ಗೊಂಡ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ, ಸಿಂಧುತ್ವ ನೀಡುವಲ್ಲಿ ವಿಳಂಬ ಸಲ್ಲದು: ಸಿಎಂ ಸಿದ್ದರಾಮಯ್ಯ

Date:

  • ಗೊಂಡ ಸಮುದಾಯ ಎದುರಿಸುತ್ತಿರುವ ಸಮಸ್ಯೆ ಕುರಿತು ಸಿಎಂ ಸಭೆ
  • ವಿಳಂಬವಾದರೆ ಜಿಲ್ಲಾಧಿಕಾರಿಗಳ ಮೇಲೆ ಕ್ರಮ: ಸಿಎಂ ಸಿದ್ದರಾಮಯ್ಯ

ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗೊಂಡ ಸಮುದಾಯಕ್ಕೆ ಸೇರಿರುವ ಬಗ್ಗೆ ಸಿ.ಆರ್.ಇ ಸೆಲ್ ನವರು ಪರಿಶೀಲಿಸಿ ವರದಿ ಕೊಟ್ಟ ನಂತರವೂ ವಿಳಂಬವಾದರೆ ಜಿಲ್ಲಾಧಿಕಾರಿಗಳು ಅನಗತ್ಯವಾಗಿ ವಿಳಂಬ ಮಾಡಿದ್ದಾರೆ ಎಂದು ಅಮಾನತು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗೊಂಡ ಹಾಗೂ ಕೊಡುಗು ಜಿಲ್ಲೆಯಲ್ಲಿ ಕುರುಬ ಸಮುದಾಯದವರಿಗೆ ಪರಿಶಿಷ್ಟ ಪಂಗಡ ಜಾತಿ ಪತ್ರಮಾಣ ಪತ್ರ, ಸಿಂಧುತ್ವ ಪ್ರಮಾಣ ಪತ್ರ ನೀಡುವ ಸಂಬಂಧ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಶುಕ್ರವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸುದೀರ್ಘ ಸಭೆಯಲ್ಲಿ ಗೊಂಡ ಸಮುದಾಯದವರ ಅಹವಾಲುಗಳನ್ನು ಸಮಗ್ರವಾಗಿ ಕೇಳಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

“ಸಿ.ಆರ್.ಇ ಸೆಲ್ ಇರುವುದು ಹಕ್ಕುಗಳ ರಕ್ಷಣೆಗಾಗಿ ಹಾಗೂ ಪ್ರಕರಣಗಳ ವಿಚಾರಣೆಗಾಗಿ. ಸಿಆರ್ ಇ ಸೆಲ್ ವಿಚಾರಣೆ ಮಾಡಿ ನೀಡಿದ ವರದಿಯನ್ನು ಅಂಗೀಕರಿಸಬೇಕು. ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗೊಂಡ ಎನ್ನುವ ಸಮುದಾಯ ಎಸ್.ಟಿ ಗೆ ಸೇರಿದೆ. ಶಾಲಾ ದಾಖಲಾತಿ, ಪೋಷಕರ ಇತಿಹಾಸವನ್ನು ಪರಿಶೀಲಿಸಿ ಪ್ರಮಾಣ ಪತ್ರ ನೀಡಬಹುದು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೂರುಗಳಿದ್ದರೆ ತನಿಖೆ ಮಾಡಿ

“ಪ್ರಮಾಣಪತ್ರ ನೀಡಲು ಅನಗತ್ಯವಾಗಿ ವಿಳಂಬ ಮಾಡಬಾರದು. ದೂರುಗಳು ಇದ್ದರೆ ತನಿಖೆ ಮಾಡಿಸಬೇಕು. ದೂರುಗಳು ಇಲ್ಲದೆ ಹೋದರೆ ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ಕೈಗೊಳ್ಳುವಂತಿಲ್ಲ. ಸಿ.ಆರ್.ಇ ಸೆಲ್ ನವರು ತನಿಖೆ ಮಾಡಿದ ವರದಿ ನೀಡಿದ ಕೂಡಲೇ ಅಂಗೀಕರಿಸಿ, ಸಂಬಂಧಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಇತ್ಯರ್ಥಗೊಳಿಸಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ತ್ರೀಯರನ್ನು ಅರಿಶಿಣ, ಕುಂಕುಮ, ಬಳೆಯೊಳಗೆ ಬಂಧಿಸಿದ್ದು ಸಾಕು; ಘನತೆಯ ಬದುಕು ಬೇಕು

ಅನಗತ್ಯವಾಗಿ ವಿಳಂಬ ಸಲ್ಲದು

“ಕೊಡಗು ಜಿಲ್ಲೆಯ ಕುರುಬ ಸಮುದಾಯದವರು ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿರುತ್ತಾರೆ. ಅನಗತ್ಯವಾಗಿ ವಿಳಂಬ ಮಾಡದೇ ತ್ವರಿತವಾಗಿ ಜಾತಿ ಪ್ರಮಾಣ ಪತ್ರಗಳನ್ನು ನೀಡಬೇಕು. ಜಾತಿ ಪ್ರಮಾಣ ಪತ್ರದ ಆಧಾರದ ಮೇಲೆ ವಿದ್ಯಾರ್ಥಿವೇತನಗಳನ್ನು ನೀಡಬಹುದು” ಎಂದು ಹೇಳಿದರು.

ಕಂದಾಯ ಸಚಿವ ಕೃಷ್ಣಭೈರೇಗೌಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವಜನಸೇವಾ ಹಾಗೂ ಕ್ರೀಡಾ ಸಚಿವ ಬಿ.ನಾಗೇಂದ್ರ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಲಬುರಗಿ, ಬೀದರ್, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಬಿ. ಕಲ್ಲೇಶ್, ಗೊಂಡ ಹಾಗೂ ಕುರುಬ ಸಮಾಜದ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 20 ಕ್ಷೇತ್ರ ಗೆಲ್ಲುತ್ತೇವೆ; ಯಾವ ಅನುಮಾನವೂ ಇಲ್ಲ: ಡಿ ಕೆ ಶಿವಕುಮಾರ್‌ ವಿಶ್ವಾಸ

ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್...

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ...

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ...