ತುಮಕೂರು | ಸೋಮಣ್ಣ ಇದ್ದ ಸಭೆಯಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ತಳ್ಳಾಟ-ನೂಕಾಟ

Date:

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದಾಗಿ ಕೆಲ ನಾಯಕರಲ್ಲಿ ಅಸಮಾಧಾನವಿತ್ತು. ಇದೀಗ ಮೈತ್ರಿ ಸಭೆಯಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ. ತುಮಕೂರು ಜಿಲ್ಲೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತಿನ ಚಕಮಕಿ ಉಂಟಾದ ಘಟನೆ ನಡೆದಿದೆ.

ಜಿಲ್ಲೆಯ ತುರುವೇಕೆರೆಯಲ್ಲಿ ನಡೆದ ಸಭೆಯಲ್ಲಿ ಮಾತಿನ ಚಕಮಕಿ ಉಂಟಾಗಿದ್ದು, ಇದೇ ವೇಳೆ ತಳ್ಳಾಟ-ನೂಕಾಟ ಕೂಡ ನಡೆದಿದೆ.

ಕಳೆದ ಬಾರಿ ನಾನು ಸೋಲಲು ವಿಶ್ವನಾಥ್ ಕಾರಣ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊಂಡಜ್ಜಿ‌ ವಿಶ್ವನಾಥ್ ಕಳೆದ ಬಾರಿ ಮುದ್ದಹನುಮೇಗೌಡ ಪರ ಕೆಲಸ ಮಾಡಿದರು ಎಂದು ಭಾಷಣದ ವೇಳೆ ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ ಮಾಡಿದ್ದಾರೆ. ಈ ವೇಳೆ ಎಂ ಟಿ  ಕೃಷ್ಣಪ್ಪ ಆರೋಪಕ್ಕೆ ವಿಶ್ವನಾಥ್ ಸಮಜಾಯಿಷಿ ನೀಡಲು ಮುಂದಾದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದು ಇನ್ನಷ್ಟು ಸಮಸ್ಯೆ ಉಂಟು ಮಾಡುವುದನ್ನು ಅರಿತ ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ವಿ.ಸೋಮಣ್ಣ ಬೇಡವೆಂದರು. ವೇದಿಕೆ ಮುಂಭಾಗದಲ್ಲಿದ್ದ ಜೆಡಿಎಸ್‌ನ ಕಾರ್ಯಕರ್ತ ಸತೀಶ್ ಎಂಬುವವರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.ಕಾರ್ಯಕರ್ತರ ನಡುವೆ ವಾಗ್ವಾದ ಹಿನ್ನೆಲೆ ಸಭೆಯಲ್ಲಿ ಕೆಲಕಾಲ ಗೊಂದಲ ಉಂಟಾಗಿದ್ದು, ಎಂ.ಟಿ.ಕೃಷ್ಣಪ್ಪ, ಮಸಾಲೆ ಜಯರಾಂ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಲು ಶ್ರಮಿಸಿದರು.

“ಮೈತ್ರಿ ಅಂದ್ಮೇಲೆ ಒಂದು ಮಾತು ಬರುತ್ತದೆ, ಹೋಗುತ್ತದೆ. ಆದರೆ ಅದನ್ನೇ ಮನದಲ್ಲಿ‌ ಇಟ್ಟುಕೊಂಡು ಚುನಾವಣೆಗೆ ಇಳಿದರೆ ಕಷ್ಟ” ಎಂದು ಹೇಳುತ್ತಾ ವಿ ಸೋಮಣ್ಣ, ‘ಭಾರತ್ ಮಾತಾಕೀ’ ಎಂದು ಘೋಷಣೆ ಕೂಗಿ, ಎಲ್ಲರನ್ನೂ ಸಮಾಧಾನಿಸಲು ಯತ್ನಿಸಿದರು. ಮಾಧ್ಯಮದವರ ಎದುರಲ್ಲೇ ಈ ಎಲ್ಲ ಬೆಳವಣಿಗೆಗಳು ನಡೆದಿದ್ದು, ಮಾತಿನ ಚಕಮಕಿಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಕ್ಕೆ ನೀಡಿರುವ ಆದೇಶ ಹಿಂಪಡೆಯಲು ಒತ್ತಾಯಿಸಿ; ಜೂ.3ರಂದು ಪ್ರತಿಭಟನೆ

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ನೀಡಿರುವ ಆದೇಶ ಹಿಂಪಡೆಯುವಂತೆ...

ಬೆಂಗಳೂರು | ಮಾಲ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಸೂಚನೆ ನೀಡಿದ ಡಿಸಿಎಂ

ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್‌ಗಳು, ಗೇಮಿಂಗ್ ಜೋನ್‌ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ...

ಬೆಂಗಳೂರು | ಕಾಲಮಿತಿಯೊಳಗೆ ರಸ್ತೆ ಗುಂಡಿ ಮುಚ್ಚಲು ಸೂಚನೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ

"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗಳಲ್ಲಿ ಬಿದ್ದಿರುವ ರಸ್ತೆಗುಂಡಿಗಳನ್ನು...

ರಾಜ್ಯದಲ್ಲಿ ಮೇ 31ರಿಂದ ಮುಂಗಾರು ಮಳೆ ಆರಂಭ

ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ವಾತಾವರಣ ತಂಪಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವಾರ...