ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ; ಕೇಂದ್ರ ಸಚಿವರಿಗೆ ಪತ್ರ

Date:

  • ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಪತ್ರ ಬರೆದು ಒತ್ತಾಯ
  • ‘ಏಮ್ಸ್‌ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಸಿಗಲಿದೆ’

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಏಮ್ಸ್‌ (All India Institute of Medical Sciences) ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್‌ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಏಮ್ಸ್‌ ಸ್ಥಾಪನೆಗೆ ಈ ಭಾಗದ ಜನತೆ ಹಾಗೂ ಜನಪ್ರತಿನಿಧಿಗಳ ಬೇಡಿಕೆ ಹೆಚ್ಚುತ್ತಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆಯ ವಿಷಯವಾಗಿದೆ. ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಕೋರಿದ್ದಾರೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಅವರು ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಅದರಂತೆ ಮುಖ್ಯಮಂತ್ರಿಯವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

ಸಿಎಂ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...