ಇಲಾಖೆಗಳಲ್ಲಿನ ಬೇಕಾಬಿಟ್ಟಿ ವರ್ಗಾವಣೆಗೆ ಕಡಿವಾಣ ಹಾಕಿದ ಸಿಎಂ ಸಿದ್ದರಾಮಯ್ಯ

Date:

  • ವರ್ಗಾವಣೆ ಮಾಡಬೇಕಾದರೆ ಮುಖ್ಯಮಂತ್ರಿಯ ಅನುಮೋದನೆ ಕಡ್ಡಾಯ
  • ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸುತ್ತೋಲೆ

ಸಾರ್ವತ್ರಿಕ ವರ್ಗಾವಣೆ ಅವಧಿ ಜುಲೈ 3ಕ್ಕೆ ಮುಗಿದಿದ್ದು, ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡಬೇಕಾದರೆ ಮುಖ್ಯಮಂತ್ರಿಯ ಅನುಮೋದನೆ ಕಡ್ಡಾಯ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ ಜೆ ಡಿ ಮಧುಚಂದ್ರ ತೇಜಸ್ವಿ ಈ ಸುತ್ತೋಲೆ ಹೊರಡಿಸಿದ್ದು, “ಮುಖ್ಯಮಂತ್ರಿ ಅನುಮೋದನೆ ಪಡೆಯದೇ ನೌಕರರ ವರ್ಗಾವಣೆ ಮಾಡಿದರೆ ಅದಕ್ಕೆ ಆಯಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು” ಎಚ್ಚರಿಸಲಾಗಿದೆ.

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣಾ ಅವಧಿ ಮುಗಿದಿದ್ದರೂ ಕೆಲ ಇಲಾಖೆಗಳು ನಿಗದಿತ ಶೇ.6ಕ್ಕಿಂತ ಹೆಚ್ಚು ವರ್ಗಾವಣೆ ಮಾಡಿದ್ದು, ವರ್ಗಾವಣೋತ್ತರ ಅನುಮೋದನೆಗೆ ಕಡತ ಮಂಡಿಸಲಾಗಿದೆ. ಇದು ನಿಯಮ ಬಾಹಿರ, ಆಡಳಿತಾತ್ಮಕ ಕಾರಣಗಳಿಗಾಗಿ ವರ್ಗಾವಣೆ ಅನಿವಾರ್ಯವಾದರೆ, ಸಕಾರಣಗಳನ್ನು ನೀಡಿ ಮುಖ್ಯಮಂತ್ರಿ ಅನುಮತಿ ಪಡೆಯಬೇಕು ಎಂದು ಸೂಚಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಯಾವುದೇ ರೀತಿಯ ಅವಧಿಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಅವಧಿ ವಿಸ್ತರಿಸಿ ಮಾಡುವ ವರ್ಗಾವಣೆ ಮಾಡುವ ಮುನ್ನ ಸಚಿವಾಲಯದ ಆಡಳಿತ ಇಲಾಖೆಗಳು ಮುಖ್ಯಮಂತ್ರಿಯ ಅನುಮೋದನೆಯನ್ನು ತಪ್ಪದೇ ಪಡೆಯಬೇಕು” ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲಿತ  ಪ್ರಾಧ್ಯಾಪಕಿಯ ಮೇಲೆ ಸಹೋದ್ಯೋಗಿಗಳು- ವಿದ್ಯಾರ್ಥಿಗಳಿಂದ ಹಲ್ಲೆ; ಎತ್ತ ಸಾಗುತ್ತಿದೆ ಭಾರತ?

“ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ ಯಾವುದೇ ಪ್ರಸಂಗದಲ್ಲಿಯೂ ಮೊದಲು ವರ್ಗಾವಣೆ ಮಾಡಿ ನಂತರ ಮುಖ್ಯಮಂತ್ರಿಯವರ ಘಟನೋತ್ತರ ಅನುಮೋದನೆ ಪಡೆಯಬೇಕು. ಈಗಾಗಲೇ 2023ರ ಮೇ 30ರಿಂದ ಜೂನ್ 30ರವರೆಗೆ 2023-24ನೇ ಸಾಲಿಗೆ ಗ್ರೂಪ್ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟನ್ನು ಮೀರದಂತೆ ಜೂನ್ 1ರಿಂದ ಜುಲೈ 3ರ ವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಇಲಾಖಾ ಸಚಿವರಿಗೆ ಅಧಿಕಾರ ನೀಡಿ ಆದೇಶಿಸಲಾಗಿತ್ತು. ಆದರೆ, ನಿಗದಿತ ವರ್ಗಾವಣೆ ನಂತರವೂ ಇಲಾಖೆ ಹಂತದಲ್ಲಿ ವರ್ಗಾವಣೆಗಳನ್ನು ಮಾಡಿದರೆ ನಂತರ ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವಗಳನ್ನು ಮುಖ್ಯಮಂತ್ರಿಗೆ ಸಲ್ಲಿಸಬೇಕು. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ” ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಯುವ ನಾಯಕನ ಕಾಮಕೃತ್ಯದ ಪೆನ್‌ಡ್ರೈವ್ ಆರೋಪ; ಮೌನ ಮುರಿಯದ ಮಾಜಿ ಪ್ರಧಾನಿ

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ...

ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ...

‌ಶಿವಮೊಗ್ಗ | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಯೋಜನೆ ಜಾರಿ: ಗೀತಾ ಶಿವರಾಜ್‌ಕುಮಾರ್

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ...

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....