ಮಂಡ್ಯ | ಚುನಾವಣಾ ಆಯೋಗದ ನಡೆ ಖಂಡಿಸಿ ನಾಗರಿಕ ಸಮಾಜದ ಆಕ್ರೋಶ

Date:

ವಿಶೇಷ ತೀವ್ರ ಪರಿಶೀಲನೆ (SIR) ಪ್ರಕ್ರಿಯೆಯನ್ನು ಪ್ರಜಾತಾಂತ್ರಿಕಗೊಳಿಸಬೇಕು ಹಾಗೂ ನಾಗರಿಕ ಸಮಾಜದ ನಾಲ್ಕು ಪ್ರಮುಖ ಹಕ್ಕೊತ್ತಾಯಗಳನ್ನು ಪರಿಗಣಿಸಿ ಉತ್ತರ ನೀಡಬೇಕು ಎಂದು ಒತ್ತಾಯಿಸಿ ಎಸ್‌ಐಆರ್ ವಿರೋಧಿ ಒಕ್ಕೂಟದ ಸದಸ್ಯರು ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನಾಕಾರರು, ಮೇ 30ರಂದು ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿ ಎಸ್‌ಐಆರ್ ಪ್ರಕ್ರಿಯೆ ಕುರಿತು ತಮ್ಮ ಹಕ್ಕೊತ್ತಾಯಗಳನ್ನು ಮುಂದಿಟ್ಟಿದ್ದರೂ ಇದುವರೆಗೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶಕ್ಕೂ ಚುನಾವಣಾ ಆಯೋಗದ ಅಧಿಕಾರಿಗಳನ್ನು ಆಹ್ವಾನಿಸಿ, ನಾಗರಿಕ ಸಮಾಜದ ಪ್ರಶ್ನೆಗಳಿಗೆ ಉತ್ತರ ನೀಡುವಂತೆ ಮನವಿ ಮಾಡಲಾಗಿತ್ತು. ರಾಜ್ಯದ ಹಲವು ಸಾಹಿತಿಗಳು, ಚಿಂತಕರು, ಕಲಾವಿದರು ಹಾಗೂ ರಂಗಕರ್ಮಿಗಳೂ ಸಹ ಬಹಿರಂಗ ಪತ್ರದ ಮೂಲಕ ಆಯೋಗವನ್ನು ಪ್ರಶ್ನಿಸಿದ್ದರು. ಅಲ್ಲದೆ, ರಾಜ್ಯ ಸರ್ಕಾರದ ಪತ್ರಕ್ಕೂ ಆಯೋಗ ಪ್ರತಿಕ್ರಿಯಿಸಿಲ್ಲ ಎಂಬ ಮಾಹಿತಿ ಇದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಸಾರ್ವಜನಿಕ ಸಂಸ್ಥೆಯಾಗಿ ಚುನಾವಣಾ ಆಯೋಗವು ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವುದು ತನ್ನ ಕರ್ತವ್ಯವಾಗಿದ್ದು, ಅದನ್ನು ನಿರ್ಲಕ್ಷಿಸುವುದು ಪ್ರಜಾತಾಂತ್ರಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಆಯೋಗವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಈ ಹಿನ್ನೆಲೆಯಲ್ಲಿ ಜೂನ್ 30ರಂದು ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿ, ಆಯೋಗದ ಸರ್ವಾಧಿಕಾರಿ ಧೋರಣೆ ಹಾಗೂ ಸಂವಿಧಾನ ವಿರೋಧಿ ಎಸ್‌ಐಆರ್ ಪ್ರಕ್ರಿಯೆಯನ್ನು ಖಂಡಿಸಲಾಯಿತು. ಈಗಾದರೂ ನಾಗರಿಕ ಸಮಾಜದ ಹಕ್ಕೊತ್ತಾಯಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಲಾಜಿಕಲ್ ಡಿಪೆಂಡೆನ್ಸಿ ಸಾಫ್ಟ್‌ವೇರ್ ಬಳಸಿ ಲಕ್ಷಾಂತರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವುದು ಹಾಗೂ ಅವರಿಗೆ ಮೇಲ್ಮನವಿ ಸಲ್ಲಿಸಲು ಸಮರ್ಪಕ ಅವಕಾಶ ನೀಡದೇ ಮುಂದುವರಿದರೆ, ಕರ್ನಾಟಕದಲ್ಲಿ ಇದು ಬೃಹತ್ ಜನಾಂದೋಲನವಾಗಿ ರೂಪುಗೊಳ್ಳಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ?ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗಿನಲ್ಲಿ ಮಳೆ ಗಣನೀಯ ಇಳಿಕೆ

ಪ್ರತಿಭಟನೆಯಲ್ಲಿ ವಕೀಲ ಬಿ.ಟಿ. ವಿಶ್ವನಾಥ್, ಎಸ್‌ಐಆರ್ ವಿರೋಧಿ ಒಕ್ಕೂಟದ ಎಂ. ಸಿದ್ದರಾಜು, ಮಹಿಳಾ ಮುನ್ನಡೆಯ ಬಿ.ಎಸ್. ಶಿಲ್ಪಾ, ಮುತ್ತಯ್ಯ, ಸುಮ, ಶಶಿಕಲಾ, ಶಿವ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ರಸ್ತೆಯಲ್ಲಿ ಬರ್ತ್‌ಡೇ ಪಾರ್ಟಿ: ಮನೆಗೆ ಹೋಗಲು ದಾರಿ ಕೇಳಿದ ವ್ಯಕ್ತಿಯ ಮೇಲೆ ಹಲ್ಲೆ, ಮೂವರ ವಿರುದ್ಧ ದೂರು

ಮುಂಡಗೋಡ: ರಸ್ತೆಯಲ್ಲಿ ಹುಟ್ಟುಹಬ್ಬದ ಆಚರಣೆ ಮಾಡುತ್ತಿದ್ದಾಗ ಮನೆಗೆ ಹೋಗಲು ಜಾಗ ಕೇಳಿದ್ದಕ್ಕೆ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...