ಕಾಂಗ್ರೆಸ್‌ ಸಿದ್ಧಾಂತ ಒಪ್ಪಿಕೊಂಡು ಯಾರು ಬರುತ್ತಾರೋ ಬರಲಿ: ಮುಕ್ತ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ

Date:

  • ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ? ಪೂರ್ತಿ ದಿವಾಳಿಯಾಗಿದೆ: ಸಿದ್ದರಾಮಯ್ಯ
  • ಈವರೆಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ನಾಯಕರು ಮರಳಿ ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ನಮ್ಮ ಪಕ್ಷ ಬಿಟ್ಟವರು ಮಾತ್ರವಲ್ಲ, ಕಾಂಗ್ರೆಸ್‌ ಸಿದ್ಧಾಂತ ಒಪ್ಪಿಕೊಂಡು ಬರುವ ಎಲ್ಲರಿಗೂ ನಾನು ಸ್ವಾಗತಿಸುತ್ತೇನೆ” ಎಂದು ಮುಕ್ತ ಆಹ್ವಾನ ನೀಡಿದರು.

- Advertisement -

“ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ? ಪೂರ್ತಿ ದಿವಾಳಿಯಾಗಿದೆ. ಈವರೆಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ. ಹೊಸ ಸರ್ಕಾರ ರಚನೆಯಾಗಿ 100 ದಿನ ಕಳೆಯಿತು. ಆದರೂ ವಿರೋಧ ಪಕ್ಷದ ನಾಯಕ ಇಲ್ಲ ಅಂದರೆ ಯೋಚನೆ ಮಾಡಿ. ರಾಜ್ಯದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ರಾಜ್ಯದಲ್ಲಿ ಬಿಜೆಪಿ ಇನ್ನೂ ದಿವಾಳಿ ಆಗಲಿದೆ” ಎಂದು ಭವಿಷ್ಯ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಪ್ರಧಾನಿ ನರೇಂದ್ರ ಮೋದಿ ಅವರೇ ಭೇಟಿಗೆ ಬರಬೇಡಿ ಎಂದಿದ್ದರು. ಆ ಪ್ರಕಾರ ನಾವು ನಡೆದುಕೊಂಡಿದ್ದೇವೆ. ಬಿಜೆಪಿಯವರಿಗೆ ಕೆಲಸವಿಲ್ಲ, ಸುಕಾಸುಮ್ಮನೇ ಆರೋಪಗಳನ್ನು ಮಾಡುತ್ತಾರೆ” ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

“ಮೂರು ದಿನ ಮೈಸೂರು ಪ್ರವಾಸ ಕೈಕೊಂಡಿರುವೆ. ಕೆಡಿಪಿ ಸಭೆ ಇದೆ. ನಾಳೆ ಸುತ್ತೂರಿನಲ್ಲಿ ಒಂದು ಕಾರ್ಯಕ್ರಮವಿದೆ. ಹಾಗೆಯೇ ನಾಲ್ಕನೇ ಗ್ಯಾರಂಟಿ ‘ಗೃಹಲಕ್ಷ್ಮಿ’ ಅನುಷ್ಠಾನ ಕಾರ್ಯಕ್ರಮ ಮೈಸೂರಿನಲ್ಲಿದೆ. ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಾನು ಅಧ್ಯಕ್ಷತೆ ವಹಿಸಿಕೊಳ್ಳುವೆ. ರಾಹುಲ್‌ ಗಾಂಧಿ ಉಪಸ್ಥಿತಿ ಇರಲಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳ ವಿಲೀನ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ: ಸಚಿವ ಮಧು ಬಂಗಾರಪ್ಪ

“ದೇಶದಲ್ಲೇ ದೊಡ್ಡ ಕಾರ್ಯಕ್ರಮ ಗೃಹಲಕ್ಷ್ಮಿ. ಸುಮಾರು 32 ಸಾವಿರ ಕೋಟಿ ರೂ. ಒಂದು ವರ್ಷಕ್ಕೆ ಖರ್ಚು ಆಗಲಿದೆ. ಈ ವರ್ಷ 18 ಸಾವಿರ ಕೋಟಿ ರೂ. ಖರ್ಚು ಆಗುತ್ತಿದೆ. 1.33 ಕೋಟಿ ಕುಟುಂಬದ ಯಜಮಾನಿಗೆ 2000 ರೂ. ಕೊಡುತ್ತಿದ್ದೇವೆ. ಐದು ಕಾರ್ಯಕ್ರಮ ಜಾರಿಯಾದ ಮೇಲೆ 4-5 ಸಾವಿರ ರೂ. ಒಂದು ಕುಟುಂಬಕ್ಕೆ ಲಾಭವಾಗಲಿದೆ. ಅವರ ಕೈಯಲ್ಲಿ ದುಡ್ಡು ಆಡುವುದರಿಂದ ಆರ್ಥಿಕ ಚಟುವಟಿಕೆ ಜಾಸ್ತಿ ಆಗಲಿದೆ. ಜೊತೆಗೆ ಉದ್ಯೋಗ ಸೃಷ್ಟಿಯಾಗಲಿದೆ” ಎಂದರು.

“ರಾಜ್ಯ ಸರ್ಕಾರದ ಕಾರ್ಯಕ್ರಮವಾಗಿ ಗೃಹಲಕ್ಷ್ಮಿ ಜಾರಿ ಅನುಷ್ಠಾನ ಮೈಸೂರಿನಲ್ಲಿ ನಡೆಯುತ್ತಿದೆ. ನಂತರ ಎಲ್ಲ ಜಿಲ್ಲೆಗಳಲ್ಲೂ ಕಾರ್ಯಕ್ರಮ ನಡೆಯಲಿದೆ. ಬರ ವಿಚಾರವಾಗಿ ಕ್ಯಾಬಿನೆಟ್‌ ಸಬ್‌ ಕಮಿಟಿ ಇದೆ. ಅದರ ವರದಿ ನಂತರ ಬರಗಾಲ ಎಂದು ಘೋಷಿಸುತ್ತೇವೆ. ನಂತರ ಕೇಂದ್ರ ಸರ್ಕಾರದ ಅಧಿಕಾರಿಗಳು ಬಂದು ವೀಕ್ಷಣೆ ಮಾಡುತ್ತಾರೆ. ಬರಗಾಲ ಘೋಷಣೆಯಾದ ಮೇಲೆ ಜನರಿಗೆ ಕೆಲಸ ಕೊಡಲು ಆರಂಭಿಸುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...