ಈದಿನ ವರದಿಗೆ ಸ್ಪಂದಿಸಿದ ಸಿಎಂ ಕಚೇರಿ : ಸ್ವಚ್ಛವಾದ ಬೀದರ್‌ನ ʼಪಾಪನಾಶ ಕೆರೆʼ

Date:

Advertisements

ಬೀದರ್‌ ನಗರದ ಪಾಪನಾಶ ಕೆರೆಯನ್ನು ನಗರಸಭೆ ಸಿಬ್ಬಂದಿ ಸಂಪೂರ್ಣ ಸ್ವಚ್ಛಗೊಳಿಸಿದರು.

ʼಪಾಪನಾಶ ಕೆರೆಗೆ ಕಲುಷಿತ ನೀರು : ಮೀನುಗಳ ಸಾವು‌ʼ ಎಂಬ ಶೀರ್ಷಿಕೆ ಅಡಿ ʼಈದಿನ.ಕಾಮ್‌ʼ ಬುಧವಾರ (ಫೆ.19) ರಂದು ವಿಶೇಷ ವರದಿ ಪ್ರಕಟಿಸಿತ್ತು. ವರದಿ ಪರಿಣಾಮ ಎಚ್ಚೆತುಕೊಂಡ ನಗರಸಭೆ ಆಯುಕ್ತ ಶಿವರಾಜ ರಾಠೋಡ್‌ ಅವರು ವರದಿಯಾದ ಗಂಟೆಯೊಳಗೆ ಪೌರಕಾರ್ಮಿಕರನ್ನು ಸ್ಥಳಕ್ಕೆ ಕಳುಹಿಸಿ ಕೆರೆಯಲ್ಲಿ ಶೇಖರಣೆಯಾದ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಂಡಿದ್ದಾರೆ.

ನಗರಸಭೆ ವತಿಯಿಂದ ವಾರಕ್ಕೊಮ್ಮೆ ಪಾಪನಾಶ ಕೆರೆ ಸ್ವಚ್ಛಗೊಳಿಸಲಾಗುತ್ತಿದೆ. ಪಾಪನಾಶಿನಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೂ, ಹಣ್ಣು, ಬಾಳೆದಿಂಡು, ಕಬ್ಬು ಹಾಗೂ ಅಲಂಕಾರಿಕ ವಸ್ತುಗಳನ್ನು ಕೆರೆಯಂಗಳದಲ್ಲಿ ಚೆಲ್ಲಿದ ಪರಿಣಾಮ ಮೀನುಗಳು ಸಾವನ್ನಪ್ಪಿದ್ದು, ಈ ಸ್ಥಳವನ್ನು ಪರಿಶೀಲಿಸಿ ವರದಿ ನೀಡುವಂತೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆʼ ಎಂದು ಪೌರಾಯುಕ್ತ ಶಿವರಾಜ್‌ ರಾಠೋಡ್‌ ಅವರು ಸಿಎಂ ಕಚೇರಿಯ ವಿಶೇಷ ಕರ್ತವ್ಯಾಧಿಕಾರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Advertisements
WhatsApp Image 2025 02 19 at 7.54.34 PM

ʼಐತಿಹಾಸಿಕ ಪಾಪನಾಶಿನಿ ಶಿವಲಿಂಗ ದೇವಸ್ಥಾನದ ಬಳಿಯ ಪಾಪನಾಶ ಕೆರೆಗೆ ಕಲುಷಿತ ನೀರು ಹರಿದು ಅಪಾರ ಸಂಖ್ಯೆಯ ಮೀನುಗಳು ಸಾವನ್ನಪ್ಪಿವೆ. ಇದರಿಂದ ಕೆರೆ ಸುತ್ತಲೂ ದುರ್ವಾವಾಸನೆ ಬರುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕೆರೆ ಸಂರಕ್ಷಣೆಗೆ ಮುಂದಾಗಬೇಕುʼ ಎಂದು ಪರಿಸರ ಪ್ರೇಮಿಗಳು ಆಗ್ರಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಾಪನಾಶ ಕೆರೆಗೆ ಕಲುಷಿತ ನೀರು : ಮೀನುಗಳ ಸಾವು

ಈ ಕುರಿತು ʼಈದಿನ.ಕಾಮ್‌ ʼ ಸಚಿತ್ರ, ವಿಡಿಯೊ ಸಮೇತ ವಿವರವಾಗಿ ಸುದ್ದಿ ಪ್ರಕಟಿಸಿ ಸಿಎಂ ಕಚೇರಿಯ ʼಎಕ್ಸ್‌ʼ ಖಾತೆಗೆ ಟ್ಯಾಗ್‌ ಮಾಡಲಾಗಿತ್ತು. ವರದಿಯ ಹಿನ್ನೆಲೆ ಸ್ಪಂದಿಸಿದ ಮುಖ್ಯಮಂತ್ರಿಗಳ ಕಾರ್ಯಾಲಯದ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಅವರು ಈ ಬಗ್ಗೆ ತಕ್ಷಣವೇ ಕ್ರಮಕೈಗೊಂಡು ಅನುಪಾಲನಾ ವರದಿ ನೀಡುವಂತೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ನಗರಸಭೆ ಅಧಿಕಾರಿಗಳು ಸಿಬ್ಬಂದಿಯಿಂದ ಕೆರೆ ಸ್ವಚ್ಛಗೊಳಿಸಿ ಪೋಟೊಗಳೊಂದಿಗೆ ವರದಿ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. This is to bring it to your notice that we are residing at KIADB layout in which it is noticed that road condition is in very bad condition, it is too dusty and full of big pits from Aliyabad Ambedkar circle to Chauli Mahadwar. Kindly bring it to concerned authority as early as possible, so people can feel comfortable and take healthy breath otherwise which effect the health of the people.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X