ಏಪ್ರಿಲ್.21ರಂದು ಗುಂಡ್ಲುಪೇಟೆಗೆ ಸಿಎಂ ಸಿದ್ದರಾಮಯ್ಯ ಭೇಟಿ

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ₹475 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿಗೆ ಚಾಲನೆ ಸೇರಿದಂತೆ, ಹಲವು ಅಭಿವೃದ್ದಿ ಕಾರ್ಯಗಳ ಉದ್ಘಾಟನೆಯನ್ನು ಇದೇ ಏಪ್ರಿಲ್.21ರಂದು ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.

- Advertisement -

ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಭೇಟಿ, ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್ ಅಧಿಕಾರಿಗಳಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಗುಂಡ್ಲುಪೇಟೆ ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ವಾಲ್ಮೀಕಿ ಭವನ, ಬೇಗೂರು ಎಪಿಎಂಸಿ ಹತ್ತಿ ಮಾರುಕಟ್ಟೆ, ತೆರಕಣಾಂಬಿ ಆಸ್ಪತ್ರೆ ಉದ್ಘಾಟನೆ ಸೇರಿದಂತೆ ಇನ್ನಿತರ ಹಲವು ಅಭಿವೃದ್ದಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದ್ದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಸಂಪುಟದ ಇನ್ನಿತರ ಮಂತ್ರಿಗಳು, ಗಣ್ಯರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅಧಿಕಾರಿಗಳು ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಸಮರ್ಪಕವಾಗಿ ಸಿದ್ದತೆ ಮಾಡಬೇಕೆಂದು ತಿಳಿಸಿದರು.

ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ, ಕ್ರೀಡಾಂಗಣವನ್ನು ಸಜ್ಜುಗೊಳಿಸಬೇಕು, ವೇದಿಕೆ, ಸಾರ್ವಜನಿಕರ ಆಸನ, ಶಾಮಿಯಾನ, ಉಪಹಾರ, ಕುಡಿಯುವ ನೀರು, ಸ್ವಚ್ಚತೆ, ವಾಹನಗಳ ನಿಲುಗಡೆ, ಸಂಚಾರ ದಟ್ಟಣೆ ನಿರ್ವಹಣೆ ಸೇರಿದಂತೆ ಕಾರ್ಯಕ್ರಮಕ್ಕೆ ಪೂರಕವಾಗಿರುವ ಎಲ್ಲ ಏರ್ಪಾಡುಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಶಾಸಕರು ಹಾಗೂ ಜಿಲ್ಲಾಧಿಕಾರಿಯವರು ಸೂಚಿಸಿದರು.

ಇಲಾಖೆ, ನಿಗಮಗಳು ತಮ್ಮ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುವುದಿದ್ದಲ್ಲಿ ಮುಂಚಿತವಾಗಿಯೇ ಮಾಹಿತಿ ನೀಡಿ ಕಾರ್ಯಕ್ರಮದಂದು ವಿತರಣೆಗೆ ಸಿದ್ದತೆ ಮಾಡಿಕೊಳ್ಳಬೇಕು. ಈಗಾಗಲೇ, ಪಟ್ಟಿ ಮಾಡಿಕೊಂಡಿರುವ ಅಭಿವೃದ್ದಿ ಕಾಮಗಾರಿ ಹೊರತುಪಡಿಸಿ ಇಲಾಖೆ ವ್ಯಾಪ್ತಿಗೆ ಸೇರಿದ ಕಟ್ಟಡಗಳು ಪೂರ್ಣಗೊಂಡಿದ್ದಲ್ಲಿ, ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಬೇಕಿದ್ದಲ್ಲಿ ವಿವರವನ್ನು ಸಲ್ಲಿಸಬೇಕು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ವಿರೋಧ; ರೈತ ಸಂಘದಿಂದ ಪ್ರತಿಭಟನೆ

ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಮಿತಿ ರಚಿಸಿ ಹೊಣೆಗಾರಿಕೆ ನೀಡಲಾಗುವುದು. ಆ ಪ್ರಕಾರ ಅಧಿಕಾರಿಗಳು ಕಾರ್ಯೋನ್ಮುಖರಾಗಿ ಸಿದ್ದತೆಗಳ ಬಗ್ಗೆ ಉಸ್ತುವಾರಿ ವಹಿಸಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಯಶಸ್ವಿಗೊಳಸಬೇಕು. ಫಲಾನುಭವಿಗಳಿಗೆ ಸೌಲಭ್ಯ ವಿತರಿಸುವ ಕಾರ್ಯಕ್ರಮವಿದ್ದಲ್ಲಿ ಪೂರ್ಣಪಟ್ಟಿಯನ್ನು ಕಳುಹಿಸಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ಕೆ ಆರ್ ಪೇಟೆ | ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ತಡೆಗಟ್ಟುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರ್ ತನ್ಮಯ್, ಡಿವೈಎಸ್‍ಪಿ ಸ್ನೇಹ ರಾಜ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯಪಾಲಕ ಎಂಜಿನಿಯರ್ ಪ್ರದೀಪ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸುರೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಗುರುಪ್ರಸಾದ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್, ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...

ಬಾಗಲಕೋಟೆ | ಒಂದೇ ದಿನದಲ್ಲಿ ₹8.17 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಶಾಸಕ...

ಚಿಕ್ಕಮಗಳೂರು | ಮಾಜಿ ಸಚಿವ ಡಿ.ಎನ್‌. ಜೀವರಾಜ್: ಕ್ರಿಮಿನಲ್ ಪ್ರಕರಣ ಹೈಕೋರ್ಟ್ ರದ್ದುಪಡಿಸಿದೆ 

ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣ...