ಗುಂಡ್ಲುಪೇಟೆ | 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ₹475 ಕೋಟಿ ವೆಚ್ಚದಲ್ಲಿ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಒಟ್ಟು ₹523 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಿದರು.

- Advertisement -

ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಾಲೂಕು ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು. ನಂಜನಗೂಡು ತಾಲೂಕಿನ ಗಾಂಧಿ ಗ್ರಾಮದ ಬಳಿಯ ಕಬಿನಿ ನದಿಯಿಂದ ನೀರನ್ನು ಎತ್ತಿ ಗುಂಡ್ಲುಪೇಟೆ ತಾಲೂಕಿನ ಕೆರೆಗಳಿಗೆ ಹರಿಸುವ ಯೋಜನೆಯಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಸರ್ಕಾರದ ಮೂರು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳು ಸಮಾನವಾಗಿ ಸಾಗುತ್ತಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ₹1.60 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಬಡವರು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.

ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಸಮರ್ಪಕ ಅನುದಾನ ನೀಡಿದ್ದು, ಗ್ಯಾರಂಟಿ ಯೋಜನೆಗಳು ಜನರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿವೆ. ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಿಂದ ಅಂತರ್ಜಲ ವೃದ್ಧಿಯಾಗಿ ರೈತರಿಗೆ ಅನುಕೂಲವಾಗಲಿದೆ ಎಂದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಕೆರೆಗಳಿಗೆ ನೀರು ತುಂಬಿಸುವ ಯೋಜನೆ ರಾಜ್ಯದ ಎಲ್ಲಾ ತಾಲೂಕುಗಳಿಗೆ ವಿಸ್ತರಿಸಬೇಕು ಎಂದು ಅಭಿಪ್ರಾಯಪಟ್ಟರು. ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೂ ಹೆಚ್ಚಿನ ಅವಕಾಶಗಳಿವೆ ಎಂದು ತಿಳಿಸಿದರು.

ಲೋಕಸಭಾ ಸದಸ್ಯ ಸುನೀಲ್ ಬೋಸ್ ಮಾತನಾಡಿ, ಯೋಜನೆಯಿಂದ ರೈತರಿಗೆ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಹೇಳಿದರು.

ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್ ಅವರು, ತಾಲೂಕಿನ ಇತಿಹಾಸದಲ್ಲೇ ಇದು ಮಹತ್ವದ ಕಾರ್ಯಕ್ರಮವಾಗಿದ್ದು, 100ಕ್ಕೂ ಹೆಚ್ಚು ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ ಎಂದು ಹೇಳಿದರು. ಬೊಮ್ಮನಹಳ್ಳಿಯಲ್ಲಿ ಅಂಬೇಡ್ಕರ್ ವಸತಿ ಶಾಲೆಯ ನೂತನ ಕಟ್ಟಡ ಆರಂಭವಾಗಿದ್ದು, ಪಟ್ಟಣದ ಒಳಚರಂಡಿ ಅಭಿವೃದ್ಧಿಗೂ ಅನುದಾನ ಮಂಜೂರಾಗಿದೆ ಎಂದರು.

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಆರಂಭವಾಗಿದ್ದು, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಸಂಚಾರಿ ಠಾಣೆ ಅಗತ್ಯವಿದೆ ಎಂದು ಶಾಸಕರು ಒತ್ತಿಹೇಳಿದರು.

ಇದೇ ವೇಳೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ 25 ಮಂದಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರ ಬಂಧನ

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಎಂಎಸ್ಐಎಲ್. ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ್, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಮಾಜಿ ಸಚಿವೆ ಗೀತಾ ಮಹದೇವಪ್ರಸಾದ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...