ಈದ್ ಹಬ್ಬದ ಪ್ರಯುಕ್ತ ಖುಷಿ ಸಂಭ್ರಮಿಸಲು ಖಾಸಗಿ ರೆಸಾರ್ಟ್ವೊಂದಕ್ಕೆ ತೆರಳಿದ್ದ ಕುಟುಂಬವೊಂದು ಆಘಾತ ಅನುಭವಿಸಿದ ಘಟನೆ ನಡೆದಿದೆ. ಸ್ವಿಮ್ಮಿಂಗ್ ಪೂಲ್ನಲ್ಲಿ ಮುಳುಗಿ ಕುಟುಂಬದ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನಡೆದಿದೆ.
ಉಡುಪಿಯ ಹೂಡೆ ಮೂಲದ ಮುಹಮ್ಮದ್ ಅರೀಝ್ (10) ಮೃತ ವಿದ್ಯಾರ್ಥಿ. ಈದ್ ಹಬ್ಬದ ಹಿನ್ನೆಲೆಯಲ್ಲಿ ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕೆ ಬಂದಿದ್ದನು. ಆದರೆ ಟಿನ್ ಟಾನ್ ಅಡ್ವೆಂಚರ್ಸ್ ರೆಸಾರ್ಟ್ನ ಸ್ವಿಮ್ಮಿಂಗ್ ಪೂಲ್ನ ನೀರಿನಲ್ಲಿ ಬಿದ್ದು ಅಸ್ವಸ್ಥನಾಗಿದ್ದನು. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅರೀಝ್ ಮೃತಪಟ್ಟಿದ್ದಾನೆ.
ಸದ್ಯ ಈ ಸಂಬಂಧ ಬಾಲಕನ ಪೋಷಕರು ಟಿನ್ ಟಾನ್ ಅಡ್ವೆಂಚರ್ಸ್ ರೆಸಾರ್ಟ್ ವಿರುದ್ಧ ದೂರು ದಾಖಲಿಸಿದ್ದಾರೆ. ಮಗುವಿನ ಸಾವಿಗೆ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್ನ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣವೆಂದು ದೂರಿನಲ್ಲಿ ಆರೋಪಿಸಲಾಗಿದೆ. ಲೈಫ್ ಜಾಕೆಟ್, ಲೈಫ್ ಗಾರ್ಡ್ ಇನ್ನಿತರ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಈ ದುರ್ಘಟನೆ ಸಂಭವಿಸಿದೆಯೆಂದು ದೂರಿನಲ್ಲಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಇದನ್ನು ಓದಿದ್ದೀರಾ? ನರೇಂದ್ರ ಮೋದಿಯನ್ನು ಕಿತ್ತೊಗೆಯುವುದೇ ನಮ್ಮೆಲ್ಲರ ಗುರಿ: ಬಿ ಕೆ ಹರಿಪ್ರಸಾದ್
ಮೃತ ವಿದ್ಯಾರ್ಥಿಯು ತಂದೆ, ತಾಯಿ ಅಪಾರ ಬಂಧು ಬಳಗವನ್ನು ಅಗಲಿದ್ದಾನೆ. ಈತ ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಯಾಗಿದ್ದ ಆಡಳಿತ ಮಂಡಳಿ ಸಂತಾಪ ವ್ಯಕ್ತಪಡಿಸಿದೆ.
