ಬಾಗೇಪಲ್ಲಿ| ಪೌರ ಕಾರ್ಮಿಕರು ನಾಗರಿಕರ ಆರೋಗ್ಯ ಕಾಪಾಡುವ ವೈದ್ಯರು

Date:

ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಬಣ್ಣನೆ

ಪ್ರತಿನಿತ್ಯ ಪಟ್ಟಣದ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರು, ನಾಗರಿಕರ ಆರೋಗ್ಯ ಕಾಪಾಡುವ ವೈದ್ಯರಿದ್ದಂತೆ ಎಂದು ಬಾಗೇಪಲ್ಲಿ ಶಾಸಕ ಎಸ್ ಎನ್‌ ಸುಬ್ಬಾರೆಡ್ಡಿ ಬಣ್ಣಿಸಿದರು.

- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಪುರಸಭೆ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪೌರ ಕಾರ್ಮಿಕರು ಆರೋಗ್ಯವಾಗಿದ್ದರೆ ಮಾತ್ರ ಪಟ್ಟಣದ ಪೌರರು ಆರೋಗ್ಯದಿಂದಿರಲು ಸಾಧ್ಯ. ಆದ್ದರಿಂದ ಪೌರ ಕಾರ್ಮಿಕರ ಆರೋಗ್ಯವೂ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರು ಕೆಲಸದ ವೇಳೆ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಬಳಸುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸುಬ್ಬಾರೆಡ್ಡಿ 1

ಯಾವುದೇ ವಾರ್ಡಿನಲ್ಲಿ ಕುಡಿಯುವ ನೀರು, ಚರಂಡಿ, ರಸ್ತೆ ಮತ್ತಿತರರ ಸಮಸ್ಯೆಗಳು ಎದುರಾಗದಂತೆ ಕ್ರಮ ವಹಿಸಬೇಕು. ಹಾಗೇಯೆ ಪಟ್ಟಣದ ಮುಖ್ಯ ರಸ್ತೆಯ ವಿಭಾಜಕದಲ್ಲಿನ ಕಂಬಗಳಿಗೆ ಯಾವುದೇ ರೀತಿಯ ಫ್ಲೆಕ್ಸ್ ಅಳವಡಿಸದಂತೆ ಕ್ರಮ ಕೈಗೊಳ್ಳಬೇಕು‌‌. ಪಟ್ಟಣವನ್ನು ಸುಂದರ ಮತ್ತು ಸ್ವಚ್ಛ ಹಾಗೂ ಮಾದರಿ ಪಟ್ಟಣವಾಗಿಸಬೇಕು ಎಂದು ಹೇಳಿದರು.

ಪೌರಕಾರ್ಮಿಕರ ಮಕ್ಕಳು ಪೌರ ಕಾರ್ಮಿಕರಾಗಿ ದುಡಿಯಬೇಕೆಂದಿಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ. ಅವರು ಮುಂದೆ ಉತ್ತಮ ನಾಗರಿಕರಾಗಿ ಸಮಾಜದಲ್ಲಿ ಉನ್ನತ ಹುದ್ದೆಗೇರುವಂತಾಗಬೇಕು ಎಂದು ಪೌರ ಕಾರ್ಮಿಕರಿಗೆ ಶಾಸಕರು ಕಿವಿಮಾತು ಹೇಳಿದರು.

ಪುರಸಭೆ ಉಪಾಧ್ಯಕ್ಷೆ ಸುಜಾತ ನರಸಿಂಹ ನಾಯ್ಡು ಮಾತನಾಡಿ, ಗಾಳಿ, ಮಳೆ, ಬಿಸಿಲು, ಚಳಿ ಎನ್ನದೆ ದಿನನಿತ್ಯ ನಸುಕಿನ ಜಾವದಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರ ಕಾರ್ಮಿಕರು ನೈಜ ಕಾಯಕಯೋಗಿಗಳು, ಸ್ವಚ್ಛತೆಯ ರೂವಾರಿಗಳು. ಕೊರೊನಾದಂತ ಸಂದಿಗ್ಧ ಸ್ಥಿತಿಯಲ್ಲಿಯೂ ತಮ್ಮ ಜೀವದ ಹಂಗನ್ನು ತೊರೆದು ಬಿಡುವಿಲ್ಲದ ನೈರ್ಮಲ್ಯೀಕರಣ ಕಾರ್ಯ ಮಾಡಿದ್ದು ಶ್ಲಾಘನೀಯ ಎಂದು ಹೇಳಿದರು.

ಪುರಸಭೆ ಗಡಿ ಗುರುತಿಸಲು ಕ್ರಮ

ಬಾಗೇಪಲ್ಲಿ ಪಟ್ಟಣವು ವಿಸ್ತರಿಸುತ್ತಿದ್ದು, ಗಡಿ ಭಾಗದಲ್ಲಿ ಕೆಲ ಗ್ರಾಮ ಪಂಚಾಯತಿಗಳಿಗೂ ಹಾಗೂ ಪುರಸಭೆಯ ನಡುವೆ ಇರುವ ಗೊಂದಲ ನಿವಾರಣೆಗೆ ಗಡಿ ಗುರುತಿಸಲು ಸಿದ್ಧತೆ ನಡೆಸಲಾಗಿದೆ. ಇದರಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗಲಿದೆ. ಹಾಗೆಯೇ ನ.6 ರಂದು 320 ನಿವೇಶನ ರಹಿತರಿಗೆ ನಿವೇಶನಗಳನ್ನು ಹಂಚಲು ತೀರ್ಮಾನಿಸಲಾಗಿದೆ ಎಂದರು.

ಅ.5 ರಂದು ಆರೋಗ್ಯ ಸಚಿವರ ಭೇಟಿ

ತಾಲೂಕಿನಲ್ಲಿ ಹಲವಾರು ಕಾಮಗಾರಿಗಳ ಚಾಲನೆಗೆ ಅ.5ರ ಶನಿವಾರ ಸಂಜೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಅವರು ಪಟ್ಟಣಕ್ಕೆ ಆಗಮಿಸಲಿದ್ದಾರೆ. ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಆಸ್ಪತ್ರೆಯ ಕೆಳ ಮಹಡಿ ನವೀಕರಿಸುವ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಹಾಗೇಯೆ ಚೇಳೂರು ತಾಲೂಕಿನ ಚಾಕವೇಲುವಿನಲ್ಲಿ ನಿರ್ಮಾಣವಾದ ನೂತನ ಆರೋಗ್ಯ ಕೇಂದ್ರದ ಉದ್ಘಾಟನೆ ಮತ್ತು ಜಿ.ಮದ್ದೇಪಲ್ಲಿಯಲ್ಲಿ ಸುಮಾರು 5 ಕೋಟಿ ವೆಚ್ಚದಲ್ಲಿ ಆರೋಗ್ಯ ಕೇಂದ್ರದ ನಿರ್ಮಾಣ ಕಾಮಾಗಾರಿಗೆ ಶಂಕುಸ್ಥಾಪನೆಯನ್ನು ಸಚಿವರು ಮಾಡಲಿದ್ದಾರೆ ಎಂದು ಶಾಸಕರು ತಿಳಿಸಿದರು.

ಇದೇ ವೇಳೆ ಪುರಸಭೆ ಎಲ್ಲಾ 62 ಪೌರ ಕಾರ್ಮಿಕರು ಹಾಗೂ ನೀರು ಸರಬರಾಜುದಾರರಿಗೆ ಶಾಸಕರಿಂದ ಉಚಿತವಾಗಿ ಬಟ್ಟೆಗಳನ್ನು ಉಡುಗೊರೆಯಾಗಿ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಲ್ಲಿ ಅಭಿವೃದ್ಧಿ, ಮಾಧ್ಯಮಗಳಲ್ಲಿ ಬ್ರ್ಯಾಂಡ್ ಬೆಂಗಳೂರು

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಎನ್.ಶ್ರೀನಿವಾಸ್, ಪುರಸಭೆ ಸದಸ್ಯರಾದ ಶ್ರೀನಿವಾಸ್ ರೆಡ್ಡಿ, ಎ.ನಂಜುಂಡಪ್ಪ, ರೇಷ್ಮಾ ಭಾನು, ಗಡ್ಡಂ ರಮೇಶ್, ಶ್ರೀನಾಥ್, ಪುರಸಭೆ ಅಧಿಕಾರಿಗಳಾದ ಕೃಷ್ಣಪ್ಪ, ಅತಾವುಲ್ಲಾ ಹಾಗೂ ಪುರಸಭೆ ಸದಸ್ಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...