ಸಂಪುಟ ವಿಸ್ತರಣೆ | ಬುಧವಾರ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ-ಡಿಕೆಶಿ

Date:

  • ಸಂಪುಟ ವಿಸ್ತರಣೆ ವಿಚಾರದಲ್ಲಿ ಹಿರಿಯ ನಾಯಕರಲ್ಲಿ ಅಸಮಾಧಾನ
  • ಶುಕ್ರವಾರದ ಬಳಿಕ ಎಂಟು ಸಚಿವರಿಗೆ ಖಾತೆ ಹಂಚಿಕೆಯಾಗುವ ಸಾಧ್ಯತೆ

ಜಾತಿ ಮತ್ತು ಪ್ರದೇಶದ ಆಧಾರದ ಮೇಲೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವುದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ ಅವರಿಗೆ ಸವಾಲಾಗಿ ಪರಿಣಮಿಸಿದ್ದು, ಈ ಸಂಬಂಧ ಇಬ್ಬರೂ ಬುಧವಾರ ದೆಹಲಿಗೆ ತೆರಳಲಿದ್ದಾರೆ.

ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ಹಿರಿಯ ನಾಯಕರು ತುಸು ಅಸಮಾಧಾನಗೊಂಡಿದ್ದು, ಈಗಾಗಲೇ ಸಂಪುಟ ಸೇರಿದ ಸಚಿವರಿಗೆ ಮುಂದಿನ ಶುಕ್ರವಾರದವರೆಗೂ ಖಾತೆ ಹಂಚಿಕೆಯಾಗುವುದು ಅನುಮಾನವಾಗಿದೆ.

ಜಾತಿ ಮತ್ತು ಪ್ರದೇಶದ ಆಧಾರದ ಮೇಲೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವುದು ಕಾಂಗ್ರೆಸ್‌ ವರಿಷ್ಠರಿಗಿಂತಲೂ ಹೆಚ್ಚಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ ಅವರಿಗೆ ಸವಾಲಾಗಿ ಪರಿಣಮಿಸಿದೆ. ವಿಶೇಷವಾಗಿ ಬೆಂಗಳೂರು ಮತ್ತು ಹಳೆ ಮೈಸೂರು ಭಾಗದಿಂದ ಯಾರಿಗೆ ಸ್ಥಾನ ನೀಡಬೇಕೆಂಬ ವಿಚಾರದಲ್ಲಿ ಇವರಿಬ್ಬರ ನಡುವೆ ಒಮ್ಮತ ಮೂಡಿಲ್ಲ ಎಂದು ಹೇಳಲಾಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉತ್ತರ ಕರ್ನಾಟಕ ಭಾಗಕ್ಕೆ ಮತ್ತು ಲಿಂಗಾಯತರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂಬ ಕೂಗು ಬಲವಾಗಿದೆ. 8 ಜನರಲ್ಲಿ ಎಂ ಬಿ ಪಾಟೀಲ್‌, ಪ್ರಿಯಾಂಕ್‌ ಖರ್ಗೆ ಹಾಗೂ ಸತೀಶ್‌ ಜಾರಕಿಹೊಳಿ ಮಾತ್ರ ಉತ್ತರ ಕರ್ನಾಟಕ ಪ್ರತಿನಿಧಿಸುತ್ತಿದ್ದಾರೆ. ಕರಾವಳಿ ಹಾಗೂ ಮಧ್ಯ ಕರ್ನಾಟಕಕ್ಕೆ ಇನ್ನೂ ಪ್ರಾತಿನಿಧ್ಯ ಸಿಕ್ಕಿಲ್ಲ.

ಈ ಸುದ್ದಿ ಓದಿದ್ದೀರಾ? 4 ಲಕ್ಷ ಕೋಟಿ ಕೊಟ್ಟರೂ 5 ಸಾವಿರ ಕೋಟಿ ಕೊಡದ ಕೇಂದ್ರ; ಮೋದಿ ವಿರುದ್ಧ ಸಿಎಂ ಕಿಡಿ

ಬೆಂಗಳೂರಿನಿಂದ ಮೂರು ಜನರಿಗೆ ಅವಕಾಶ ಕಲ್ಪಿಸಲಾಗಿದ್ದು, ಇನ್ನೂ ಇಬ್ಬರು ಸೇರ್ಪಡೆಯಾಗುವ ನಿರೀಕ್ಷೆ ಇದೆ. ಅದೇ ರೀತಿ ಮಂಡ್ಯ, ಮೈಸೂರು, ಚಾಮರಾಜನಗರದಿಂದ ಯಾರಿಗೆ ಪ್ರಾತಿನಿಧ್ಯ ಸಿಗಬಹುದೆಂಬ ಕುತೂಹಲ ಉಂಟಾಗಿದೆ.

ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ ಬುಧವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. ಶುಕ್ರವಾರದ ಹೊತ್ತಿಗೆ ಇನ್ನಷ್ಟು ಜನರು ಸಂಪುಟ ಸೇರ್ಪಡೆಯಾಗಬಹುದು. ಅದೇ ದಿನ ಎಂಟು ಸಚಿವರಿಗೆ ಖಾತೆ ಹಂಚಿಕೆಯಾಗಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೊಲೆ ಪ್ರಕರಣ: ನಟ ದರ್ಶನ್ ವಿರುದ್ಧ ಪ್ರತಿಭಟನೆ

ನಟ ದರ್ಶನ್‌ ಮತ್ತು ಆತನ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಸಾವಿಗೆ ನ್ಯಾಯ...

ಉಡುಪಿ‌-ಕಾಸರಗೋಡು 400 KV ವಿದ್ಯುತ್ ಲೈನ್ ಅಳವಡಿಕೆಗೆ ಗ್ರಾಮಸ್ಥರ ವಿರೋಧ

ಉಡುಪಿ ಮತ್ತು ಕಾಸರಗೋಡು ನಡುವೆ 400 KV ವಿದ್ಯುತ್‌ ಲೈನ್ ಅಳವಡಿಕೆ...

ದಾವಣಗೆರೆ | ಪಾರ್ಕ್‌ನಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಪಾಲಿಕೆ ಚಿಂತನೆ; ನಿವಾಸಿಗಳ ಪ್ರತಿಭಟನೆ

ದಾವಣಗೆರೆ ಮಹಾನಗರ ಪಾಲಿಕೆಯು 41ನೇ ವಾರ್ಡ್‌ನಲ್ಲಿರುವ ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ...

ನೀಟ್ ಹಗರಣ ಖಂಡಿಸಿ ಎಐಡಿಎಸ್‌ಓ ಪ್ರತಿಭಟನೆ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿ-ಯುವಜನರು...