ತೆರಿಗೆ ವಂಚನೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

Advertisements
  • ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ
  • ತೆರಿಗೆ ಸಂಗ್ರಹ ದರ ದೇಶದಲ್ಲಿಯೇ ಹೆಚ್ಚಾಗಿರುವುದಕ್ಕೆ ಸಿಎಂ ಮೆಚ್ಚುಗೆ

ರಾಜ್ಯದಲ್ಲಿ ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, “ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.19.2 ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚಿದೆ” ಎಂದು ಮೆಚ್ವುಗೆ ವ್ಯಕ್ತಪಡಿಸಿದರು.

“ಇಲಾಖೆಯು enforcement ಅನ್ನು ಇನ್ನಷ್ಟು ತೀವ್ರವಾಗಿ ನಡೆಸುವ ಮೂಲಕ ತೆರಿಗೆ ವಂಚನೆ ತಡೆಗಟ್ಟುವ ಕಡೆಗೆ ಹೆಚ್ಚು ಆಸಕ್ತಿ ಕೊಡಬೇಕು. ಬೆಳವಣಿಗೆ ದರವು ಶೇ. 19.2 ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚು. ದೇಶದ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.15 ರಷ್ಟು ಮಾತ್ರ ಇದೆ. ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು ಶೇ. 9.4 ರಷ್ಟಿದೆ. ಕಳೆದ ಬಾರಿಗಿಂತ ಈ ಬಾರಿ ರಾಜ್ಯದ ಪಾಲು ಹೆಚ್ಚಾಗಿದೆ” ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು.

Advertisements

“ಗುರಿಗಿಂತ ಹೆಚ್ಚಿನ ಸಾಧನೆಯಾಗಬೇಕು. ಹಿಂದೆ ಉಳಿದವರು ಎಲ್ಲ ಪ್ರಯತ್ನ ಮಾಡಬೇಕು. ಜಾಗೃತ ದಳದವರು ಸಹಕರಿಸಬೇಕು. ಎರಡು ತಿಂಗಳ ನಂತರ ಮತ್ತೆ ಪ್ರಗತಿ ಪರಿಶೀಲಿಸಲಾಗುವುದು. ಆ ವೇಳೆಗೆ ಇನ್ನಷ್ಟು ಪ್ರಗತಿಯ ವರದಿ ನೀಡಿ. ಮುಂದಿನ ಸಭೆ ವೇಳೆಗೆ ಒಟ್ಟಾರೆ ಪರಿಸ್ಥಿತಿ ಈಗಿರುವುದಕ್ಕಿಂತ ಹೆಚ್ವು ಆಶಾದಾಯವಾಗಿರುವಂತೆ ಕ್ರಮ ವಹಿಸಿ” ಎಂದರು.

ಈ ಸುದ್ದಿ ಓದಿದ್ದೀರಾ? ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ; ಕೇಂದ್ರ ಜಲಶಕ್ತಿ ಸಚಿವರಿಗೆ ಪತ್ರ ಬರೆದು ಸಿಎಂ ಮನವರಿಕೆ

“ತೆರಿಗೆ ಕಳ್ಳತನ ತಡೆಯುವುದಕ್ಕಾಗಿ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ನಿಮ್ಮ ಪ್ರಯತ್ನದಿಂದ ರಾಜ್ಯಕ್ಕೆ ಹೆಚ್ಚು ತೆರಿಗೆ ಬರಲು ಸಾಧ್ಯ. ಅನೇಕ ಭಾಗಗಳಲ್ಲಿ ಅನೇಕ ಉತ್ಪನ್ನಗಳಲ್ಲಿ ತೆರಿಗೆ ವಂಚನೆ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಹೆಚ್ಚಿನ ಗಮನಹರಿಸಿ ತೆರಿಗೆ ಸಂಗ್ರಹಿಸಬೇಕು. ಹೆಚ್ಚು ತೆರಿಗೆ ಸಂಗ್ರಹ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಹೆಚ್ಚು ಅನುಕೂಲವಾಗುತ್ತದೆ. ಸಾಮೂಹಿಕ ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು” ಎಂದು ಸೂಚಿಸಿದರು.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್‌ ಹಾಗೂ ಡಾ. ಎಂ.ಟಿ. ರೇಜು, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಶಿಖಾ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಮತ್ತು ನಸೀರ್‌ ಅಹ್ಮದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X