ವರ್ಚುವಲ್‌ ಮೂಲಕ ಒಂಬತ್ತು ಹೊಸ ವಿಶ್ವವಿದ್ಯಾಲಯ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

Date:

  • ಮುಂದಿನ ಐದು ವರ್ಷಗಳಲ್ಲಿ ಎಲ್ಲ ಸಂಸ್ಥೆಗಳು ಐಐಟಿ ಮಾದರಿಯಲ್ಲಿ ಇರಲಿವೆ
  • ಜಗತ್ತಿನ ಉನ್ನತ ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ: ಸಿಎಂ

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಒಂಬತ್ತು ನೂತನ ವಿಶ್ವವಿದ್ಯಾಲಯಗಳಿಗೆ ವರ್ಚುವಲ್‌ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, “ಇಂದು ಆರಂಭಿಸಿರುವ ಎಲ್ಲ ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು. ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಈ ರೀತಿಯ ವಿಶ್ವ ವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲರೂ ಕರ್ನಾಟಕದ ಮಾದರಿ ಅಳವಡಿಸಿಕೊಳ್ಳುವಂತಾಗಬೇಕು” ಎಂದರು.

“ದೇಶದಲ್ಲಿ ಉನ್ನತ ಶಿಕ್ಷಣ ಅಂದರೆ ಐಐಟಿ. ಅದಕ್ಕೆ ಸಿಇಟಿ ಮೂಲಕ ಆಯ್ಕೆ ಆಗಬೇಕು. ನಮ್ಮ ಮಕ್ಕಳೂ  ಐಐಟಿ ಮಾದರಿಯಲ್ಲಿ ಶಿಕ್ಷಣ ಪಡೆಯಬೇಕು ಎಂದು  ಕೆಐಟಿ ಸ್ಥಾಪನೆ ಮಾಡಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಎಲ್ಲ ಸಂಸ್ಥೆಗಳು  ಐಐಟಿ ಮಾದರಿಯಲ್ಲಿ ಇರಲಿವೆ.  ಐಐಟಿ ಹುಡುಕಿಕೊಂಡು ಹೋಗುವ ಬದಲು ಇಲ್ಲಿಯೇ  ಐಐಟಿ ಸೃಷ್ಟಿಸುತ್ತಿದ್ದೇವೆ. ಜಗತ್ತಿನ ಉನ್ನತ  ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಾಡಾಳ್‌ ವಿರೂಪಾಕ್ಷಪ್ಪರನ್ನು ತನಿಖಾಧಿಕಾರಿ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸ್‌

ವಿದ್ಯಾರ್ಥಿಗಳು ನಾಡಿನ ಭವಿಷ್ಯ. ಈಗ 21 ನೇ ಶತಮಾನ ಜ್ಞಾನದ ಶತಮಾನ. ಮುಂದಿನ ದಿನಗಳಲ್ಲಿ ಭಾರತ ವಿಶ್ವ ಗುರುವಾಗಲಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಪಾಕಿಸ್ತಾನದ ಪ್ರಜೆಗಳು ಮೋದಿಯಂಥ  ಪ್ರಧಾನಿ ಬೇಕು ಅಂತ ಹೇಳುತ್ತಿದ್ದಾರೆ. ಚೀನಾನ ಕೂಡ ಭಾರತ ಕೊರೊನಾ ನಿಯಂತ್ರಣ ಮಾಡಿದ್ದನ್ನು ಮೆಚ್ಚಿಕೊಂಡಿದೆ” ಎಂದರು.

ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವತ್ಥನಾರಾಯಣ, ಸಚಿವ ಮುರುಗೇಶ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಸೇರಿದಂತೆ ಇತರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ‘ಸಾರಾಯಿ‌ ಮುಕ್ತ ಗ್ರಾಮ’ ಎಂದು ನಾಮಫಲಕ ಅನಾವರಣ

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕು ಕೂಡಲಗಿ ಗ್ರಾಮದಲ್ಲಿ ಗ್ರಾಮಸ್ಥರು, ಮಹಿಳೆಯರು, ಯುವಜನತೆ...

ವಿಜಯಪುರ | ಸಮಯಕ್ಕೆಬಾರದ ಬಸ್‌, ದಲಿತ ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ

ಇಂಡಿಯ ದಲಿತ ವಿದ್ಯಾರ್ಥಿ ಪರಿಷತ್  ಹಾಗೂ ಪ್ರಗತಿಪರ ಸಂಘಟನೆಗಳು ಹಂಜಗಿ ಮತ್ತು...

ವಿಜಯಪುರ | ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ; ಆತಂಕದಲ್ಲಿ ಜನ

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಜಿಲ್ಲೆಯ ಜನರಲ್ಲಿ ಮತ್ತೆ ಆತಂಕ...

ಬೆಂಗಳೂರು | ಎರಡಂತಸ್ತಿನ ಕಟ್ಟಡ ಜತೆಗೆ ಧರೆಗುರುಳಿದ ಮೊಬೈಲ್ ಟವರ್

ಜೆಸಿಬಿ ಮೂಲಕ ಹಳೆ ಕಟ್ಟಡ ತೆರುವು ಮಾಡುತ್ತಿದ್ದ ವೇಳೆ ಪಕ್ಕದ ಕಟ್ಟಡದ...