತಿ/ಪ.ಪಂಗಡ, ಹಿಂದುಳಿದ ವರ್ಗ, 2ಎ, ಮತ್ತು ಪ್ರವರ್ಗ-1ರ ಸಮುದಾಯದವರಿಗೆ ಜಾತಿವಾರು ಗುತ್ತಿಗೆದಾರರಿಗೆ‌ ಟೆಂಡರ್ ನೀಡುತ್ತಾರೆ. ಆದರೆ, ಕೊಪ್ಪಳ ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಕಲಬುರಗಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಸೇರಿ ಪ.ಜಾತಿ/ಪ.ಪಂಗಡ, ಹಿಂದುಳಿದ, 2ಎ ಮತ್ತು ಪ್ರ.ವರ್ಗ 1 ಜಾತಿಗಳ ಗುತ್ತಿಗೆದಾರರಿಗೆ ಟೆಂಡರ್ ನೀಡುವಲ್ಲಿ ಅನ್ಯಾವೆಸಗುತ್ತಿದ್ದಾರೆಂದು ಆರೋಪಿಸಿ ಕೆಟಿಪಿಪಿ ಕಾಯ್ದೆ ಸಂಪೂರ್ಣ ಉಲ್ಲಂಘನೆ ಮಾಡಿದ್ದಾರೆ” ಎಂದು ಸಂಗದ ವಿಭಾಗೀಯ ಅಧ್ಯಕ್ಷ ಸಿದ್ದು ಮಣ್ಣನವರ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪ.ಜಾತಿ/ಪ.ಪಂಗಡಕ್ಕೆ ಶೇ.24.10ರಷ್ಟಿದ್ದು, ಈ ನಿಯಮಾನುಸಾರ ಟೆಂಡರ್ ಕರೆಯಬೇಕು. ಆದರೆ, ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಪ.ಜಾತಿ/ಪ.ಪಂಗಡ, ಹಿಂದುಳಿದ ಸಮುದಾಯಗಳಿಗೆ ಅನ್ಯಾಯವೆಸಗುತ್ತಲೇ ಬಂದಿದ್ದಾರೆ. ಕೊಪ್ಪಳ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಕಲಬುರಗಿ ಮಖ್ಯ ಎಂಜಿನಿಯರ್ ಸವರ್ಣೀಯ ಜನಪ್ರತಿನಿಧಿಗಳ ಕೈಗೊಂಬೆಯಾಗಿ ವರ್ತಿಸಿ ಟೆಂಡರ್ ಹಂಚಿಕೆಯಲ್ಲೂ ತಳಸಮುದಾಯಗಳಿಗೆ ಅನ್ಯಾಯ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ತೀವ್ರಗೊಂಡ ಕಾರಂಜಾ ಸಂತ್ರಸ್ತರ ಧರಣಿ : ಡಿ.18ರಂದು ಸಿಎಂ ನೇತೃತ್ವದಲ್ಲಿ ಸಭೆ

“ಪ್ಯಾಕೇಜ್ ಟೆಂಡರ್ ಕರೆದಿರುವ ಅದಿಕಾರಿಗಳು ಹಾಗೂ ಇದರಲ್ಲಿ ಮೂಗು ತೂರಿಸಿರುವ ಜನಪ್ರತಿನಿಧಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ ಪ್ಯಾಕೇಜ್ ಟೆಂಡರ್‌ ರದ್ದುಪಡಿಸುವವರೆಗೂ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದು ಗುತ್ತಿಗೆದಾರ ಮಂಜುನಾಥ ಮಿಸಲಾಪುರ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...