ಆಶಾ ಕಾರ್ಯಕರ್ತೆಯರಿಗೆ ಗ್ಯಾರಂಟಿ ನೀಡಿದ ಸಿಎಂ; ಮುಷ್ಕರ ಹಿಂಪಡೆದ ಹೋರಾಟಗಾರರು!

Date:

ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವ ಗೌರವಧನವನ್ನು 10,000 ರೂ.ಗಳಿಗೆ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಾಲ್ಕು ದಿನಗಳಿಂದ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಗಳ ಭರವಸೆ ಮೇರೆಗೆ ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ.

- Advertisement -

ಕನಿಷ್ಠ ಮಾಸಿಕ ಗೌರವಧನ 15 ಸಾವಿರ ರೂ.ಗಳಿಗೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿಗಳ ಜತೆಗೆ ಸಂಘದ ಅಧ್ಯಕ್ಷೆ ನಾಗಲಕ್ಷ್ಮಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಮಾತುಕತೆ ನಡೆಸಿದ್ದಾರೆ. ಈ ವೇಳೆ, ಸಿಎಂ ಸಿದ್ದರಾಮಯ್ಯ ಅವರು ಗೌರವಧನವನ್ನು 10 ಸಾವಿರ ರೂ.ಗಳಿಗೆ ನಿಗದಿ ಮಾಡುವುದಾಗಿ ಗ್ಯಾರಂಟಿ ಕೊಟ್ಟಿದ್ದಾರೆ. ಜತೆಗೆ, ಇನ್ಸೆಂಟಿವ್‌ ಅನ್ನು ಹೆಚ್ಚಾಗಿ ಪಡೆಯಬಹುದು ಎಂದು ಹೇಳಿದ್ದಾರೆ. ಅಲ್ಲದೆ, ಮೊಬೈಲ್ ಬಳಕೆ ಮಾಡುವುದಕ್ಕೆ ಬರದೇ ಇರುವವರ ಸಲುವಾಗಿ ಪರ್ಯಾಯ ವ್ಯವಸ್ಥೆಯನ್ನು ಹುಡುಕೋಣ, ರಜಾ ದಿನಗಳ ಬಗ್ಗೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳ ತಿಳಿಸಿದ್ದಾರೆ ಎಂದು ಸಂಘದ ಅಧ್ಯಕ್ಷೆ ನಾಗಲಕ್ಷ್ಮಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉದ್ಯೋಗ ಮಾಹಿತಿ | ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಅಂಚೆ ಇಲಾಖೆಯಿಂದ ನೇಮಕಾತಿ; ಅರ್ಜಿ ಸಲ್ಲಿಕೆಗೆ ಜ.28 ಕೊನೆಯ ದಿನ

ಇನ್ನು, ಆಶಾ ಕಾರ್ಯಕರ್ತೆಯರು ಕಳೆದ ಎಂಟು ವರ್ಷಗಳಿಂದ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಈ ಮೂರು ಪಕ್ಷಗಳು ಅಧಿಕಾರದಲ್ಲಿದ್ದ ಅವಧಿಯಲ್ಲಿ ಪ್ರತಿಭಟನೆ ನಡೆಸಿದ್ದರೂ ಅವರಿಗೆ ನ್ಯಾಯ ಸಿಕ್ಕಿರಲಿಲ್ಲ. ಈಗ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಮತ್ತೆ ಪ್ರತಿಭಟನೆ ನಡೆಸಿದ್ದ ಆಶಾ ಕಾರ್ಯಕರ್ತರಿಗೆ ಸಿಎಂ ಸಿದ್ಧರಾಮಯ್ಯ ಗ್ಯಾರಂಟಿ ನೀಡಿದ್ದು, ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಆ ಮೇರೆಗೆ ಆಶಾ ಕಾರ್ಯಕರ್ತೆಯರು ಊರುಗಳಿಗೆ ತೆರಳುವ ಸಿದ್ಧತೆಯಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...