ಬೆಳಗಾವಿ | ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ ಆಚರಿಸಬೇಕು ಎಂದು ಮೊದಲು ಆದೇಶಿಸಿದವರು ನಾವು: ಸಿಎಂ ಸಿದ್ದರಾಮಯ್ಯ

Date:

ಕಿತ್ತೂರು ರಾಣಿ ಚೆನ್ನಮ್ಮ ಉತ್ಸವವನ್ನು ಸರ್ಕಾರ ಆಚರಿಸಬೇಕು ಎಂದು ಮೊದಲು ಆದೇಶಿಸಿದವರು ನಾವು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

- Advertisement -

ಬೆಳಗಾವಿ ಜಿಲ್ಲೆಯ ಕಿತ್ತೂರು ಚೆನ್ನಮ್ಮ 200ನೇ ವಿಜಯೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿ, “ಕಿತ್ತೂರು ರಾಣಿ ಚೆನ್ನಮ್ಮನ ಉತ್ಸವವನ್ನು ಸರ್ಕಾರ ಆಚರಿಸಬೇಕು ಎಂದು ಮೊದಲ ಬಾರಿಗೆ ಆದೇಶಿಸಿದವರು ನಾವು. ಇವತ್ತಿನ‌ ಪೀಳಿಗೆಗೆ ಚೆನ್ನಮ್ಮನ ಇತಿಹಾಸ ಗೊತ್ತಾಗಬೇಕು ಎನ್ನುವ ಕಾರಣದಿಂದ ನಾವು ಈ ನಿರ್ಧಾರ ಮಾಡಿದೆವು. ಇತಿಹಾಸ ಗೊತ್ತಿಲ್ಲದವರು ಇತಿಹಾಸ ನಿರ್ಮಿಸಲಾಗದು ಎನ್ನುವ ಅಂಬೇಡ್ಕರ್ ಅವರ ಮಾತು ನಮಗೆ ಪ್ರೇರಣೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ, ಸಂಗೊಳ್ಳಿ ರಾಯಣ್ಣ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಮುಂತಾದವರ ಹೋರಾಟ ಮತ್ತು ಆಶಯಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಬ್ರಿಟೀಷರಿಗೆ ಸಿಂಹ ಸ್ವಪ್ನವಾಗಿದ್ದ ಹೋರಾಟಗಾರರಿಂದ ದೇಶದ ಜನರನ್ನು ಪ್ರೀತಿಸುವುದನ್ನು ನಾವು ಕಲಿಯಬೇಕು. ದೇಶ ಅಂದರೆ ದೇಶದ ಜನ. ಯಾವುದೇ ಧರ್ಮದವರಿರಲಿ, ಯಾವುದೇ ಜಾತಿಯವರಿರಲಿ ಎಲ್ಲರೂ ನಮ್ಮ ದೇಶದ ಜನ. ದೇಶದ ಜನರನ್ನು ಪ್ರೀತಿಸುವುದೇ ನಿಜವಾದ, ಸರಿಯಾದ ದೇಶಪ್ರೇಮ. ಬಸವಣ್ಣನವರೂ ಇದನ್ನೇ ಹೇಳಿದ್ದರು. ಜಾತಿ, ಧರ್ಮದ ತಾರತಮ್ಯ ಇಲ್ಲದಂತೆ ಮನುಷ್ಯ ಪ್ರೀತಿಯನ್ನು ಸಾರಿದವರು ಬಸವಣ್ಣ. ಹೀಗಾಗಿ ನಮ್ಮ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ ಎಂದರು.

ಜಾತಿ, ಧರ್ಮದ ಅಸಮಾನತೆ ಸಮಾಜದಲ್ಲಿ ಇರುವಷ್ಟೂ ದಿನ ಸಾಮಾಜಿಕ ನ್ಯಾಯ ಬರಲು ಸಾಧ್ಯವಿಲ್ಲ. ಇದು ಸಾಧ್ಯವಾಗಬೇಕಾದರೆ ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಎಲ್ಲಾ ಜಾತಿ, ಧರ್ಮ, ಎಲ್ಲಾ ವರ್ಗದವರಿಗೂ ಸಿಗಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ದುಬೈನಲ್ಲಿ ಹೊಸ ಸಂಚಾರಿ ನಿಯಮ | ರೂಲ್ಸ್ ಬ್ರೇಕ್ ಮಾಡಿದರೆ 30 ದಿನ ವಾಹನ ಸೀಝ್!

ದೇಶದ ಜನರನ್ನು ಪ್ರೀತಿಸಿ, ದೇಶದ ಜನರ ಸ್ವಾತಂತ್ರ್ಯ ರಕ್ಷಣೆಗಾಗಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರಾಣತ್ಯಾಗ ಮಾಡಿದ್ದಾರೆ. ಇದು ಅತ್ಯುನ್ನತವಾದ ತ್ಯಾಗ. ಇದನ್ನು ನಾವು, ನೀವು, ಇವತ್ತಿನ‌ ಪೀಳಿಗೆ ಪಾಲಿಸಬೇಕು ಎಂದು ಸಿಎಂ ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...