ವರುಣಾ ಕ್ಷೇತ್ರದ ತಾಯೂರಿನಲ್ಲಿ 501.81 ಕೋಟಿ
ವಿವಿಧ ಕಾಮಗಾರಿ ಕಾರ್ಯಕ್ರಮಗಳ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ಬಿಜೆಪಿ, ಜೆಡಿಎಸ್ ಷಡ್ಯಂತ್ರಕ್ಕೆ ಹೆದರಲ್ಲ.ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.
ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ ಆಗಿದ್ದೇನೆ. ವರುಣಾ ನಮ್ಮ ಪಕ್ಷದ ಭದ್ರಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸಿದರು.
ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಕೆಲಸ ಮಾಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲಾ ವರುಣ ಕ್ಷೇತ್ರ ಮಾತ್ರವಲ್ಲದೆ ರಾಜ್ಯದ ಎಲ್ಲ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಹತ್ತು ಹಲವು ಭಾಗ್ಯಗಳನ್ನು ಕೊಡುವ ಜೊತೆಗೆ ಹಲವು ನಿಗಮಗಳ ಸಾಲ ಮನ್ನ ಮಾಡಿರುವುದಾಗಿ ಹೇಳಿದರು.
ಅಂಬೇಡ್ಕರ್ ಅವರ ಆಶಯದಂತೆ ಬಡವರಿಗೆ ಆರ್ಥಿಕ ಶಕ್ತಿ ಕೊಡುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದು, ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ, ಮಧ್ಯಮ ವರ್ಗದವರ ಬದುಕಿಗೆ ಆಸರೆ ಆಗುವ ಐದೂ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ ಎಂದು ಹೇಳಿದರು.
ಸಚಿವರಾದ ಬೋಸರಾಜು, ಡಾ ಹೆಚ್ ಸಿ ಮಹದೇವಪ್ಪ,ಕೆ ವೆಂಕಟೇಶ್,ಶಾಸಕರುಗಳಾದ ರವಿಶಂಕರ್,ಯತೀಂದ್ರ ಸಿದ್ದರಾಮಯ್ಯ,ಪರಿಷತ್ ಸದಸ್ಯ ತಿಮ್ಮಯ್ಯ ಸೇರಿದಂತೆ ಪ್ರಮುಖರು ಇದ್ದರು.
