ಸುಳ್ಳು ಸುದ್ದಿಗೆ, ವದಂತಿಗೆ ಕಡಿವಾಣ ಹಾಕಲು ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

Date:

Advertisements
  • ಗೃಹ ಸಚಿವ ಜಿ.ಪರಮೇಶ್ವರ್ ಜತೆಗೆ ಈ ಬಗ್ಗೆ ವಿವರವಾಗಿ ಚರ್ಚೆ
  • ಬರುವ ಲೋಕಸಭಾ ಚುನಾವಣೆಗೆ ಸುಳ್ಳು ಸುದ್ದಿ ಸೃಷ್ಟಿ ಸಾಧ್ಯತೆ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ವದಂತಿಗಳ ಹಾವಳಿ ಮಿತಿ ಮೀರಿದೆ. ಈ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಮಂಗಳವಾರ ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದ್ದಾರೆ.

ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು.. ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೆ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ತದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಾಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಶೀಘ್ರದಲ್ಲೇ ಟ್ವಿಟರ್‌ನಲ್ಲಿ ಯೂಟ್ಯೂಬ್‌, ಇನ್ಸ್ಟಾದಂತೆ ಹಲವು ಸೇವೆ ಲಭ್ಯ

ಕಮಿಷನರೇಟ್/ ಪ್ರಧಾನ ಕಚೇರಿಯಲ್ಲಿ ನಲ್ಲಿ ಫ್ಯಾಕ್ಟ್ ಚೆಕ್

ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್ ಚೆಕ್ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ಧವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X