ಜಯಪ್ರಕಾಶ್ ಹೆಗ್ಡೆ ಮನವಿಗೆ ಸಿಎಂ ಸ್ಪಂದನ: ಕುಂದಾಪ್ರ ಭಾಷೆ ಅಭಿವೃದ್ಧಿಗೆ ₹50 ಲಕ್ಷ ಬಿಡುಗಡೆ

Date:

Advertisements

ಜಯಪ್ರಕಾಶ್ ಹೆಗ್ಡೆ ಮನವಿಗೆ ಸ್ಪಂದಿಸಿರುವ ಸರ್ಕಾರವು, ಕುಂದಾಪ್ರ ಭಾಷಾ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ ನೀಡಿ ಆದೇಶ ಹೊರಡಿಸಿದೆ‌.

ಭಾಷಾ ಅಧ್ಯಯನ ಪೀಠದ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾರ್ಯಚಟುವಟಿಕೆಗಳನ್ನು ವಿಸ್ತರಣೆ ಮಾಡಲು ಅಗತ್ಯವಿರುವ ಅನುದಾನ ನೀಡುವಂತೆ ಮಂಗಳೂರು ವಿಶ್ವವಿದ್ಯಾಲಯ ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಈ ವಿಚಾರ ಸರ್ಕಾರ ಮಟ್ಟದಲ್ಲಿ ಬಾಕಿ ಉಳಿದಿತ್ತು.

ಕಳೆದ ಫೆಬ್ರವರಿ ತಿಂಗಳಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ, ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ಅವರು, ಈ‌ ವಿಚಾರದ ಕುರಿತು ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

Advertisements

ಉಡುಪಿ ಜಿಲ್ಲಾ ವ್ಯಾಪ್ತಿಯ ಕುಂದಾಪುರ, ಬೈಂದೂರು, ಬ್ರಹ್ಮಾವರ ತಾಲೂಕುಗಳಲ್ಲಿ ಪೂರ್ಣವಾಗಿ, ಹೆಬ್ರಿ, ಕಾಪು ಉಡುಪಿಯೂ ಸೇರಿದಂತೆ ಕೆಲವು ಭಾಗಗಳಲ್ಲಿ ಮಾತೃ ಭಾಷೆಯಾಗಿ ಬಳಸುತ್ತಿರುವ ಕುಂದಾಪ್ರ ಭಾಷೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಕುಂದಗನ್ನಡ ಭಾಷೆಯ ಅಧ್ಯಯನ‌ ಪೀಠದ ರಚನಾತ್ಮಕ ಕಾರ್ಯಗಳಿಗಾಗಿ ಕೊಡಲೇ ಒಂದೂವರೆ ಕೋಟಿ ಅನುದಾನ‌ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ನಿವೇಶನಗಳ ಹಕ್ಕು ಪತ್ರ ನಕಲಿ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಪ್ರಜಾ ಪರಿವರ್ತನಾ ವೇದಿಕೆ ಆಗ್ರಹ

ಈ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮೊದಲ ಹಂತದ 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದೆ ಹಂತ ಹಂತವಾಗಿ ಹಣ ಬಿಡುಗಡೆಯಾಗುವ ಭರವಸೆ ನೀಡಿರುವುದಾಗಿ ಜಯಪ್ರಕಾಶ ಹೆಗ್ಡೆ ಮಾಹಿತಿ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X