ಸಿಎಂ ವಿಶೇಷ ಅನುದಾನ; ಸಂಪಾಜೆ ಗ್ರಾಮಕ್ಕೆ ರಸ್ತೆಗಳ ಭಾಗ್ಯ!

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿಶೇಷ ಅನುದಾನದಿಂದ ಮಡಿಕೇರಿ ತಾಲೂಕಿನ ಸಂಪಾಜೆ ಗ್ರಾಮದ ಚಟ್ಟೆಕಲ್ಲು, ಮುಂಡಡ್ಕ, ದಂಡೆಕಜೆ ರಸ್ತೆಗಳಿಗೆ ಕಾಂಕ್ರೀಟ್‌ ಭಾಗ್ಯ ಲಭಿಸಿದೆ.

- Advertisement -

ಕಾಂಕ್ರಿಟ್ ಕಾಮಗಾರಿಗೆ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪಾಜೆ ಗ್ರಾಮಕ್ಕೆ ವಿಶೇಷ ಅನುದಾನದಲ್ಲಿ 1 ಕೋಟಿ ರೂಪಾಯಿ ಅನುದಾನ ನೀಡಿದ್ದು, ಈ ಭಾಗದ 3 ರಸ್ತೆಗಳಿಗೆ 35 ಲಕ್ಷ ಅನುದಾನ ಮೀಸಲಿರಿಸಿದ್ದೇವೆ. ಅಲ್ಲದೆ ಈ ಭಾಗದ ಚಟ್ಟೆಕಲ್ಲು ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ 20 ಲಕ್ಷ ಅನುದಾನ ಮೀಸಲಿಸಲಾಗಿದೆ. ಈ ಕಾಮಗಾರಿಗೆ ಅಲ್ಪಸಂಖ್ಯತ ಕಲ್ಯಾಣ ಯೋಜನೆಯಡಿ ಅನುದಾನ ಮಂಜೂರಾಗಿದ್ದು, ಶಾಸಕರು ಯಾವುದೇ ವಿಳಂಬ ಮಾಡದೇ ಅನುದಾನ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಂಜುನಾಥ್ ಭಂಡಾರಿ, ಹರೀಶ್ ಕುಮಾರ್, ಐವನ್ ಡಿಸೋಜ, ನಸೀರ್ ಅಹ್ಮದ್ ರವರ ವಿಶೇಷ ಅನುದಾನ ನಮ್ಮ ಗ್ರಾಮಕ್ಕೆ ದೊರಕಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಇನ್ನೂ ಹೆಚ್ಚಿನ ಅನುದಾನ ಕೊಡುವ ಭರವಸೆ ನೀಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗ್ರಾಮದ ಅಭಿವೃದ್ಧಿಯಿಂದ ಬಡತನ ನಿರ್ಮೂಲನ ಆಗಲಿದೆ. ಸಿದ್ದರಾಮಯ್ಯ ಸರಕಾರದ ಸಹಾಯ ರಾಜ್ಯದ ಪ್ರತೀ ಮನೆಗೂ ತಲುಪಿದೆ ಎಂದು ಸಿದ್ದರಾಮಯ್ಯ ಸರಕಾರವನ್ನು ಅಭಿನಂದಿಸಿದರು.

ಇದನ್ನೂ ಓದಿ: ಕೊಡಗು | ಮಾನಸಿಕ ಸಮತೋಲನಕ್ಕೆ ಕ್ರೀಡಾಭ್ಯಾಸ ಅತ್ಯಗತ್ಯ : ಶಾಸಕ ಎ ಎಸ್ ಪೊನ್ನಣ್ಣ

ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು, ಉಪಾಧ್ಯಕ್ಷ ಎಸ್ ಕೆ ಹನೀಫ್, ಮಾಜಿ ಅಧ್ಯಕ್ಷ ಹಾಲಿ ಸದಸ್ಯರುಗಳಾದ ಜಿ ಕೆ ಹಮೀದ್ ಗೂನಡ್ಕ, ಸುಂದರಿ ಮುಂಡಡ್ಕ, ಜಗದೀಶ್ ರೈ, ಲಿಸ್ಸಿ ಮೊನಾಲಿಸಾ, ರಜನಿ ಶರತ್, ವಿಮಲಾ ಪ್ರಸಾದ್, ಅನುಪಮ, ವಿಜಯ ಕುಮಾರ್, ಸೊಸೈಟಿ ಉಪಾಧ್ಯಕ್ಷೆ ಬಿ ಎಸ್ ಯಮುನಾ, ನಿರ್ದೇಶಕ ಗಣಪತಿ ಭಟ್, ಮಾಜಿ ಪಂಚಾಯತ್ ಸದಸ್ಯರುಗಳಾದ ಜಿ ರಾಮಚಂದ್ರ, ನಾಗೇಶ ಪಿ ಆರ್, ತಾಜ್ ಮಹಮ್ಮದ್ ಸಂಪಾಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಫಯಾಜ್ ಹಾಗೂ ಸಹಾಯಕ ಇಂಜಿನಿಯರ್ ಮಣಿಕಂಠ, ನಿವೃತ್ತ ಪೋಸ್ಟ್ ಮಾಸ್ಟರ್ ಎಸ್ ಪಿ ಲೋಕನಾಥ್, ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಧರ್, ನಿವೃತ್ತ ಅಗ್ನಿ ಶಾಮಕ ದಳದ ಇನ್ಸ್ಪೆಕ್ಟರ್ ರಾಜಗೋಪಾಲ್, ನಿವೃತ್ತ ಆರ್ಮಿ ಅಧಿಕಾರಿ ವಾಸುದೇವ ಕಟ್ಟಮನೆ, ನಿವೃತ್ತ ಇಂಜಿನಿಯರ್ ಸುಬ್ರಮಣ್ಯ, ಕಂಟ್ರಾಕ್ಟರ್ ವಿ ವಿ ಬಾಲನ್, ಸಂಪಾಜೆ ವಲಯ ಕಾಂಗ್ರೆಸ್ ಉಪಾಧ್ಯಕ್ಷ ಕೆ ಎಂ ಅಶ್ರಫ್, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಕ್ರೈಸ್ತ ಸಮುದಾಯದ ಸಂಘದ ಅಧ್ಯಕ್ಷ ಸಂತೋಷ್ ಕ್ರಾಸ್ತಾ, ಬೂತ್ ಸಮಿತಿ ಅಧ್ಯಕ್ಷ ಮಹಮ್ಮದ್ ಕುಂಞಿ (ಉಪ್ಪಿ), ಸಲೀಂ ಪೆರುಂಗೊಡಿ, ಲೋಕೇಶ್ ಬಾಚಿಗದ್ದೆ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಕಾಂತಿ ಬಿ ಎಸ್, ಅಂಗನವಾಡಿ ಕಾರ್ಯಕರ್ತೆ ಹರ್ಷಿತಾ ಕುಮಾರಿ, ಸಂಜೀವ ಪೂಜಾರಿ ಭೋಜ, ಪುಟ್ಟಣ್ಣ, ಸುರೇಶ್ ಕಡಿಕಡ್ಕ ನಿವೃತ್ತ ಪೊಲೀಸ್ ಅಧಿಕಾರಿ ಮಾಧವ ಗೌಡ, ಪ್ರಶಾಂತ್ ವಿ ವಿ, ರಜಾಕ್ ಕೆ ಎ, ಹಸೈನಾರ್ ಚಟ್ಟೆಕಲ್ಲು, ಇರ್ಷಾದ್ ಕಲ್ಲುಗುಂಡಿ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಹನೀಫ್ ಚಟ್ಟೆಕಲ್ಲು, ಒಡಿಯೂರು ಸಂಘದ ಪ್ರೇರಕಿ ರತ್ನಾವತಿ, ವಾಣಿ, ಸೂದಾ ರಫೀಕ್ ಕರಾವಳಿ, ಅಬೂಬಕ್ಕರ್, ಡ್ರೈವರ್ ಅಶ್ರಫ್, ಹಾಜಿ ಸಂಟ್ಯಾರ್ ಅಬ್ಬಾಸ್ ಕೆ ಕೆ, ಜಿ ಕೆ ಹಮೀದ್ ಗೂನಡ್ಕ, ಎಸ್ ಕೆ ಹನೀಫ್ ಸಂಪಾಜೆ ಹಾಗೂ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...