ರಾಮನಗರ | ಶಾಸಕರ ಜೊತೆಗೆ ಟೋಲ್‌ ಸಿಬ್ಬಂದಿ ಏಕವಚನದಲ್ಲಿ ವಾಗ್ವಾದ

Date:

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇ ಕುಂಬಳಗೂಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾ ಸಿಬ್ಬಂದಿ ಮಂಡ್ಯ ಜಿಲ್ಲೆ ಮಳವಳ್ಳಿ ಕ್ಷೇತ್ರದ ಶಾಸಕ ಎಂ.ಪಿ ನರೇಂದ್ರ ಸ್ವಾಮಿ ಜೊತೆಗೆ ಏಕವಚನದಲ್ಲಿ ವಾಗ್ವಾದ ನಡೆಸಿದ ಘಟನೆ ನಡೆದಿದೆ.

ಶಾಸಕ ನರೇಂದ್ರ ಸ್ವಾಮಿ ಅವರು ಭಾನುವಾರ ಬೆಂಗಳೂರಿನಿಂದ ಮಳವಳ್ಳಿ ಕಡೆಗೆ ಹೊರಟಿದ್ದರು. ಟೋಲ್ ಪ್ಲಾಜಾದಲ್ಲಿ ಅವರ ಕಾರನ್ನು ತಡೆದ ಸಿಬ್ಬಂದಿ, ಪಾಸ್ ಇದ್ದರೂ ಮುಂದಕ್ಕೆ ಬಿಡಲಿಲ್ಲ. ಈ ಕುರಿತು, ಪ್ರಶ್ನೆ ಮಾಡಿದ ಕಾರು ಚಾಲಕ ಹಾಗೂ ಶಾಸಕರೊಂದಿಗೆ ಏಕವಚನದಲ್ಲಿ ಮಾತನಾಡಿದ್ದಾರೆ.

ಕಾರನ್ನು ತಡೆದ ಟೋಲ್ ಸಿಬ್ಬಂದಿ ಅನಗತ್ಯವಾಗಿ ನಮ್ಮೊಂದಿಗೆ ವಾಗ್ವಾದ ನಡೆಸಿದರು. ಕಾರು ಬಿಡದೆ ದುರಹಂಕಾರದಿಂದ ವರ್ತಿಸಿದರು. ಗೌರವದಿಂದ ಮಾತನಾಡಿ ಎಂದಿದ್ದಕ್ಕೆ, ನೀ ಯಾರಾದರೇನು, ನಾನಿಲ್ಲಿ ಮ್ಯಾನೇಜರ್, ನಿನ್ನ ಪಾಸ್ ತೋರಿಸು ಎಂದು ಏಕವಚನದಲ್ಲಿ ಹೇಳಿದರು ಎಂದು ಶಾಸಕ ಪಿ ಎಂ ನರೇಂದ್ರಸ್ವಾಮಿ ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಘಟನೆ ಕುರಿತು ಸ್ಥಳೀಯ ಪೊಲೀಸರ ಗಮನಕ್ಕೆ ತರಲಾಗಿದೆ. ಯಾರಾದರೂ ಬರಲಿ, ನಾವು ನೋಡದ ಪೊಲೀಸರಾ ಎಂದು ಟೋಲ್‌ ಸಿಬ್ಬಂದಿ ಉಡಾಫೆಯಾಗಿ ನಡೆದುಕೊಂಡರು. ಜನಪ್ರತಿನಿಧಿಗಳ ಜೊತೆ ಗೌರವದಿಂದ ವರ್ತಿಸದ ಸಿಬ್ಬಂದಿ, ಇನ್ನು ಸಾರ್ವಜನಿಕರ ಜೊತೆ ಯಾವ ರೀತಿ ವರ್ತಿಸುತ್ತಾರೆ? ಟೋಲ್ ನಲ್ಲಿ ಅತಿ ಗಣ್ಯರು ತೆರಳಲು ಪ್ರತ್ಯೇಕ ಮಾರ್ಗದ ವ್ಯವಸ್ಥೆ ಇಲ್ಲ. ಈ ಬಗ್ಗೆ ಸ್ಪೀಕರ್ ಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಾಸಕಿ ಕರೆಮ್ಮಗೆ ನಿಂದನೆ ಆರೋಪ; ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...

ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ...