ಮೈಸೂರು | ದಸರಾಕ್ಕೆ ಬಂದಿದ್ದ ಆನೆಗಳ ನಡುವೆ ಗುದ್ದಾಟ: ದಿಕ್ಕಾಪಾಲಾಗಿ ಓಡಿದ ಜನ!

Date:

Advertisements

ನಾಡಹಬ್ಬ ದಸರೆಗೆಂದು ಬಂದಿದ್ದ ಎರಡು ಆನೆಗಳ ನಡುವೆ ಗುದ್ದಾಟ ನಡೆದಿದ್ದರಿಂದ ಆತಂಕ ಸೃಷ್ಟಿಯಾದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ದಸರಾಕ್ಕೆಂದು ಬಂದಿದ್ದ ಧನಂಜಯ ಹಾಗೂ ಕಂಜನ್ ಎಂಬ ಆನೆಗಳ ನಡುವೆ ಗುದ್ದಾಟ ನಡೆದಿದ್ದು, ಈ ವೇಳೆ ಕಂಜನ್ ಆನೆಯ ಮೇಲೆ ಕುಳಿತಿದ್ದ ಮಾವುತ ಕೆಳಕ್ಕೆ ಬಿದ್ದಿದ್ದಾನೆ‌.

ಮೈಸೂರು ಅರಮನೆಯ ಆವರಣದಿಂದ ಹೊರಕ್ಕೆ ಓಡಿ ಬಂದ ಕಂಜನ್ ಹಾಗೂ ಧನಂಜಯ ಆನೆಗಳು, ನೋಡನೋಡುತ್ತಿದ್ದಂತೆಯೇ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಸಿತು.

Advertisements

ಮಾವುತನನ್ನ ಕೆಳಕ್ಕೆ ಬೀಳಿಸಿ ಹೊರಕ್ಕೆ ಬಂದಿದ್ದ ಕಂಜನ್ ಆನೆಯನ್ನು ನಿಯಂತ್ರಿಸಲು‌ ಹರಸಾಹಸ ಪಟ್ಟು, ಕೊನೆಗೆ ನಿಯಂತ್ರಣ ಸಾಧಿಸಲು ಸಾಧ್ಯವಾಯಿತು. ಆನೆಗಳ ಜಗಳ ಕಂಡವರು ದಿಕ್ಕಾಪಾಲಾಗಿ ಓಡಿದ್ದಾರೆ.

ಅರಮನೆಯ ಜಯಮಾರ್ತಾಂಡ‌ ದ್ವಾರದ‌ ಮೂಲಕ ಹೊರಗಡೆ ಬಂದ ಆನೆಗಳು, ರಸ್ತೆಯ ಕಡೆಗೆ ಓಡಿತು.

ಮಾವುತ- ಕಾವಾಡಿಗಳ ಚಾಣಾಕ್ಷತದಿಂದ ಆನೆಗಳ ಆಟೋಟಕ್ಕೆ‌ ಬ್ರೇಕ್ ಹಾಕಲಾಯಿತು. ಬಳಿಕ ಆನೆಗಳನ್ನು ಅರಮನೆಗೆ ಕರೆ ತರುವಲ್ಲಿ ಸಿಬ್ಬಂದಿ ಯಶಸ್ವಿಯಾದರು. ಸದ್ಯ ಎರಡೂ ಆನೆಗಳನ್ನು ಕೋಡಿ‌ಸೋಮೇಶ್ವರ ದೇವಸ್ಥಾನ ಸಮೀಪ ಕಟ್ಟಿ ಹಾಕಲಾಗಿದೆ ಎಂದು ತಿಳಿದು ಬಂದಿದೆ.

ಆನೆಗಳ ಜಗಳದ ವೀಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ದಸರಾ ಸಿದ್ಧತೆಯ ನಡುವೆ ಈ ರೀತಿಯ ಬೆಳವಣಿಗೆ ಆಗಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X