ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್ 16ರಂದು ಬೀದರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.
ಶನಿವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಸಚಿವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ
‘ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಈ ಪ್ರವಾಸವು ಜಿಲ್ಲೆಯ ಅಭಿವೃದ್ಧಿಗೆ ಹೊಸ ದಿಕ್ಕು ತರುವಂತಾಗಬೇಕು’ ಎಂದು ಹೇಳಿದರು.
‘ಜನತೆಗೆ ನೇರವಾಗಿ ಲಾಭವಾಗುವ ಯೋಜನೆಗಳು ಈ ಪ್ರವಾಸದ ಮೂಲಕ ಯಶಸ್ವಿ ಆಗಬೇಕೆಂಬ ಉದ್ದೇಶದಿಂದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಕ್ರೀಯವಾಗಿ ಹಾಗೂ ಸಂಯೋಜಿತ ರೀತಿಯಲ್ಲಿ ಸಿದ್ಧತೆ ಕೈಗೊಳ್ಳಬೇಕು’ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಏಪ್ರಿಲ್ 16ರಂದು ಬೀದರ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ನವರು ಬೀದರ ಜಿಲ್ಲೆ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ, ಇಂದು ನಾನು ಬೀದರ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ಸಭೆ… pic.twitter.com/UiQ4zEW0Mz
— Eshwar Khandre (@eshwar_khandre) April 5, 2025
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಜಿಲ್ಲಾ ಪಂಚಾಯತ್ ಸಿಇಓ ಡಾ.ಗಿರೀಶ್ ಬದೋಲೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.