ನಾಳೆ ರಾಷ್ಟ್ರಪತಿ, ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡುವೆ: ಸಿಎಂ ಸಿದ್ದರಾಮಯ್ಯ

Date:

  • ಕೇಂದ್ರ ಆಹಾರ ಸಚಿವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ
  • ಕೇಂದ್ರದಿಂದ ದ್ವೇಷದ ರಾಜಕಾರಣ, ಬಡವರ ವಿರೋಧಿ ಕ್ರಮ ಸಲ್ಲದು

ಬುಧವಾರ (ಜೂ.21) ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡುತ್ತಿದ್ದು, ಮುಖ್ಯಮಂತ್ರಿಯಾದ ನಂತರ ಕೇಂದ್ರ ಸಚಿವರೊಂದಿಗೆ ಸೌಜನ್ಯದ ಭೇಟಿ ಇದಾಗಿದೆ. ಭೇಟಿ ನಂತರ ಆಹಾರ ಸಚಿವ ಕೆ ಎಚ್‌ ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಲಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಮಂಗಳವಾರ ವಿಧಾನ ಪರಿಷತ್ತಿನ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಮಪತ್ರ ಸಲ್ಲಿಸಿದ ನಂತರ‌ ಅವರು ಮಾಧ್ಯಮದವರೊಂದಿಗೆ ಮಾತನಾಡಿ, “ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಛತ್ತೀಸಗಢ ರಾಜ್ಯದೊಂದಿಗೆ ಅಕ್ಕಿ ಖರೀದಿ ಬಗ್ಗೆ ಚರ್ಚಿಸಲಾಗಿದೆ. ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಬೇಕಾಗಿದೆ. ಛತ್ತೀಸಗಢದಿಂದ ಅಕ್ಕಿ ಖರೀದಿಸಿದರೆ ಸಾಗಾಣಿಕೆಯೂ ಸೇರಿ, ಎಫ್‌ಸಿಐಗಿಂತ ದರ ಹೆಚ್ಚಾಗುತ್ತದೆ. ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಲಭ್ಯವಿಲ್ಲವೆಂದು ತಿಳಿಸಿದ್ದು, ಆಂಧ್ರಪ್ರದೇಶದೊಂದಿಗೆ ನಮ್ಮ ರಾಜ್ಯದ ಅಧಿಕಾರಿಗಳು ಚರ್ಚಿಸುತ್ತಿದ್ದಾರೆ” ಎಂದರು.

ಬಡವರ ವಿರೋಧಿ ಕ್ರಮ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಭಾರತ ಸರ್ಕಾರದ ಮೂರು ಸಂಸ್ಥೆಗಳಾದ ಎನ್‌ಸಿಎಫ್‌, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಖರೀದಿಗೆ ದರಪಟ್ಟಿ ಕರೆಯಲಾಗಿದೆ. ಅಕ್ಕಿ ಖರೀದಿ ಬಗ್ಗೆ ಎಫ್‌ಸಿಐಗೆ ಜೂನ್ 9 ರಂದು ಪತ್ರ ಬರೆಯಲಾಗಿದ್ದು, ಎಫ್‌ಸಿಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯಕ್ಕೆ ಸರಬರಾಜು ಮಾಡಲಾಗುವುದು ಎಂದು ಜೂನ್ 12 ರಂದು ತಿಳಿಸಿದ್ದರು. ಇದಾದ ನಂತರ ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯವರು ಹಸ್ತಕ್ಷೇಪ ಮಾಡಿ ಜೂನ್ 13 ರಂದು ಎಫ್‌ಸಿಐ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಪತ್ರ ಬರೆದು ರಾಜ್ಯಗಳಿಗೆ ಅಕ್ಕಿ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ನಂತರ ನಮಗೆ ಪತ್ರ ಬರೆದು ಅಕ್ಕಿ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಇದು ದ್ವೇಷದ ರಾಜಕಾರಣ, ಬಡವರ ವಿರೋಧಿ ಕ್ರಮವಲ್ಲವೇ” ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಇದೇ ಇವರ ಸಹಕಾರಿ ಒಕ್ಕೂಟ ವ್ಯವಸ್ಥೆಯೇ?

ದ್ವೇಷದ ರಾಜಕಾರಣ ಮಾಡುವ ಇವರಿಗೆ ಮಾನವೀಯತೆ ಇದೆಯೇ? ಹಣ ನೀಡಿ ಅಕ್ಕಿ ಪಡೆಯುತ್ತೇವೆ. ನಾವು ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಯಾವಾಗಲೂ ಹೇಳುತ್ತಾರೆ. ಇದೇ ಇವರ ಸಹಕಾರಿ ಒಕ್ಕೂಟ ವ್ಯವಸ್ಥೆಯೇ? ಎಂದು ಕಿಡಿ ಕಾರಿದರು.

“ಇದೊಂದು ಪ್ರಜಾಪ್ರಭುತ್ವದ ವ್ಯವಸ್ಥೆ, ಒಕ್ಕೂಟ ರಚನೆಯನ್ನು ಹೊಂದಿದ್ದೇವೆ. ಕೇಂದ್ರ ಸರ್ಕಾರ ಭತ್ತ ಬೆಳೆಯುತ್ತದೆಯೇ? ಎಲ್ಲೆಲ್ಲಿ ಭತ್ತ ಬೆಳೆಯುತ್ತಾರೋ ಅಲ್ಲಿಂದ ಅಕ್ಕಿಯನ್ನು ಪಡೆಯುತ್ತಾರೆ. ಮಾತೆತ್ತಿದರೆ ಆಹಾರ ಭದ್ರತಾ ಕಾಯ್ದೆ ಎನ್ನುವ ಕೇಂದ್ರ ಸರ್ಕಾರ, ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಯುಪಿಎ ಸರ್ಕಾರದಲ್ಲಿ ಮನ್ ಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ” ಎಂದರು.

ಮೂವರು ಗೆಲ್ಲುತ್ತಾರೆ

ವಿಧಾನ ಪರಿಷತ್ತಿನ ತೆರವಾದ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್, ಎನ್‌ ಎಸ್‌ ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಈ ಮೂರು ಸದಸ್ಯರು ಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಇವರು ಚುನಾವಣೆಯಾದರೂ ಗೆಲ್ಲುತ್ತಾರೆ, ಆಗದಿದ್ದರೂ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತಗಟ್ಟೆ ಧ್ವಂಸ ಮಾಡಿದ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ...

ಮೋದಿಯ ನೆತ್ತಿಗೆ ಸುಪ್ರೀಂ ಕೋರ್ಟ್‌ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಸಿಕ್ತು ಪರಿಹಾರ: ದೇವನೂರು

"ಪ್ರಧಾನಿ ನರೇಂದ್ರ ಮೋದಿಯವರ ನೆತ್ತಿಗೆಗೆ ಸುಪ್ರೀಂಕೋರ್ಟ್ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಕೇಂದ್ರವು ಕರ್ನಾಟಕಕ್ಕೆ...

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....

ಮುಸ್ಲಿಮರ ಮೀಸಲಾತಿ ಬಗ್ಗೆ ಸತ್ಯ ಮರೆಮಾಚಿ ಬಿಜೆಪಿಯಿಂದ ಸುಳ್ಳು ಜಾಹೀರಾತು: ಸಿಎಂ ಸಿದ್ದರಾಮಯ್ಯ

"ಹಿಂದುಳಿದ ವರ್ಗಗಳ ಮೀಸಲಾತಿ(ಒಬಿಸಿ) ಪಟ್ಟಿಗೆ ಮುಸ್ಲಿಮರ ಸೇರ್ಪಡೆಯು ಮಂಡಲ್ ವರದಿಯನ್ನು ಆಧರಿಸಿ...