ಮೈಸೂರು | ವರುಣಾ ಕ್ಷೇತ್ರದ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Date:

ವರುಣಾ ಕ್ಷೇತ್ರದ ತಾಯೂರಿನಲ್ಲಿ 501.81 ಕೋಟಿ
ವಿವಿಧ ಕಾಮಗಾರಿ ಕಾರ್ಯಕ್ರಮಗಳ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

- Advertisement -

ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ಬಿಜೆಪಿ, ಜೆಡಿಎಸ್ ಷಡ್ಯಂತ್ರಕ್ಕೆ ಹೆದರಲ್ಲ.ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ನಮ್ಮ ಪಕ್ಷದ ಭದ್ರಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸಿದರು.

ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಕೆಲಸ ಮಾಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲಾ ವರುಣ ಕ್ಷೇತ್ರ ಮಾತ್ರವಲ್ಲದೆ ರಾಜ್ಯದ ಎಲ್ಲ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಹತ್ತು ಹಲವು ಭಾಗ್ಯಗಳನ್ನು ಕೊಡುವ ಜೊತೆಗೆ ಹಲವು ನಿಗಮಗಳ ಸಾಲ ಮನ್ನ ಮಾಡಿರುವುದಾಗಿ ಹೇಳಿದರು.

ಅಂಬೇಡ್ಕರ್ ಅವರ ಆಶಯದಂತೆ ಬಡವರಿಗೆ ಆರ್ಥಿಕ‌ ಶಕ್ತಿ ಕೊಡುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದು, ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ, ಮಧ್ಯಮ ವರ್ಗದವರ ಬದುಕಿಗೆ ಆಸರೆ ಆಗುವ ಐದೂ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ ಎಂದು ಹೇಳಿದರು.

ಸಚಿವರಾದ ಬೋಸರಾಜು, ಡಾ ಹೆಚ್ ಸಿ ಮಹದೇವಪ್ಪ,ಕೆ ವೆಂಕಟೇಶ್,ಶಾಸಕರುಗಳಾದ ರವಿಶಂಕರ್,ಯತೀಂದ್ರ ಸಿದ್ದರಾಮಯ್ಯ,ಪರಿಷತ್ ಸದಸ್ಯ ತಿಮ್ಮಯ್ಯ ಸೇರಿದಂತೆ ಪ್ರಮುಖರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...