ಆಸಿಡ್ ದಾಳಿಗೆ ಒಳಗಾದ ಯುವತಿಗೆ ಉದ್ಯೋಗ ನೀಡಿದ ಸಿಎಂ ಸಿದ್ದರಾಮಯ್ಯ

Date:

  • ತಂದೆ, ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಸಿಎಂಗೆ ಮನವಿ
  • ಸಂತ್ರಸ್ತೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ

ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ತೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

ಶುಕ್ರವಾರ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು ಸಂತ್ರಸ್ತೆ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ತೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. “ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ” ಎಂದು ಮುಖ್ಯಮಂತ್ರಿ ಎದುರು ಅಳಲು ತೋಡಿಕೊಂಡರು. ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಗೃಹಲಕ್ಷ್ಮಿ ಅರ್ಜಿಗೆ ಯಾರೂ ಹಣ ಕೊಡಬೇಡಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸ್ವಾಮಿ ವೇಷದಲ್ಲಿ ಆರೋಪಿ, ಭಕ್ತರ ವೇಷದಲ್ಲಿ ಪೊಲೀಸರು

ಆಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು, ಆರೋಪಿ ಸ್ವಾಮಿ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದರು. ಬಳಿಕ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ್ದರು. ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...