ಮಂಡ್ಯ | ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಗಲಾಟೆ: ಪೊಲೀಸರಿಂದ ಲಾಠಿ ಚಾರ್ಜ್‌

Date:

Advertisements

ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಬದರಿಕೊಪ್ಪಲಿನ ಗಣಪತಿ ಮೆರವಣಿಗೆಯ ವೇಳೆ ಹಿಂದೂ ಮತ್ತು ಮುಸ್ಲಿಂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕ್ಕೇರಿದೆ. ಈ ಸಂದರ್ಭದಲ್ಲಿ ಜಗಳ ತೀವ್ರಗೊಂಡಿದ್ದರಿಂದ ಪೊಲೀಸರು ಲಾಠಿ ಪ್ರಹಾರ ನಡೆಸಿ ಎರಡು ಗುಂಪುಗಳನ್ನು ಚದುರಿಸಲು ಪ್ರಯತ್ನಿಸಿದ್ದಾರೆ.

ಮೆರವಣಿಗೆ ಮೈಸೂರು ರಸ್ತೆಗೆ ಬಂದಾಗ, ಹಿಂದೂ ಯುವಕರು “ಜೈ ಶ್ರೀರಾಮ್” ಘೋಷಣೆ ಕೂಗುತ್ತಿದ್ದರೆ, ಮುಸ್ಲಿಂ ಯುವಕರು “ಅಲ್ಲಾಹು ಅಕ್ಬರ್” ಎಂದು ಕೂಗುತ್ತಿದ್ದರು. ಈ ವೇಳೆ ಕಲ್ಲು, ಬಾಟಲಿ ತೂರಾಟ ನಡೆಯಿತು.‌ ಜನರು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ ಘಟನೆ ನಡೆದಿದೆ.

ಪೊಲೀಸರು ಹಲವಾರು ಬಾರಿ ಲಾಠಿ ಪ್ರಹಾರ ಮಾಡಿದರೂ, ಗುಂಪುಗಳು ಚದುರದೇ ಪರಸ್ಪರ ಘೋಷಣೆ ಕೂಗಿದ್ದಾರೆ. ಘಟನೆಯ ನಂತರ ಪಟ್ಟಣದ ಅಂಗಡಿ-ಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದು, ಪೂರ್ತಿ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

Advertisements

ಬ್ರಹ್ಮನಗಿರಿ, ಟಿ. ಮರಿಯಪ್ಪ ಸರ್ಕಲ್, ಮತ್ತು ಪೊಲೀಸ್ ಠಾಣೆ ಬಳಿ ಮುಸುಕಿನ ಕತ್ತಲಿನಲ್ಲಿ ಪಟ್ಟಣದಲ್ಲಿ ಕಲ್ಲು ತೂರಾಟ ಮಾಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕಡಿಮೆ ಸಂಖ್ಯೆಯಲ್ಲಿ ಪೊಲೀಸರು ಇದ್ದ ಕಾರಣ ಗಲಾಟೆಯನ್ನು ಹತೋಟಿಗೆ ತರಲು ವಿಫಲರಾದರು.

ಹೆಚ್ಚಿನ ಪೊಲೀಸ್ ಸಿಬ್ಬಂದಿಯೊಂದಿಗೆ ಎಸ್ಪಿ ನಾಲದಂಡಿ ಸ್ಥಳಕ್ಕೆ ಆಗಮಿಸಿದ್ದರೂ, ಗಲಾಟೆಯನ್ನು ನಿಯಂತ್ರಿಸಲು ಹರಸಾಹಸಪಟ್ಟರು. ಇದರಿಂದಾಗಿ ಮಂಡ್ಯ ರಸ್ತೆ ಮತ್ತು ಮೈಸೂರು ರಸ್ತೆ, ತುಮಕೂರು ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಲಾಯಿತು.

144 ಸೆಕ್ಷನ್ ಜಾರಿ: ಈವರೆಗೆ 28 ಮಂದಿಯ ಬಂಧನ

ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದಲ್ಲದೆ ಮಾರಕಾಸ್ತ್ರಗಳನ್ನು ಹಿಡಿದು ಓಡಾದಿದ್ದರು. ನಂತರ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು ಹಲವು ಅಂಗಡಿಗಳು, ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಿದ್ದರು. ಇದರಿಂದ ಕೆರಳಿದ ಮತ್ತೊಂದು ಸಮುದಾಯದವರು ಸಹ ಬೆಂಕಿ ಹಚ್ಚಿದ್ದಾರೆ.

ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎರಡು ಸಮುದಾಯದ 28 ಮಂದಿಯನ್ನು ಬಂಧಿಸಿ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆಯ ಬಳಿಕ ಮಂಡ್ಯದ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದರಿಂ ಮುನ್ನೆಚ್ಚರಿಕಾ ಕ್ರಮವಾಗಿ ಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

ನಾಗಮಂಗಲದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಡಾ. ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಸ್ಥಿತಿಯನ್ನು ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದರಿಂದ ಸೆಪ್ಟೆಂಬರ್ 14ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದರು.

ಇನ್ನು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರು ಭೇಟಿ ನೀಡಿ, ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಹೆಚ್ಚಿನ ಪೊಲೀಸ್ ಸಿಬ್ಬಂದಿಯೊಂದಿಗೆ ಎಸ್ಪಿ ನಾಲದಂಡಿ ಸ್ಥಳಕ್ಕೆ ಆಗಮಿಸಿದ್ದರೂ, ಗಲಾಟೆಯನ್ನು ನಿಯಂತ್ರಿಸಲು ಹರಸಾಹಸಪಟ್ಟರು. ಇದರಿಂದಾಗಿ ಮಂಡ್ಯ ರಸ್ತೆ ಮತ್ತು ಮೈಸೂರು ರಸ್ತೆ, ತುಮಕೂರು ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಲಾಯಿತು.

    ಎಸ್ಪಿ ನಾಲದಂಡಿ
    ಅಲ್ಲ…. ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ

  2. ಜೈ ಶ್ರೀ ರಾಂ ಗ್ಯಾಂಗುಗಳು ಅಲ್ಲಾಹು ಅಕ್ಬರ್ ಗ್ಯಾಂಗುಗಳನ್ನ ಕಿಚಾಯಿಸುವುದು ಶಿವಮೊಗ್ಗ ಹುಬ್ಬಳ್ಳಿ ಮಂಗಳೂರಿನಲ್ಲೆಲ್ಲ ನಡೆಯುತ್ತಲೇ ಇದೆ.ನಾನಂತೂ ಎರಡೂ ಗ್ಯಾಂಗುಗಳ ಪರ ಇಲ್ಲ.ಇಂದಿನ ಪರಿಸ್ಥಿತಿಯಲ್ಲಿ ಜೈ ಶ್ರೀ ರಾಂ ವಿಷಜಂತುಗಳ ಗ್ಯಾಂಗುಗಳನ್ನ ಬಗ್ಗು ಬಡಿಯಲೇ ಬೇಕು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X